Turkey earthquake: ಟರ್ಕಿ, ಸಿರಿಯಾದ ಭೂಕಂಪದಲ್ಲಿ ಸಿಲುಕಿರುವ ಕನ್ನಡಿಗರ ಮಾಹಿತಿಗಾಗಿ ಸಹಾಯವಾಣಿ; ಸಿಎಂ
ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಮತ್ತು ಸಿರಿಯಾದಲ್ಲಿರುವ ಕನ್ನಡಿಗರ ಮಾಹಿತಗಾಗಿ ಶೀಘ್ರದಲ್ಲೇ ವಿಶೇಷ ಸಹಾಯವಾಣಿ ಆರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಬೆಂಗಳೂರು, ಫೆಬ್ರವರಿ. 07: ಪ್ರಬಲ ಭೂಕಂಪಕ್ಕೆ ತುತ್ತಾಗಿರುವ ಟರ್ಕಿ ಮತ್ತು ಸಿರಿಯಾದಲ್ಲಿರುವ ರಾಜ್ಯದ ಜನರಿಗಾಗಿ ವಿಶೇಷ ಸಹಾಯವಾಣಿಯನ್ನು ಶೀಘ್ರದಲ್ಲೇ ಆರಂಭಿಸುವುದಾಗಿ ಸಿಎಂ ಬಸವರಾಜ ಬೊಮ್ಮಾಯಿ ಹೇಳಿದ್ದಾರೆ.
ಸೋಮವಾರ ತೀವ್ರ ಭೂಕಂಪಕ್ಕೆ ಒಳಗಾಗಿರುವ ಟರ್ಕಿ ಮತ್ತು ಸಿರಿಯಾದಲ್ಲಿ ಈವರೆಗೂ ಐದು ಸಾವಿರಕ್ಕೂ ಹೆಚ್ಚು ಜನ ಬಲಿಯಾಗಿದ್ದಾರೆ. ಅಲ್ಲಿರುವ ರಾಜ್ಯದ ಜನರ ಬಗ್ಗೆ ಆತಂಕ ಹೆಚ್ಚಾಗಿದ್ದು, ಈ ಹಿನ್ನೆಲೆ ಕನ್ನಡಿಗರ ಮಾಹಿತಿಯನ್ನು ಪಡೆಯಲು ಸರ್ಕಾರ ಈಗಾಗಲೇ ಭಾರತೀಯ ರಾಯಭಾರಿ ಕಚೇರಿಗಳೊಂದಿಗೆ ಸಂಪರ್ಕದಲ್ಲಿದೆ. ಆದಷ್ಟು ಬೇಗ ಸಹಾಯವಾಣಿ ಪ್ರಾರಂಭಿಸುವುದಾಗಿ ತಿಳಿಸಿದ್ದಾರೆ.
"ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ.
— CM of Karnataka (@CMofKarnataka) February 7, 2023
1/2 pic.twitter.com/C1l92Or2nC
ಈ ಕುರಿತು ಟ್ವೀಟ್ ಮಾಡಿರುವ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ, "ಟರ್ಕಿ ಹಾಗೂ ಸಿರಿಯಾದಲ್ಲಿ ಸಂಭವಿಸಿದ ವಿನಾಶಕಾರಿ ಭೂಕಂಪದ ಕುರಿತು ರಾಜ್ಯಸರ್ಕಾರ ವಿದೇಶಾಂಗ ಸಚಿವಾಲಯದ ಜೊತೆ ಸಂಪರ್ಕಲ್ಲಿದೆ. ಅಲ್ಲಿರುವ ಭಾರತೀಯರ ಹಾಗೂ ಕನ್ನಡಿಗರ ಕುರಿತು ಮಾಹಿತಿಗಾಗಿ ವಿಶೇಷ ಸಹಾಯ ವಾಣಿಯಯನ್ನು ವಿದೇಶಾಂಗ ಸಚಿವಾಲಯ ಹಾಗೂ ರಾಜ್ಯಸರ್ಕಾರ ಶೀಘ್ರದಲ್ಲೇ ಸ್ಥಾಪಿಸಲಿದೆ" ಎಂದಿದ್ದಾರೆ.

ಮತ್ತೊಂದು ಟ್ವೀಟ್‌ನಲ್ಲಿ "ಅಲ್ಲಿರುವ ಕನ್ನಡಿಗರಿಗೆ ನೆರವಾಗಲು, ಅವರ ಕುರಿತು ಮಾಹಿತಿಯನ್ನು ಸರ್ಕಾರದ ಜೊತೆ ಹಂಚಿಕೊಳ್ಳುವಂತೆ ಅವರ ಸಂಬಂಧಿಕರ ಬಳಿ ಮನವಿ ಮಾಡುತ್ತೇನೆ" ಎಂದು ಮಾಹಿತಿ ಹಂಚಿಕೊಳ್ಳಲು ಮನವಿ ಮಾಡಿದ್ದಾರೆ.
ಟರ್ಕಿಯಲ್ಲಿ ಸೋಮವಾರ 7.8 ರ ತೀವ್ರತೆಯ ಭೂಕಂಪವು 4,000 ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿತ್ತು. ಇದಾದ ನಂತರ 7.6 ರ ತೀವ್ರತೆಯ ಮತ್ತೊಂದು ಪ್ರಬಲ ಭೂಕಂಪ ಸಂಭವಿಸಿದ್ದು ಸಾವು ನೋವುಗಳು ಅಧಿಕವಾಗಿವೆ. ಬೆಳಗಿನ ಜಾವ ಟರ್ಕಿ ಮತ್ತು ಸಿರಿಯಾದಲ್ಲಿ 7.8 ತೀವ್ರತೆಯ ಭೂಕಂಪ ಸಂಭವಿಸಿದ್ದು 1300 ಕ್ಕೂ ಹೆಚ್ಚು ಜನರನ್ನು ಬಲಿತೆಗೆದುಕೊಂಡಿವೆ.
ಟರ್ಕಿ ಮತ್ತು ನೆರೆಯ ಸಿರಿಯಾದಲ್ಲಿ ಸಾವಿರಾರು ಕಟ್ಟಡಗಳನ್ನು ನೆಲಸಮಗೊಂಡಿವೆ. ಸಾವಿರಾರು ಮಂದಿ ನಿರಾಶ್ರಿತರಾಗಿದ್ದಾರೆ. ಭಾರತ ಸೇರಿದಂತೆ ಅನೇಕ ದೇಶಗಳು ಸಹಾಯಹಸ್ತ ಚಾಚಿವೆ. ಭಾರತದಿಂದ ರಾಷ್ಟ್ರೀಯ ವಿಪತ್ತು ನಿರ್ವಹಣಾ ಪಡೆ (ಎನ್‌ಡಿಆರ್‌ಎಫ್) ತಂಡ ಮಂಗಳವಾರ ಟರ್ಕಿಗೆ ತೆರಳಿ ಅಲ್ಲಿನ ಪರಿಹಾರ ಮತ್ತು ರಕ್ಷಣಾ ಕಾರ್ಯಾಚರಣೆಯಲ್ಲಿ ತೊಡಗಿಕೊಂಡಿವೆ.












Click it and Unblock the Notifications