15 ವರ್ಷ ಮೀರಿದ ವಾಹನಗಳ ಸ್ಕ್ರ್ಯಾಪ್‍ಗೆ ಸರ್ಕಾರದಿಂದ ಅನುಮೋದನೆ: ರಾಮಲಿಂಗಾರೆಡ್ಡಿ
ಬೆಳಗಾವಿ: 15 ವರ್ಷ ಮೀರಿದ ಎಲ್ಲಾ ಸರ್ಕಾರಿ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ್ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಅನುಮೋದನೆ ನೀಡಿದೆ ಎಂದು ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ ಅವರು ಹೇಳಿದರು.
ರಾಜ್ಯ ಸರ್ಕಾರವು ರಾಜ್ಯದ ಎಲ್ಲಾ ಸರ್ಕಾರಿ ಇಲಾಖೆ, ನಿಗಮ, ಮಂಡಳಿ, ನಗರಸಭೆ, ಸರ್ಕಾರದ ಇತರೆ ಅಧೀನ ಸಂಸ್ಥೆಗಳಿಗೆ ಸೇರಿದ ನೋಂದಣಿಯಾಗಿ ಹದಿನೈದು (15) ವರ್ಷ ಮೀರಿದ ವಾಹನಗಳನ್ನು ಕಡ್ಡಾಯವಾಗಿ ರಾಜ್ಯದಲ್ಲಿ ಸ್ಥಾಪಿತವಾಗಿರುವ ರಿಜಿಸ್ಟರ್ಡ ವೆಹಿಕಲ್ ಸ್ಕ್ರ್ಯಾಪಿಂಗ್ ಫ್ಯಾಸಿಲಿಟಿ (Registered Vehicle Scrapping Facility) ಗಳಲ್ಲಿಯೇ ಸ್ಕ್ರ್ಯಾಪ್ ಮಾಡಲು ರಾಜ್ಯ ಸರ್ಕಾರವು ಕಳೆದ ಸೆಪ್ಡೆಂಬರ್ 12ರಂದು ಅನುಮೋದನೆ ನೀಡಲಾಗಿದೆ ಎಂದು ಸಾರಿಗೆ ಹಾಗೂ ಮುಜರಾಯಿ ಸಚಿವರಾದ ರಾಮಲಿಂಗಾರೆಡ್ಡಿ ಅವರು ಮಾಹಿತಿ ನೀಡಿದರು.

ಪರಿಷತ್ತಿನಲ್ಲಿ ಡಿಸೆಂಬರ್ 17 ರಂದು ಸದಸ್ಯರಾದ ಗೋವಿಂದ ರಾಜು ಅವರ ಪ್ರಶ್ನೆಗೆ ಪ್ರತಿಕ್ರಿಯಿಸಿದ ಸಾರಿಗೆ ಸಚಿವ ರಾಮಲಿಂಗಾರೆಡ್ಡಿ ಅವರು, ಎನ್.ಐ.ಸಿ. ಅವರು ಒದಗಿಸಿರುವ ಮಾಹಿತಿಯ ಪ್ರಕಾರ ದಿನಾಂಕ:04-12-2025ರ ಅಂತ್ಯಕ್ಕೆ ಒಟ್ಟು 18,552 ಹದಿನೈದು (15) ವರ್ಷಗಳು ಮೀರಿದ (ಸಾರಿಗೆ ಸಂಸ್ಥೆಗಳ ಬಸ್ಸುಗಳನ್ನು ಹೊರತುಪಡಿಸಿ) ಸರ್ಕಾರಿ ವಾಹನಗಳ ನೋಂದಣಿಯನ್ನು ಕೇಂದ್ರ ಸರ್ಕಾರವು ವಾಹನ ಪೊರ್ಟಲಿನಲ್ಲಿ ರದ್ದುಪಡಿಸಲಾಗಿದೆ.
ಈ 18,552 ವಾಹನಗಳ ಪೈಕಿ ಆರ್ ವಿಎಸ್ ಎಫ್ (Registered Vehicle Scrapping Facility) ನಲ್ಲಿ ಒಟ್ಟು 1,493 ವಾಹನಗಳನ್ನು ಸ್ಕ್ರ್ಯಾಪ್ ಮಾಡಲಾಗಿದೆ ಮತ್ತು 17,059 ವಾಹನಗಳನ್ನು ಸ್ಕ್ರ್ಯಾಪ್ ಮಾಡುವುದು ಬಾಕಿ ಇರುತ್ತದೆ ಎಂದು ಸಚಿವರು ತಿಳಿಸಿದರು. 2023ರಿಂದ ಇಲ್ಲಿವರೆಗೆ ರಾಜ್ಯದ ನಾಲ್ಕು ನಿಗಮ ಸಂಸ್ಥೆಗಳಲ್ಲಿ 3212 ವಾಹನಗಳು ನಿಷ್ಕ್ರೀಯಗೊಂಡಿವೆ. 579 ವಾಹನಗಳನ್ನು ನಿಷ್ಕ್ರೀಯಗೊಳಿಸಲು ಬಾಕಿ ಇದೆ ಎಂದು ಸಚಿವರು ಮಾಹಿತಿ ನೀಡಿದರು.
ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿಗೆ ಕ್ರಮ
ಹೊಸದಾಗಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲು ಅನುದಾನ ನೀಡುವಂತೆ ಮುಖ್ಯಮಂತ್ರಿಗಳನ್ನು ಕೋರಲಾಗಿದೆ. ಆಯವ್ಯಯದಲ್ಲಿ ಮಂಜೂರಾಗುವ ಅನುದಾನ ಲಭ್ಯತೆ ಆಧರಿಸಿ ಅಗತ್ಯವಿರುವ ಕಡೆ ಹೊಸ ವಿದ್ಯಾರ್ಥಿ ನಿಲಯಗಳ ಮಂಜೂರಾತಿ ಕ್ರಮ ವಹಿಸುವುದಾಗಿ ಹಿಂದುಳಿದ ವರ್ಗಗಳ ಕಲ್ಯಾಣ ಹಾಗೂ ಕನ್ನಡ ಮತ್ತು ಸಂಸ್ಕøತಿ ಸಚಿವ ಶಿವರಾಜ ಎಸ್ ತಂಗಡಗಿ ಭರವಸೆ ನೀಡಿದರು.
ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲದ ಅಧಿವೇಶನದಲ್ಲಿ ಬುಧವಾರ ವಿಧಾನಸಭೆಯ ಪ್ರಶ್ನೋತ್ತರ ಕಲಾಪದಲ್ಲಿ ತೇರದಾಳ ಶಾಸಕ ಸಿದ್ದು ಸವದಿ ಅವರ ಚುಕ್ಕೆ ಗುರುತಿನ ಪ್ರಶ್ನೆಗೆ ಉತ್ತರಿಸಿ ಅವರು ಮಾತನಾಡಿದರು. ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ವತಿಯಿಂದ ಕಳೆದ ವರ್ಷದಲ್ಲಿ ರಾಜ್ಯಾದ್ಯಂತ 150 ವಿದ್ಯಾರ್ಥಿ ನಿಲಯಗಳನ್ನು ತೆರೆಯಲಾಗಿದೆ. ಈ ಪೈಕಿ 31 ಜಿಲ್ಲಾ ಕೇಂದ್ರಗಳಲ್ಲಿ ಬಾಲಕ ಹಾಗೂ ಬಾಲಕಿಯರ 62 ಮೆಟ್ರಿಕ್ ನಂತರ ವಿದ್ಯಾರ್ಥಿ ನಿಲಯಗಳನ್ನು ಮಂಜೂರು ಮಾಡಲಾಗಿದೆ. ಉಳಿದಂತೆ ಬೇಡಿಕೆ ಆಧಾರಿಸಿ ವಿಧಾನಸಭಾ ಕ್ಷೇತ್ರವಾರು ಹಂಚಿಕೆ ಮಾಡಲಾಗಿದೆ.
ರಾಜ್ಯಾದ್ಯಂತ ಇಂಜಿನಿಯರಿಂಗ್, ಮೆಡಿಕಲ್ ಸೇರಿದಂತೆ ಪದವಿ ವಿದ್ಯಾರ್ಥಿ ನಿಲಯಗಳನ್ನು ತೆರೆಯಲು ಹೆಚ್ಚಿನ ಬೇಡಿಕೆಯಿದೆ. ತೇರದಾಳ ಮತಕ್ಷೇತ್ರ ವ್ಯಾಪ್ತಿಯ ಬನಹಟ್ಟಿ, ರಬಕವಿ, ತೇರದಾಳ, ಮಹಾಲಿಂಗಪುರ ಗ್ರಾಮಗಳಲ್ಲಿ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆಗೆ ಸಂಬಂದಿಸಿದ 5 ವಿದ್ಯಾರ್ಥಿನಿಲಯಗಳು ಕಾರ್ಯನಿರ್ವಹಿಸುತ್ತಿವೆ. ಒಟ್ಟು 552 ವಿದ್ಯಾರ್ಥಿಗಳ ಪ್ರವೇಶಕ್ಕೆ ಮಂಜೂರಾತಿ ನೀಡಲಾಗಿದೆ. 1512 ಅರ್ಜಿಗಳು ಸ್ವೀಕೃತವಾಗಿವೆ. 219 ನವೀಕರಣ 235 ಹೊಸ ಅರ್ಜಿ ಸಲ್ಲಿಸಿದ ಅಭ್ಯರ್ಥಿಗಳಿಗೆ ಪ್ರವೇಶ ನೀಡಲಾಗಿದೆ.
1,276 ಅರ್ಜಿಗಳು ಬಾಕಿಯಿವೆ. ಮತಕ್ಷೇತ್ರದಲ್ಲಿ ಹೊಸದಾಗಿ ವಿದ್ಯಾರ್ಥಿ ನಿಲಯ ಸ್ಥಾಪಿಸುವ ಪ್ರಸ್ತಾವನೆಗಳು ಆರ್ಥಿಕ ಇಲಾಖೆಯಿಂದ ತಿರಸ್ಕೃತಗೊಂಡಿವೆ. ಆದರೂ ಶಾಸಕರ ಬೇಡಿಕೆ ಅನುಸಾರ ಮುಂದಿನ ಆರ್ಥಿಕ ವರ್ಷದಲ್ಲಿ ಹೊಸ ವಿದ್ಯಾರ್ಥಿ ನಿಲಯ ಮಂಜೂರಾತಿ ಕುರಿತು ಪರಿಶೀಲಿಸಲಾಗುವುದು. ಕ್ಷೇತ್ರದಲ್ಲಿ ಹಿಂದುಳಿದ ವರ್ಗಗಳಿಗೆ ಸೇರಿದ ಬಹಳಷ್ಟು ವಿದ್ಯಾರ್ಥಿಗಳು ಇದ್ದು, ವಿದ್ಯಾರ್ಥಿ ನಿಲಯಕ್ಕೆ ಹೆಚ್ಚಿನ ಬೇಡಿಕೆಯಿದೆ. ತೇರದಾಳ ಹಾಗೂ ರಬಕವಿ-ಬನಹಟ್ಟಿಯಲ್ಲಿ ತಲಾ 2 ಹಾಗೂ ಮಹಾಲಿಂಗಪುರದಲ್ಲಿ 1 ವಿದ್ಯಾರ್ಥಿನಿಲಯಗಳಿಗೆ ಮಂಜೂರಾತಿ ನೀಡುವಂತೆ ಶಾಸಕ ಸಿದ್ದು ಸವದಿ ಸಚಿವರಲ್ಲಿ ಕೋರಿದರು.
-
Traffic Alert: ಬೆಂಗಳೂರು ಹೊರ ವರ್ತುಲ ಸವಾರರೇ ಗಮನಿಸಿ, ರಸ್ತೆ ಸಂಚಾರ ನಿರ್ಬಂಧ -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
SSLC ಗಣಿತ ಪರೀಕ್ಷೆ ವಿಶ್ಲೇಷಣೆ : ಬ್ಲೂಪ್ರಿಂಟ್ನಂತೆಯೇ ಬಂತು ಪ್ರಶ್ನೆಪತ್ರಿಕೆ, ಔಟ್ ಆಫ್ ಔಟ್ ನಿರೀಕ್ಷೆಯಲ್ಲಿ ವಿದ್ಯಾರ್ಥಿಗಳು -
Jowar Price Today: ಕರ್ನಾಟಕದಲ್ಲಿ ಕ್ವಿಂಟಾಲ್ ಜೋಳದ ಬೆಲೆ ಎಷ್ಟಿದೆ, ಮಾರುಕಟ್ಟೆವಾರು ಪಟ್ಟಿ ಇಲ್ಲಿದೆ. -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Karnataka Weather: ರಾಜ್ಯದ 14 ಜಿಲ್ಲೆಗಳಿಗೆ ಯೆಲ್ಲೋ ಅಲರ್ಟ್ ಘೋಷಿಸಿದ ಹವಾಮಾನ ಇಲಾಖೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
RCB: ಆರ್ಸಿಬಿ ಪಂದ್ಯದ ನಡುವೆಯೆ ಮತ್ತೊಮ್ಮ ಅಭಿಮಾನಿಗಳ ಮನಗೆದ್ದ 'ಕ್ರಶ್' ಅನನ್ಯಾ ಬಿರ್ಲಾ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
Gold Rate : ಆಭರಣ ಪ್ರಿಯರ ಗಮನಕ್ಕೆ: ಮಾರುಕಟ್ಟೆಯಲ್ಲಿ ಇಂದಿನ ಚಿನ್ನ-ಬೆಳ್ಳಿ ಬೆಲೆ ಇಷ್ಟಿದೆ? ಇಲ್ಲಿದೆ ಮಾಹಿತಿ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು












Click it and Unblock the Notifications