ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸಾಲಮನ್ನಾಕ್ಕೆ ಬ್ಯಾಂಕುಗಳು ಸಹಕರಿಸದಿದ್ದರೆ ನೇರ ರೈತರ ಖಾತೆಗೆ ಹಣ: ರೇವಣ್ಣ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 31: ರಾಷ್ಟ್ರೀಕೃತ ಬ್ಯಾಂಕ್‌ಗಳು ರೈತರ ಬ್ಯಾಂಕ್ ಖಾತೆ ಹಾಗೂ ಸಾಲದ ವಿವರ ನೀಡಲು ಹಿಂದೇಟು ಹಾಕಿದರೆ ಸರ್ಕಾರವೇ ರೈತರ ಖಾತೆಗೆ ನೇರವಾಗಿ ಹಣ ಹಾಕುತ್ತೇವೆ ಎಂದು ಲೋಕೋಪಯೋಗಿ ಸಚಿವ ರೇವಣ್ಣ ಹೇಳಿದ್ದಾರೆ.

ಸುದ್ದಿಗಾರರ ಜತೆ ಮಾತನಾಡಿದ ಅವರು, ಈಗಾಗಲೇ ಸಹಕಾರ ಬ್ಯಾಂಕ್‌ಗಳಿಂದ ಎಲ್ಲ ರೀತಿಯ ಮಾಹಿತಿ ಲಭ್ಯವಾಗಿದ್ದು, ನವೆಂಬರ್‌ 20ರ ಒಳಗಾಗಿ ಎಲ್ಲ ರೈತರಿಗೂ ಸಾಲ ಋಣಮುಕ್ತ ಪತ್ರ ನೀಡುತ್ತೇವೆ ಎಂದರು.

ರೈತರ ಬಳಿಕ ವಿದ್ಯಾರ್ಥಿಗಳ ಸಾಲಮನ್ನಾ: ಸುತ್ತೋಲೆ ಹೊರಡಿಸಿದ ಸರ್ಕಾರ ರೈತರ ಬಳಿಕ ವಿದ್ಯಾರ್ಥಿಗಳ ಸಾಲಮನ್ನಾ: ಸುತ್ತೋಲೆ ಹೊರಡಿಸಿದ ಸರ್ಕಾರ

ರಾಷ್ಟ್ರೀಯ ಬ್ಯಾಂಕ್‌ಗಳು ಸರ್ಕಾರಕ್ಕೆ ಸಹಕಾರ ನೀಡದೇ ಇರುವುದಕ್ಕೆ ಬಿಜೆಪಿಯೇ ಕಾರಣ ಎಂದ ರೇವಣ್ಣ, ಸಾಲಮನ್ನಾ ಮಾಡುವುದನ್ನು ಒಪ್ಪಬೇಡಿ ಎಂದು ಯಡಿಯೂರಪ್ಪ ಅವರೇ ಬ್ಯಾಂಕ್‌ನವರಿಗೆ ಹೇಳುತ್ತಿದ್ದಾರೆ ಎಂದು ಹೇಳಿದರು.

 Government will deposit loan amount to farmers account :HD Revanna

ಉಪಚುನಾವಣೆ ಬಳಿಕ ಋಣಮುಕ್ತ ಪತ್ರಗಳು ರೈತರ ಮನೆಬಾಗಿಲಿಗೆ : ಸಿಎಂ ಉಪಚುನಾವಣೆ ಬಳಿಕ ಋಣಮುಕ್ತ ಪತ್ರಗಳು ರೈತರ ಮನೆಬಾಗಿಲಿಗೆ : ಸಿಎಂ

ಬರ ಪರಿಹಾರ ಕಾರ್ಯಗಳಿಗೆಂದು ಬರ ಪೀಡಿದ ಜಿಲ್ಲಾ ಪಂಚಾಯಿತಿಗಳಿಗೆ ತಲಾ 50 ಕೋಟಿ ರೂಪಾಯಿ ಹಣ ಬಿಡುಗಡೆ ಮಾಡಲಾಗುವುದು ಎಂದು ಅವರು ಇದೇ ಸಮಯದಲ್ಲಿ ಘೋಷಿಸಿದರು.

ಪ್ರಧಾನ ಮಂತ್ರಿ ಆವಾಸ್ ಯೋಜನೆ ಬಗ್ಗೆ ಇಲ್ಲಿದೆ ಸಮಗ್ರ ಮಾಹಿತಿ ಪ್ರಧಾನ ಮಂತ್ರಿ ಆವಾಸ್ ಯೋಜನೆ ಬಗ್ಗೆ ಇಲ್ಲಿದೆ ಸಮಗ್ರ ಮಾಹಿತಿ

ಬೆಂಗಳೂರು-ಮೈಸೂರು ದಶಪಥ ರಸ್ತೆಯ ಕಾಮಗಾರಿ ಸಂಬಂಧ ಈಗಾಗಲೇ ಬೈಪಾಸ್‌ ರಸ್ತೆಗಳ ಕಾಮಗಾರಿ ಆರಂಭಿಸಲಾಗಿದೆ. ರಾಜ್ಯದ ಐದು ನಗರಗಳಲ್ಲಿ ಮೇಲು ರಸ್ತೆ ಮಾಡುವಂತೆ ಕೇಂದ್ರ ಸರ್ಕಾರಕ್ಕೆ ಪತ್ರ ಬರೆದಿದ್ದೇವೆ ಆದರೆ ಇನ್ನೂ ಯಾವುದೇ ಪ್ರತಿಕ್ರಿಯೆ ಬಂದಿಲ್ಲ ಎಂದು ಹೇಳಿದರು.

English summary
If nationalized bank did not co-operate with government to waive farmers loan, government will directly deposit loan amount to the farmers account.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X