• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕರ್ನಾಟಕದ 3 ಜಿಲ್ಲೆಗಳಲ್ಲಿ ವಿಶ್ವಮಟ್ಟ 'ಮೆಗಾ ಜವಳಿ ಪಾರ್ಕ್‌' ಸ್ಥಾಪನೆ: ಸಿಎಂ ಬೊಮ್ಮಾಯಿ

|
Google Oneindia Kannada News

ನವದೆಹಲಿ, ನವೆಂಬರ್ 29: ಕರ್ನಾಟಕ ರಾಜ್ಯ ಸರ್ಕಾರ 'ಮಿತ್ರಾ ಯೋಜನೆ'ಯಡಿ ಸಹಾಯ ಅನುದಾನ ಪಡೆದು ವಿಶ್ವಮಟ್ಟದ 'ಮೆಗಾ ಜವಳಿ ಪಾರ್ಕ್' ಅನ್ನು ರಾಜ್ಯದ ಮೂರು ಜಿಲ್ಲೆಗಳಲ್ಲಿ ಸ್ಥಾಪಿಸಲಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ಮಂಗಳವಾರ ರಾಷ್ಟ್ರ ರಾಜಧಾನಿ ನವದೆಹಲಿಯಲ್ಲಿ ಕೇಂದ್ರ ವಾಣಿಜ್ಯ ಮತ್ತು ಕೈಗಾರಿಕಾ ಸಚಿವ ಪಿಯೂಶ್ ಗೋಯಲ್ ಅವರನ್ನು ಭೇಟಿಯಾಗಿ ಕರ್ನಾಟಕ ರಾಜ್ಯಕ್ಕೆ ಸಂಬಂಧಿಸಿದ ವಿವಿಧ ಅಭಿವೃದ್ಧಿ ವಿಷಯಗಳ ಕುರಿತು ಮುಖ್ಯಮಂತ್ರಿಗಳು ಚರ್ಚಿಸಿದರು.

ದೀಪಾವಳಿಗೆ ರಾಜಧಾನಿ ಎಕ್ಸ್‌ಪ್ರೆಸ್ ವಿಶೇಷ ಸೇವೆ, ಎಲ್ಲಿಂದ ಎಲ್ಲಿಗೆ ತಿಳಿಯಿರಿ ದೀಪಾವಳಿಗೆ ರಾಜಧಾನಿ ಎಕ್ಸ್‌ಪ್ರೆಸ್ ವಿಶೇಷ ಸೇವೆ, ಎಲ್ಲಿಂದ ಎಲ್ಲಿಗೆ ತಿಳಿಯಿರಿ

ನಂತರ ಮಾತನಾಡಿದ ಬಸವರಾಜ ಬೊಮ್ಮಾಯಿ, ಕರ್ನಾಟಕದ ಕಲಬುರಗಿ, ತುಮಕೂರು, ವಿಜಯಪುರ ಜಿಲ್ಲೆಗಳಲ್ಲಿ 'ಮಿತ್ರಾ ಯೋಜನೆ'ಯಡಿ ಸಹಾಯಾನುದಾನ ಪಡೆದು ವಿಶ್ವಮಟ್ಟದ ಮೆಗಾ ಜವಳಿ ಪಾರ್ಕ್ ಸ್ಥಾಪಿಸಲಾಗುವುದು ಎಂದು ತಿಳಿಸಿದರು.

ಈ ಮೂರು ಜಿಲ್ಲೆಗಳು ರಾಷ್ಟ್ರೀಯ ಹಾಗೂ ರಾಜ್ಯ ಹೆದ್ದಾರಿಗಳಿಗೆ ಸಮೀಪದಲ್ಲಿವೆ. ಎಲ್ಲಾ ಪ್ರಮುಖ ನಗರಗಳಿಗೆ ಹಾಗೂ ಬಂದರುಗಳಿಗೆ ಕೂಡ ಇಲ್ಲಿಂದ ಸಂಪರ್ಕಿಸಬಹುದಾಗಿದೆ. ಈ ಜಿಲ್ಲೆಗಳಲ್ಲಿ ಮೆಗಾ ಜವಳಿ ಪಾರ್ಕ್ ಸ್ಥಾಪನೆಯಿಂದ ಜವಳಿ ಕೇಂದ್ರವಾಗಿ ಜಿಲ್ಲೆಗಳನ್ನು ಪರಿವರ್ತಿಸಲು ಸಾಧ್ಯವಾಗಲಿದೆ. ಪ್ರಧಾನಮಂತ್ರಿಗಳ ಕನಸಿನಂತೆ ಜವಳಿ ಕೇತ್ರದಲ್ಲಿ ದೇಶ ಆತ್ಮ ನಿರ್ಭರ್ ಆಗಲಿದೆ ಎಂದರು.

ಇನ್ನೂ ವಿಜಯಪುರ, ತುಮಕೂರು ಹಾಗೂ ಕಲಬುರಗಿ ಜಿಲ್ಲೆಗಳು ಶೈಕ್ಷಣಿಕ ಹಾಗೂ ತಾಂತ್ರಿಕ ಸಂಸ್ಥೆಗಳನ್ನು ಹೊಂದಿವೆ. ಕೌಶಲ್ಯವುಳ್ಳ ಮಾನವ ಸಂಪನ್ಮೂಲಗಳನ್ನು ಜವಳಿ ಉದ್ಯಮಕ್ಕೆ ಒದಗಿಸಲು ಈ ಜಿಲ್ಲೆಗಳು ಶಕ್ತವಾಗಿವೆ. ಆದ್ದರಿಂದ ಕೇಂದ್ರ ಸರ್ಕಾರದ ಮಿತ್ರಾ ಯೋಜನೆಯಡಿ ಈ ಮೂರು ಜಿಲ್ಲೆಗಳನ್ನು ಸೇರ್ಪಡೆಗೊಳಿಸುವಂತೆ ಕೇಂದ್ರ ಸಚಿವರಿಗೆ ಅವರು ಮನವಿ ಮಾಡಿದರು.

ರಾಜ್ಯಕ್ಕೆ 2 LMT ಅಕ್ಕಿ ಬಿಡುಗಡೆಗೆ ಸಿಎಂ ಮನವಿ

ಇದೇ ವೇಳೆ ಮುಖ್ಯಮಂತ್ರಿಗಳು ಕರ್ನಾಟಕ ರಾಜ್ಯಕ್ಕೆ ಹತ್ತು ಸಾವಿರ ಮೆಟ್ರಿಕ್ ಟನ್ ಗಳ ಅಕ್ಕಿ ಸರಬರಾಜನ್ನು ಸೀಮಿತಗೊಳಿಸಿರುವ ನೀತಿಯನ್ನು ಮರು ಪರಿಶೀಲಿಸಬೇಕು. ಭಾರತೀಯ ಆಹಾರ ನಿಗಮದ ವತಿಯಿಂದ ಮಾರ್ಚ್ 23ರವರೆಗೆ ತೆರೆದ ಮಾರುಕಟ್ಟೆ ಮಾರಾಟ ಯೋಜನೆಯಡಿ 2 ಲಕ್ಷ ಮೆಟ್ರಿಕ್ ಟನ್ ಅಕ್ಕಿಯನ್ನು ವಿಶೇಷ ಪ್ರಕರಣವಾಗಿ ಪರಿಗಣಿಸಿ ರಾಜ್ಯಕ್ಕೆ ಬಿಡುಗಡೆ ಮಾಡಬೇಕು. ತಕ್ಷಣಕ್ಕೇ 50 ಸಾವಿರ ಮೆಟ್ರಿಕ್ ಟನ್ ಅಕ್ಕಿಯನ್ನು ಬಿಡುಗಡೆ ಮಾಡುವಂತೆ ಕೇಂದ್ರ ಸಚಿವರಲ್ಲಿ ಬೊಮ್ಮಾಯಿ ಕೋರಿದರು.

ಈ ಸಂದರ್ಭದಲ್ಲಿ ಕರ್ನಾಟಕ ರಾಜ್ಯದ ಬೃಹತ್ ಮತ್ತು ಮಧ್ಯಮ ನೀರಾವರಿ, ಜಲಸಂಪನ್ಮೂಲ ಸಚಿವರಾದ ಗೋವಿಂದ ಕಾರಜೋಳ ಹಾಗೂ ಜಲ ಸಂಪನ್ಮೂಲ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ರಾಕೇಶ್ ಸಿಂಗ್ ಉಪಸ್ಥಿತರಿದ್ದರು.

English summary
Karnataka Government will be build global level 'Megha Javali Park' in Kalaburagi Tumkur and Vijaypur districts of Karnataka CM Basavaraj Bommai said
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X