Property: ಬೆಂಗಳೂರು ಸಮೀಪದ ಈ ಭಾಗದಲ್ಲಿ ಸರ್ಕಾರದ ಪ್ಲ್ಯಾನ್‌ನಿಂದ ಭೂಮಿಗೆ ಭರ್ಜರಿ ಬೆಲೆ!
ಕರ್ನಾಟಕದಲ್ಲಿ ಅದರಲ್ಲೂ ದಕ್ಷಿಣ ಕರ್ನಾಟಕದ ಭಾಗದಲ್ಲಿ ವಿವಿಧ ಕಾರಣಕ್ಕೆ ರಿಯಲ್ ಎಸ್ಟೇಟ್‌ಗೆ ಬಂಪರ್ ಬೆಲೆ ಬಂದಿದೆ. ಸರ್ಕಾರ ಈಚೆಗೆ ಬೆಂಗಳೂರಿನಲ್ಲಿ ಹೂಡಿಕೆದಾರರ ಸಮಾವೇಶವನ್ನು ಆಯೋಜನೆ ಮಾಡಿತ್ತು. ಇದಕ್ಕೆ ಭರ್ಜರಿ ರೆಸ್ಪಾನ್ಸ್ ಬಂದಿದೆ. ಇದೀಗ ಬೆಂಗಳೂರಿನ ಸುತ್ತಮುತ್ತಲಿನ ಭಾಗದಲ್ಲಿ ಹಾಗೂ ದಕ್ಷಿಣ ಕರ್ನಾಟಕದ ವಿವಿಧ ಭಾಗದಲ್ಲಿ ರಿಯಲ್ ಎಸ್ಟೇಟ್‌ಗೆ ಸರ್ಕಾರದ ನಿರ್ಧಾರದಿಂದಲೇ ಭರ್ಜರಿ ರೆಸ್ಪಾನ್ಸ್ ಬರುತ್ತಿದೆ. ಆದರೆ, ಕರ್ನಾಟಕ ಸರ್ಕಾರದ ಈ ಕ್ರಮದ ಬಗ್ಗೆ ಉತ್ತರ ಕರ್ನಾಟಕದ ಜನರಿಂದ ವಿರೋಧ ವ್ಯಕ್ತವಾಗಿದ್ದರೆ. ಈ ಭಾಗದಲ್ಲಿ ಭೂಮಿ ಇರುವವರಿಗೆ ಸಂತೋಷವೂ ಆಗುತ್ತಿದೆ. ಅದೇನು ಎನ್ನುವ ವಿವರ ಇಲ್ಲಿದೆ.
ರಾಜ್ಯ ಸರ್ಕಾರ ತೆಗೆದುಕೊಂಡಿರುವ ನಿರ್ಧಾರವೊಂದು ಭಾರೀ ಚರ್ಚೆಗೆ ಕಾರಣವಾಗಿದೆ. ಈಚೆಗೆ ಬೆಂಗಳೂರಿನಲ್ಲಿ ಬೃಹತ್ ಹೂಡಿಕೆದಾರರ ಸಮಾವೇಶವನ್ನು ಆಯೋಜಿಸಲಾಗಿತ್ತು. ಆದರೆ, ಈ ಹೂಡಿಕೆದಾರರ ಸಮಾವೇಶದಲ್ಲಿ ಉತ್ತರ ಕರ್ನಾಟಕದ ಭಾಗಕ್ಕೆ ಹೆಚ್ಚು ಹೂಡಿಕೆ ಹರಿದು ಬಂದಿಲ್ಲ ಎನ್ನುವ ಆರೋಪವಿದೆ. ಇದರ ನಡುವೆ ಇದೀಗ ಇಲ್ಲಿ ರಿಯಲ್ ಎಸ್ಟೇಟ್‌ಗೆ ಬಂಪರ್ ಬಂದಿರುವುದು ವರದಿಯಾಗಿದೆ.

ಬೆಂಗಳೂರಿನಿಂದ ಕೆಲವೇ ಕಿ.ಮೀ ದೂರದಲ್ಲಿ ಇರುವ ಬಿಡದಿ ಭಾಗದಲ್ಲಿ ರಿಯಲ್ ಎಸ್ಟೇಟ್, ಭೂಮಿ ಹಾಗೂ ಮನೆಗಳಿಗೆ ಭರ್ಜರಿ ಬೆಲೆ ಬಂದಿದೆ. ಇದಕ್ಕೆ ಮುಖ್ಯ ಕಾರಣ ಈ ಭಾಗದಲ್ಲಿ ಹಲವು ಪ್ರಮುಖ ಯೋಜನೆಗಳು ಜಾರಿಯಾಗುತ್ತಿರುವುದು ಮಾತ್ರವಲ್ಲ. ಈ ಬಾರಿ ಹೂಡಿಕೆದಾರರ ಸಮಾವೇಶದ ಸಮಯದಲ್ಲಿ ಬಿಡದಿಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರವು ತೆಗೆದುಕೊಂಡ ಒಂದು ನಿರ್ಧಾರವು ಇಲ್ಲಿ ರಿಯಲ್ ಎಸ್ಟೇಟ್ ಅಭಿವೃದ್ಧಿಗೆ ಪೂರಕ ವಾತಾವರಣವನ್ನು ನಿರ್ಮಿಸಿ ಕೊಟ್ಟಿದೆ.
ಈಚೆಗೆ ಬೆಂಗಳೂರಿನಲ್ಲಿ ಜಾಗತಿಕ ಹೂಡಿಕೆದಾರ ಸಮಾವೇಶವನ್ನು ಆಯೋಜನೆ ಮಾಡಲಾಗಿತ್ತು. ಆದರೆ, ಇದಕ್ಕೆ ಕೆಲವೇ ದಿನಗಳ ಮುಂಚೆ ಬಿಡದಿಯಲ್ಲಿ ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ಧಿ ಮಂಡಳಿ (ಕೆಐಎಡಿಬಿ)ಯಿಂದ ಅಭಿವೃದ್ಧಿ ಮಾಡಲಾಗಿರುವ ಬರೋಬ್ಬರಿ 1490.65 ಎಕರೆ ಜಾಗವನ್ನು ವಿಶೇಷ ಹೂಡಿಕೆ ಪ್ರದೇಶ ಎಂದು ಕರ್ನಾಟಕ ಸರ್ಕಾರ ಘೋಷಿಸಿರುವುದು ವರದಿಯಾಗಿದೆ.
ರಿಯಲ್ ಎಸ್ಟೇಟ್‌ಗೆ ಭರ್ಜರಿ: ಬಿಡದಿ ಹಾಗೂ ಬಿಡದಿ ಸುತ್ತಮುತ್ತಲಿನ ಪ್ರದೇಶದಲ್ಲಿ ಭೂಮಿಗೆ ಭರ್ಜರಿ ಬೆಲೆ ಬಂದಿದೆ. ಈ ಭಾಗದಲ್ಲಿ ಸರ್ಕಾರವೇ ಹೂಡಿಕೆದಾರರಿಗೆ ಪೂರಕ ವಾತಾವರಣವನ್ನು ನಿರ್ಮಾಣ ಮಾಡುತ್ತಿರುವುದರಿಂದ ದೊಡ್ಡ ದೊಡ್ಡ ಕಂಪನಿಗಳು ಇಲ್ಲಿ ಉದ್ಯಮವನ್ನು ಪ್ರಾರಂಭಿಸುವುದಕ್ಕೆ ಮುಂದೆ ಬಂದಿವೆ. ಹೀಗಾಗಿ, ಈ ಭಾಗದಲ್ಲಿ ಸಹಜವಾಗಿಯೇ ಭೂಮಿಗೆ ಬಂಗಾರದ ಬೆಲೆ ಬಂದಿದೆ. ರಸ್ತೆ ಮಾರ್ಗದ ಜಮೀನುಗಳು ಕೋಟ್ಯಾಂತರ ರೂಪಾಯಿ ಬೆಲೆ ಬಾಳುತ್ತಿದೆ ಎನ್ನಲಾಗಿದೆ.
ಸರ್ಕಾರದ ಅಧಿಸೂಚಿತ ಪ್ರದೇಶವಾಗಿ ರಾಮನಗರ ಜಿಲ್ಲೆಯ ಬಿಡದಿ ಮೊದಲ ಹಾಗೂ ಎರಡನೇ ಹಂತದಲ್ಲಿ- ವಲಯ 1 ಹಾಗೂ 2 ಕೈಗಾರಿಕಾ ಪ್ರದೇಶ ವಲಯವನ್ನು ಒಳಗೊಂಡಿದೆ ಎಂದು ಹೇಳಲಾಗಿದೆ. ಉಪ ಮುಖ್ಯಮಂತ್ರಿ ಹಾಗೂ ಬೆಂಗಳೂರು ನಗರಾಭಿವೃದ್ಧಿ ಸಚಿವ ಡಿ.ಕೆ ಶಿವಕುಮಾರ್ ಅವರು ರಾಮನಗರ ಭಾಗದಲ್ಲಿ ಹೆಚ್ಚು ಉತ್ತೇಜನ ನೀಡುತ್ತಿದ್ದಾರೆ. ಈಚೆಗೆ ಈ ಭಾಗವನ್ನು ದಕ್ಷಿಣ ಬೆಂಗಳೂರು ಎಂದು ನಾಮಕರಣ ಮಾಡುವುದಾಗಿ ಅವರು ಹೇಳಿದ್ದರು.
ಉತ್ತರ ಕರ್ನಾಟಕದ ವಿರೋಧ: ಇನ್ನು ರಾಜ್ಯ ಸರ್ಕಾರದ ಈ ಕ್ರಮಕ್ಕೆ ಉತ್ತರ ಕರ್ನಾಟಕದಿಂದ ವಿರೋಧ ವ್ಯಕ್ತವಾಗಿದೆ. ಎಲ್ಲವನ್ನೂ ದಕ್ಷಿಣ ಕರ್ನಾಟಕಕ್ಕೆ ನೀಡಿದರೆ ಹೇಗೆ ಎನ್ನುವ ಪ್ರಶ್ನೆ ಎದುರಾಗಿದೆ.












Click it and Unblock the Notifications