ರೋಹಿಣಿ ಸಿಂಧೂರಿ ಸೇರಿ 5 ಅಧಿಕಾರಿಗಳ ವರ್ಗಾವಣೆ ಆದೇಶ ರದ್ದು

Posted By:
Subscribe to Oneindia Kannada

ಬೆಂಗಳೂರು, ಮಾರ್ಚ್ 07: ವಿವಾದ ಎಬ್ಬಿಸಿದ್ದ ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ಸೇರಿ ಇನ್ನೂ ಐವರು ಐಎಎಸ್‌ ಅಧಿಕಾರಿಗಳ ವರ್ಗಾವಣೆ ಆದೇಶವನ್ನು ರಾಜ್ಯ ಸರ್ಕಾರ ಹಿಂದಕ್ಕೆ ಪಡೆದಿದೆ.

ರೋಹಿಣಿ ಸಿಂಧೂರಿ ಸೇರಿ ರಾಜ್ಯದ 5 ಅಧಿಕಾರಿಗಳನ್ನು ವರ್ಗಾವಣೆ ಮಾಡಿ ಜನವರಿ 22 ರಂದು ರಾಜ್ಯ ಸರ್ಕಾರ ಆದೇಶ ಹೊರಡಿಸಿತ್ತು. ಆದರೆ ಈ ವರ್ಗಾವಣೆ ಬಗ್ಗೆ ಚುನಾವಣಾಧಿಕಾರಿ ಅವರು ಅಸಮಧಾನ ವ್ಯಕ್ತಪಡಿಸಿ ರಾಜ್ಯ ಸರ್ಕಾರಕ್ಕೆ ಪತ್ರ ಬರೆದಿದ್ದರು.

ಹಾಸನ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ

ಹಾಸನದ ಜಿಲ್ಲಾಧಿಕಾರಿ ರೋಹಿಣಿ ಸಿಂಧೂರಿ ವರ್ಗಾವಣೆ ಹಿನ್ನೆಲೆ ಬಿಜೆಪಿ ಮತ್ತು ಜೆಡಿಎಸ್ ರಾಜ್ಯಸರ್ಕಾರದ ವಿರುದ್ಧ ಪ್ರತಿಭಟನೆಯನ್ನೂ ಮಾಡಿದ್ದವು. ಹಾಸನ ಉಸ್ತುವಾರಿ ಸಚಿವ ಎ.ಮಂಜು ಅವರಿಗಾಗಿ ರೋಹಿಣಿ ಅವರನ್ನು ವರ್ಗಾವಣೆ ಮಾಡಲಾಗಿದೆ ಎಂಬ ಆರೋಪಗಳು ಕೇಳಿ ಬಂದಿದ್ದವು.

Government took back transfer order of 5 IAS officers

ರೋಹಿಣಿ ಸಿಂಧೂರಿ ವರ್ಗಾವಣೆ, ಸರ್ಕಾರಕ್ಕೆ ದೇವೇಗೌಡರ ಪ್ರಶ್ನೆ

ಇದೀಗ ವರ್ಗಾವಣೆ ಆದೇಶವನ್ನು ಪರಿಷ್ಕರಿಸಿರುವ ಸರ್ಕಾರ, ಎಂ.ವಿ.ಜಯಂತಿ ಮತ್ತು ವಿ.ಚೈತ್ರಾ ಅವರನ್ನು ಮಾತ್ರ ವರ್ಗಾವಣೆ ಮಾಡಿದೆ. ಉಳಿದ ಅಧಿಕಾರಿಗಳಾದ ಎಸ್.ಬಿ.ಶೆಟ್ಟಣ್ಣ ನವರ್, ಎಂ.ವಿ.ವೆಂಕಟೇಶ್, ಕೆ.ರಾಜೇಂದ್ರ ಮತ್ತು ಬಿ.ಆರ್‌. ಮಮತಾ, ರೋಹಿಣಿ ಸಿಂಧೂರಿ ಅವರನ್ನು ಅದೇ ಸ್ಥಾನದಲ್ಲಿ ಮುಂದುವರಿಸಲಿದೆ.

ಕನ್ನಡ ಮ್ಯಾಟ್ರಿಮನಿಯಲ್ಲಿ ಸೂಕ್ತ ಸಂಗಾತಿಯನ್ನು ಆಯ್ಕೆ ಮಾಡಿ- ನೋಂದಣಿ ಉಚಿತ!

English summary
Government took back transfer order of Hassan DC Rohini Sindhuri and other 4 IAS officers. government ordered transfer for 5 IAS officers on January 22nd.

Oneindia ಬ್ರೇಕಿಂಗ್ ನ್ಯೂಸ್,
ತಾಜಾ ಸುದ್ದಿ ತಕ್ಷಣವೇ ಪಡೆಯಿರಿ