ಬುಡಕಟ್ಟು ಜನರಿಗೆ ಸರ್ಕಾರದಿಂದ ಪಡಿತರ ಹಂಚಿಕೆ
ಬೆಂಗಳೂರು, ಅ.7 : ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಗಿರಿಜನರು ಹಾಗೂ ಬುಡಕಟ್ಟು ಜನರಿಗೆ ಮಳೆಗಾಲ ಸೇರಿದಂತೆ ವರ್ಷದ ಆರು ತಿಂಗಳು ಪೌಷ್ಠಿಕ ಆಹಾರ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. 30 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜ ನಗರ ಜಿಲ್ಲೆಗಳ ಗಿರಿಜನರು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.
ವಿಧಾನಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು, ಈ ಯೋಜನೆಗಾಗಿ 30 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು. ಅರಣ್ಯ ಪ್ರದೇಶಗಳಲ್ಲಿ ತೀವ್ರ ಮಳೆಗಾಲ ಸೇರಿದಂತೆ ವರ್ಷದ ಆರು ತಿಂಗಳು ಆಹಾರದ ಕೊರತೆ ನಿರ್ಮಾಣವಾಗುತ್ತದೆ. ಆದ್ದರಿಂದ ಈ ಸಂದರ್ಭದಲ್ಲಿ ಪೌಷ್ಠಿಕ ಆಹಾರ ನೀಡಲು ಯೋಜನೆ ಜಾರಿಗೊಳಿಸಲಾಗಿದೆ ಎಂದರು.

ಈ ಯೋಜನೆಯ ಅನ್ವಯ ಅರಣ್ಯವಾಸಿಗಳಿಗೆ ಪ್ರತಿ ತಿಂಗಳು 30 ಕೆ.ಜಿ. ಅಕ್ಕಿ, 2 ಲೀಟರ್ ಎಣ್ಣೆ, 2 ಕೆ.ಜಿ. ಬೇಳೆ, 5 ಕೆ.ಜಿ. ಸಕ್ಕರೆ ವಿತರಣೆ ಮಾಡಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜ ನಗರ ಜಿಲ್ಲೆಗಳ ಗಿರಿಜನರು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಇವುಗಳಲ್ಲದೇ ಅರಣ್ಯದಲ್ಲಿ ವಾಸಿಸುತ್ತಿರುವ ಹಾಗೂ ನಾಗರಿಕ ಬದುಕಿನಿಂದ ದೂರವಿರುವ ಈ ಜನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಸಚಿವರು ತಿಳಿಸಿದರು.
ವಿದ್ಯಾರ್ಥಿ ನಿಲಯ ಸ್ಥಾಪನೆ : ಪರಿಶಿಷ್ಟ ಪಂಗಡದವರ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಈ ವರ್ಷ 4515 ಕೋಟಿ ರೂ. ಮೀಸಲಿಡಲಾಗಿದೆ. ಪಂಗಡದ ವಿದ್ಯಾರ್ಥಿಗಳಿಗೆ 28 ಮೆಟ್ರಿಕ್ ನಂತರದ ವಿದ್ಯಾರ್ಥಿ ನಿಲಯ ಹಾಗೂ 4 ಮೆಟ್ರಿಕ್ ಪೂರ್ವ ವಿದ್ಯಾರ್ಥಿ ನಿಲಯ ಆರಂಭಿಸಲಾಗುವುದು ಎಂದು ಸಚಿವ ಆಂಜನೇಯ ಅವರು ಹೇಳಿದರು.
-
Ramya: ಬೀದಿ ನಾಯಿಗಳ ಮೇಲಿನ ಕ್ರೌರ್ಯಕ್ಕೆ ನಟಿ ರಮ್ಯಾ ಕಣ್ಣೀರು: ಬೆಂಗಳೂರಿನ ಫ್ರೀಡಂಪಾರ್ಕ್ ಪ್ರತಿಭಟನೆಯಲ್ಲಿ ಭಾಗಿ -
Popular Indian Foods: ಈ 5 ಆಹಾರಗಳು ನಿಮ್ಮ ಆರೋಗ್ಯಕ್ಕೆ ಅಪಾಯಕಾರಿಗಳು! -
Ankita Jayaram: ನಟನೆಯ ನಡುವೆಯೂ ದ್ವಿತೀಯ ಪಿಯುಸಿಯಲ್ಲಿ ಕರ್ಣ ಧಾರಾವಾಹಿ ಖ್ಯಾತಿಯ ನಟಿ ಅಂಕಿತಾ ಜಯರಾಮ್ ಅಮೋಘ ಸಾಧನೆ -
Karnataka Weather: ಕರ್ನಾಟಕದ 4 ಜಿಲ್ಲೆಗಳಲ್ಲಿ ಮಳೆ - ವಿವಿಧ ಭಾಗಗಳಲ್ಲಿ ಭಾರೀ ಬಿಸಿಲು, ಕರ್ನಾಟಕದ ಹವಾಮಾನ ವರದಿ -
April 10 Horoscope: 12 ರಾಶಿಗಳಿಗೆ ಇಂದು ಆರೋಗ್ಯ, ಹಣಕಾಸು ಮತ್ತು ಪ್ರೇಮದಲ್ಲಿ ಮಿಶ್ರ ಫಲ -
ಬೆಂಗಳೂರು ನಾಯಂಡಳ್ಳಿಯಲ್ಲಿ ಮನೆಯ ಮೊದಲ ಮಹಡಿಯಿಂದ ಬಿದ್ದ ಒಂದೂವರೆ ವರ್ಷದ ಕಂದಮ್ಮ -
SSLC Hindi: ಅಂಕ ಬದಲು ಗ್ರೇಡಿಂಗ್ ವಿರೋಧಿಸಿ ಅರ್ಜಿ ಸಲ್ಲಿಸಿದ ಅರ್ಜಿದಾರರಿಗೆ 1 ಲಕ್ಷ ರೂ. ದಂಡ: ಕರವೇ ಹೇಳಿದ್ದೇನು -
ಚಿಕ್ಕಮಗಳೂರಲ್ಲಿ ನಾಪತ್ತೆಯಾಗಿದ್ದ ಕೇರಳದ ಬಾಲಕಿ ಶ್ರಿನಂದಾ ಸಾವು: 2 ಸಾವಿರ ಅಡಿ ಪ್ರಪಾತದಲ್ಲಿ ಶವ ಪತ್ತೆ -
Copra: ತಿಪಟೂರು ಎಪಿಎಂಸಿ ಮಾರುಕಟ್ಟೆಯಲ್ಲಿ ಮತ್ತೆ ದಾಖಲೆ ಬೆಲೆಗೆ ಮಾರಾಟವಾದ ಕೊಬ್ಬರಿ: ನಿರ್ಮಾಣವಾಯ್ತು ಹೊಸ ಇತಿಹಾಸ -
Mona Lisa: ಮಹಾಕುಂಭ ಮೇಳದ ಫೇಮಸ್ ಮೊನಾಲಿಸಾ ಪತಿಗೆ ಕಾನೂನು ಸಂಕಷ್ಟ: ಫರ್ಮಾನ್ ಖಾನ್ ಮೇಲೆ ಪೋಕ್ಸೋ ಪ್ರಕರಣ -
2nd PUC: ಬೆಂಗಳೂರು - ಪಿಯುಸಿಯಲ್ಲಿ ಅತ್ಯುನ್ನತ ಶ್ರೇಣಿಯಲ್ಲಿ ಉತ್ತೀರ್ಣರಾದ 260 ವಿದ್ಯಾರ್ಥಿಗಳಿಗೆ 35,000 ರೂ. -
RBI New Rule: ಇನ್ಮುಂದೆ ಆನ್ಲೈನ್ ವಹಿವಾಟಿನಲ್ಲಿ ದೊಡ್ಡ ಬದಲಾವಣೆ: 10,000 ರೂ. ಹಣ ವರ್ಗಾವಣೆಗೂ ಹೊಸ ನಿಯಮ












Click it and Unblock the Notifications