ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಬುಡಕಟ್ಟು ಜನರಿಗೆ ಸರ್ಕಾರದಿಂದ ಪಡಿತರ ಹಂಚಿಕೆ

|
Google Oneindia Kannada News

ಬೆಂಗಳೂರು, ಅ.7 : ಅರಣ್ಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ಗಿರಿಜನರು ಹಾಗೂ ಬುಡಕಟ್ಟು ಜನರಿಗೆ ಮಳೆಗಾಲ ಸೇರಿದಂತೆ ವರ್ಷದ ಆರು ತಿಂಗಳು ಪೌಷ್ಠಿಕ ಆಹಾರ ನೀಡುವ ಯೋಜನೆಯನ್ನು ಸರ್ಕಾರ ಜಾರಿಗೆ ತಂದಿದೆ. 30 ಕೋಟಿ ವೆಚ್ಚದಲ್ಲಿ ಈ ಯೋಜನೆಯನ್ನು ಜಾರಿಗೆ ತರಲಾಗಿದ್ದು, ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜ ನಗರ ಜಿಲ್ಲೆಗಳ ಗಿರಿಜನರು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ.

ವಿಧಾನಸೌಧದಲ್ಲಿ ಸೋಮವಾರ ಪತ್ರಿಕಾಗೋಷ್ಠಿ ನಡೆಸಿದ ಸಮಾಜ ಕಲ್ಯಾಣ ಸಚಿವ ಎಚ್.ಆಂಜನೇಯ ಅವರು, ಈ ಯೋಜನೆಗಾಗಿ 30 ಕೋಟಿ ರೂ.ವೆಚ್ಚ ಮಾಡಲಾಗುತ್ತಿದೆ ಎಂದು ಹೇಳಿದರು. ಅರಣ್ಯ ಪ್ರದೇಶಗಳಲ್ಲಿ ತೀವ್ರ ಮಳೆಗಾಲ ಸೇರಿದಂತೆ ವರ್ಷದ ಆರು ತಿಂಗಳು ಆಹಾರದ ಕೊರತೆ ನಿರ್ಮಾಣವಾಗುತ್ತದೆ. ಆದ್ದರಿಂದ ಈ ಸಂದರ್ಭದಲ್ಲಿ ಪೌಷ್ಠಿಕ ಆಹಾರ ನೀಡಲು ಯೋಜನೆ ಜಾರಿಗೊಳಿಸಲಾಗಿದೆ ಎಂದರು.

H. Anjaneya

ಈ ಯೋಜನೆಯ ಅನ್ವಯ ಅರಣ್ಯವಾಸಿಗಳಿಗೆ ಪ್ರತಿ ತಿಂಗಳು 30 ಕೆ.ಜಿ. ಅಕ್ಕಿ, 2 ಲೀಟರ್‌ ಎಣ್ಣೆ, 2 ಕೆ.ಜಿ. ಬೇಳೆ, 5 ಕೆ.ಜಿ. ಸಕ್ಕರೆ ವಿತರಣೆ ಮಾಡಲಾಗುತ್ತದೆ. ದಕ್ಷಿಣ ಕನ್ನಡ, ಉಡುಪಿ, ಕೊಡಗು, ಮೈಸೂರು, ಚಾಮರಾಜ ನಗರ ಜಿಲ್ಲೆಗಳ ಗಿರಿಜನರು ಯೋಜನೆಯ ಪ್ರಯೋಜನ ಪಡೆಯಲಿದ್ದಾರೆ. ಇವುಗಳಲ್ಲದೇ ಅರಣ್ಯದಲ್ಲಿ ವಾಸಿಸುತ್ತಿರುವ ಹಾಗೂ ನಾಗರಿಕ ಬದುಕಿನಿಂದ ದೂರವಿರುವ ಈ ಜನರನ್ನು ಸಮಾಜದ ಮುಖ್ಯವಾಹಿನಿಗೆ ಕರೆತರುವ ಸಂಕಲ್ಪವನ್ನು ರಾಜ್ಯ ಸರ್ಕಾರ ಮಾಡಿದೆ ಎಂದು ಸಚಿವರು ತಿಳಿಸಿದರು.

ವಿದ್ಯಾರ್ಥಿ ನಿಲಯ ಸ್ಥಾಪನೆ : ಪರಿಶಿಷ್ಟ ಪಂಗಡದವರ ಸಾಮಾಜಿಕ ಮತ್ತು ಶೈಕ್ಷಣಿಕ ಅಭಿವೃದ್ಧಿಗೆ ಈ ವರ್ಷ 4515 ಕೋಟಿ ರೂ. ಮೀಸಲಿಡಲಾಗಿದೆ. ಪಂಗಡದ ವಿದ್ಯಾರ್ಥಿಗಳಿಗೆ 28 ಮೆಟ್ರಿಕ್‌ ನಂತರದ ವಿದ್ಯಾರ್ಥಿ ನಿಲಯ ಹಾಗೂ 4 ಮೆಟ್ರಿಕ್‌ ಪೂರ್ವ ವಿದ್ಯಾರ್ಥಿ ನಿಲಯ ಆರಂಭಿಸಲಾಗುವುದು ಎಂದು ಸಚಿವ ಆಂಜನೇಯ ಅವರು ಹೇಳಿದರು.

English summary
To ensure that tribal people living in forests are not deprived of food during the rainy season, the government has been supplying food, including 30 kg of rice and 30 eggs, each month to each family for free said, Social Welfare Minister H. Anjaneya.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X