• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ರಾಜ್ಯಪಾಲರ ಬಾಯಿಯಿಂದ ಯಡಿಯೂರಪ್ಪ ಸರಕಾರ ಬರೀ ಸುಳ್ಳನ್ನೇ ಹೇಳಿಸಿದೆ

|

ಬೆಂಗಳೂರು, ಜ 28: ರಾಜ್ಯ ವಿಧಾನಮಂಡಲದ ಜಂಟಿ ಅಧಿವೇಶನವನ್ನು ಉದ್ದೇಶಿಸಿ ರಾಜ್ಯಪಾಲರು ಮಾಡಿದ ಭಾಷಣದಲ್ಲಿ ಒಂದಷ್ಟು ಸುಳ್ಳು, ಮತ್ತಷ್ಟು ತಪ್ಪು ಮಾಹಿತಿಯಿದೆ ಎಂದು ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಆಕ್ರೋಶ ವ್ಯಕ್ತ ಪಡಿಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಮಾಡಿರುವ ಟ್ವೀಟ್ ಹೀಗಿದೆ, "ಒಂದಷ್ಟು ಸುಳ್ಳು, ಇನ್ನೊಂದಿಷ್ಟು ತಪ್ಪು ಮಾಹಿತಿ ಮತ್ತು‌‌ ಹಿಂದಿನ ಕಾಂಗ್ರೆಸ್ ಸರ್ಕಾರದ‌ ಸಾಧನೆಗಳನ್ನು ರಾಜ್ಯಪಾಲರ ಭಾಷಣದಲ್ಲಿ ಹೇಳಿಸುವ ಮೂಲಕ ರಾಜ್ಯದ ಬಿಜೆಪಿ ಸರ್ಕಾರ ತನ್ನ ವೈಫಲ್ಯಗಳನ್ನು ಮುಚ್ಚಿಹಾಕಲು ಹತಾಶ ಪ್ರಯತ್ನ ನಡೆಸಿದೆ".

ಇಂದಿನಿಂದ ಅಧಿವೇಶನ: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆಇಂದಿನಿಂದ ಅಧಿವೇಶನ: ವಿಧಾನಸೌಧದ ಸುತ್ತಮುತ್ತ ನಿಷೇಧಾಜ್ಞೆ

"ಕೊರೊನಾದಂತಹ ಮಾರಕ ರೋಗವನ್ನು ಬ್ರಹ್ಮಾಂಡ ಭ್ರಷ್ಟಚಾರವೆಸಗಲು ದುರುಪಯೋಗ ಪಡಿಸಿಕೊಂಡ @BSYBJP ಸರ್ಕಾರ, ರೋಗ ನಿಯಂತ್ರಣದಲ್ಲಿನ ವೈಫಲ್ಯಗಳನ್ನು ಸುಳ್ಳು ಅಂಕಿ ಅಂಶಗಳ ಮೂಲಕ ಮರೆಮಾಚಲು ಪ್ರಯತ್ನಿಸಿದೆ"ಎಂದು ಸಿದ್ದರಾಮಯ್ಯ ಆಪಾದಿಸಿದ್ದಾರೆ.

"ತೆರಿಗೆಯಲ್ಲಿ ಪಾಲು,‌ 15ನೇ ಹಣಕಾಸು ಆಯೋಗದ ಅನುದಾನ ಮತ್ತು ಜಿಎಸ್ ಟಿ ಪರಿಹಾರದಲ್ಲಿ ಕೇಂದ್ರ ಸರ್ಕಾರದಿಂದ ಕರ್ನಾಟಕಕ್ಕೆ ಆಗಿರುವ ಅನ್ಯಾಯದ ವಿವರವನ್ನು ರಾಜ್ಯಪಾಲರ ಭಾಷಣದಲ್ಲಿ ನೀಡಿದ್ದರೆ @BSYBJP ಸರ್ಕಾರದ ಬಣ್ಣ‌ ಸಂಪೂರ್ಣ ಬಯಲಾಗುತ್ತಿತ್ತು"ಎಂದು ಸಿದ್ದರಾಮಯ್ಯ ಹೇಳಿದ್ದಾರೆ.

"ಕಳೆದ ವರ್ಷ ಅತಿವೃಷ್ಟಿಯಿಂದ 9,94,556 ಹೆಕ್ಟೇರ್ ಬೆಳೆ ನಾಶವೂ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.25,518 ಕೋಟಿ ಪರಿಹಾರ ಕೇಳಿದ್ದ ರಾಜ್ಯ @BJP4Karnataka ಸರ್ಕಾರ, ಈ ಬಾರಿ 20,86,703 ಹೆಕ್ಟೇರ್ ಬೆಳೆ ನಾಶ ಸೇರಿದಂತೆ ಒಟ್ಟು ನಷ್ಟಕ್ಕೆ ರೂ.24,941.73 ಕೋಟಿ ಪರಿಹಾರವನ್ನು ಕೇಳಿ ರಾಜ್ಯಕ್ಕೆ ದ್ರೋಹ ಬಗೆದಿದೆ"ಎಂದು ಸಿದ್ದರಾಮಯ್ಯ ಬೇಸರ ವ್ಯಕ್ತ ಪಡಿಸಿದ್ದಾರೆ.

ನಾಳೆಯಿಂದ ಜಂಟಿ ಅಧಿವೇಶನ; ಸರ್ಕಾರಕ್ಕೆ ಮಹತ್ವದ ಸಂದೇಶ ಕೊಟ್ಟ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ!ನಾಳೆಯಿಂದ ಜಂಟಿ ಅಧಿವೇಶನ; ಸರ್ಕಾರಕ್ಕೆ ಮಹತ್ವದ ಸಂದೇಶ ಕೊಟ್ಟ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ!

"ಕಳೆದ ವರ್ಷ ರೂ.25,518 ಕೋಟಿ ಪರಿಹಾರ ಕೇಳಿದರೂ ಕೇಂದ್ರದಿಂದ ಕೇಳಿದರೂ ಸಿಕ್ಕಿರುವುದು ಮಾತ್ರ ರೂ.1,634 ಕೋಟಿ ಮಾತ್ರ. ರಾಜ್ಯ @BJP4Karnataka ಸರ್ಕಾರ ಸಮರ್ಪಕ ಸಮೀಕ್ಷಾ ವರದಿ ಮೂಲಕ ಕೇಂದ್ರದ ಮೇಲೆ ಒತ್ತಡ ಹೇರಿದರೆ ಮಾತ್ರ ಹೆಚ್ಚಿನ ಪರಿಹಾರ ಸಿಗಲು ಸಾಧ್ಯ" ಎಂದು ಸಿದ್ದರಾಮಯ್ಯ ಟ್ವೀಟ್ ಮಾಡಿದ್ದಾರೆ. (ಚಿತ್ರ:ಪಿಟಿಐ)

English summary
Governor Address In Joint Session Of Assembly: BSY Government False Information Said, Siddaramaiah,
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X