ಲೋಕಸಭಾ ಚುನಾವಣೆಯ ಬಳಿಕ ನೀವೇ ಸಿಎಂ ಆಗಿ ಮುಂದುವರಿಯುತ್ತೀರಿ ಅಂತ ಗ್ಯಾರಂಟಿ ಏನು? ಯತ್ನಾಳ್
ಬೆಂಗಳೂರು, ಫೆಬ್ರವರಿ 20: ವಿಧಾನ ಸಭಾ ಬಜೆಟ್ ಅಧಿವೇಶನದ ಕಾರ್ಯಕಲಾಪಗಳಲ್ಲಿ ಸಿದ್ದರಾಮಯ್ಯ ಮಾತಾಡುವಾಗ ಬಿಜೆಪಿ ನಾಯಕ ಬಸನಗೌಡ ಪಾಟೀಲ್ ಯತ್ನಾಳ್ ಪದೇಪದೇ ಮಾತನಾಡಿದ್ದಾರೆ. ಈ ವೇಳೆ ಸಿದ್ದರಾಮಯ್ಯರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಿದರೆ ಈ ಸರ್ಕಾರ ಧೊಪ್ಪಂತ ಕುಸಿದುಬೀಳುತ್ತದೆ ಅಂತ ಹೇಳುತ್ತದೆ ಎಂದು ಬಿಜೆಪಿ ಶಾಸಕ ಬಸವನಗೌಡ ಪಾಟೀಲ್ ಯತ್ನಾಳ್ ಹೇಳಿದ್ದಾರೆ.
ಈ ವೇಳೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು ಮುಂದುವರೆಸಿ, ನನ್ನ ಬಗ್ಗೆ ಯತ್ನಾಳ್ ಯಾವಾಗಲೂ ಒಳ್ಳೆಯ ಮಾತುಗಳನ್ನಾಡುತ್ತಾರೆ ಅದಕ್ಕಾಗಿ ಧನ್ಯವಾದಗಳನ್ನು ಸಲ್ಲಿಸುತ್ತೇನೆ ಎಂದರು, ಈ ವೇಳೆ ಕೂಡಲೇ ಎದ್ದು ನಿಲ್ಲುವ ಯತ್ನಾಳ್ ಲೋಕಸಭಾ ಚುನಾವಣೆಯ ಬಳಿಕ ನೀವೇ ಮುಖ್ಯಮಂತ್ರಿಯಾಗಿ ಮುಂದುವರಿಯುತ್ತೀರಿ ಅಂತ ಗ್ಯಾರಂಟಿ ಏನು ಎಂದು ಪ್ರಶ್ನಿಸಿದ್ದಾರೆ. ಈ ವೇಳೆ ನಕ್ಕು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಮಾತು ಮುಂದುವರೆಸಿದರು.

ಬಿಜೆಪಿ ಸರ್ಕಾರದ್ದು 2019 ರಿಂದ 2023ರ ವರೆಗೆ ದ್ವೇಷ ತುಂಬಿದ , ತುಕ್ಕು ಹಿಡಿದ ಬಸ್ಸು ಮುಂದಕ್ಕೆ ಹೋಗಲೇ ಇಲ್ಲ. ವಿಷದ ಹೊಗೆ ಬಿಡುತ್ತದೆ ಎಂದು ಜನ ಪಕ್ಕಕ್ಕೆ ತಳ್ಳಿದರು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ವ್ಯಂಗ್ಯವಾಡಿದರು.
ಗಾಳಿ ಇಲ್ಲದೆ ಕೆಟ್ಟು ನಿಂತಿರುವ ಬಸ್ ಎಂದು ವಿರೋಧ ಪಕ್ಷದ ನಾಯಕ ಆರ್ ಅಶೋಕ್ ರಾಜ್ಯಪಾಲರ ಭಾಷಣದ ಮೇಲಿನ ಚರ್ಚೆಯಲ್ಲಿ ನೀಡಿದ್ದ ಹೇಳಿಕೆಗೆ ಇಂದು ವಿಧಾನಸಭೆಯಲ್ಲಿ ಉತ್ತರ ನೀಡಿ ತಿರುಗೇಟು ನೀಡಿದ ಅವರು, ನಮ್ಮ ಸರ್ಕಾರದ ಅವಧಿಯಲ್ಲಿ ಬಿಜೆಪಿ ಸರ್ಕಾರ ಕ್ಕಿಂತಲೂ ಹೆಚ್ಚಿನ ಹಾಲು ಉತ್ಪಾದನೆಯಾಗಿದೆ. 2023- 24 ರಲ್ಲಿ 84.41 ಲಕ್ಷ ಲೀಟರ್ ಹಾಲು ಹೆಚ್ಚು ಉತ್ಪಾದನೆಯಾಗಿದೆ ಎಂದು ಕೆ.ಎಂ.ಎಫ್ ವ್ಯವಸ್ಥಾಪಕ ನಿರ್ದೇಶಕರು ಪತ್ರದಲ್ಲಿ ತಿಳಿಸಿದ್ದಾರೆ ಎಂದು ವಿವರಿಸಿದರು.
ರೈತರಿಗೆ ನೀಡಬೇಕಿದ್ದ ಪ್ರೋತ್ಸಾಹ ಧನಕ್ಕಾಗಿ 2019 ರಿಂದ ಇಲ್ಲಿಯವರೆಗೆ 1178 ಕೋಟಿ ರೂ.ಗಳು ಬಿಡುಗಡೆಯಾಗಿದೆ. ಈ ವರ್ಷ 1172 ಕೋಟಿ ರೂ.ಗಳಲ್ಲಿ 971 ಕೋಟಿ ರೂ.ಗಳನ್ನು ಬಿಡುಗಡೆ ಮಾಡಲಾಗಿದೆ. ರೈತರಿಗೆ 3.00 ರೂ.ಗಳಿಂದ 5. ರೂ.ಗಳಿಗೆ ಪ್ರೋತ್ಸಾಹ ಧನ ಹೆಚ್ಚಿಸಿದ್ದು ನಮ್ಮ ಸರ್ಕಾರ ಎಂದರು.

ಸರ್ಕಾರದ ನೀತಿ, ಮುನ್ನೋಟವನ್ನು ಜನತೆಯ ಮುಂದಿಟ್ಟಿದ್ದಾರೆ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಸರ್ಕಾರದ ನಿಲುವು, ನೀತಿ, ಮುನ್ನೋಟ ಹಾಗೂ ಕಾರ್ಯಕ್ರಮ ಗಳನ್ನು ಸ್ಪಷ್ಟವಾಗಿ ರಾಜ್ಯದ ಜನತೆ ಮುಂದಿಡುವ ಪ್ರಾಮಾಣಿಕ ಪ್ರಯತ್ನ ಮಾಡಿದ್ದಾರೆ ಎಂದು ರಾಜ್ಯಪಾಲರಿಗೆ ಮುಖ್ಯಮಂತ್ರಿಗಳು ಅಭಿನಂದಿಸಿದರು.
ಮೋದಿ ಅವರು ಮುಖ್ಯಮಂತ್ರಿಯಾಗಿದ್ದಾಗ ಶೇ50 ರಷ್ಟು ತೆರಿಗೆ ಪಾಲು ರಾಜ್ಯಕ್ಕೆ ವಾಪಾಸ್ ಕೊಡಿ ಎಂದು ಕೇಂದ್ರಕ್ಕೆ ಕೇಳಿದ್ದರು. ಈಗ ನಾವು ಕಟ್ಟುವ ಪ್ರತಿ ನೂರು ರೂಗೆ 12-13 ರೂ ಮಾತ್ರ ವಾಪಾಸ್ ಬರುತ್ತಿದೆ. ಶ್ರೀಮಂತರಿಂದ ತೆರಿಗೆಯನ್ನು ಕಾನೂನು ರೀತಿ ಸಂಗ್ರಹಿಸಿ, ಬಡವರಿಗೆ ಆರ್ಥಿಕ , ಸಾಮಾಜಿಕ ಶಕ್ತಿ ತುಂಬುತ್ತಿರುವುದು good economics. ನಾನು good economics ನಲ್ಲಿ ನಂಬಿಕೆಯಿಟ್ಟಿರುವವನು. ಮುಂದಿನ ವರ್ಷಕ್ಕೆ ಗ್ಯಾರಂಟಗಳಿಗೆ 52,009 ಕೋಟಿ ಮೀಸಲಿಟ್ಟಿದ್ದೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.












Click it and Unblock the Notifications