ಹಂಗಾಮಿ ಸ್ಪೀಕರ್ ಆಯ್ಕೆ ಬಿಜೆಪಿಯ ಕೆ.ಜಿ. ಬೋಪಯ್ಯ ನೇಮಕ
ಬೆಂಗಳೂರು, ಮೇ 18: ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ಬಿಜೆಪಿಯ ಕೆಜಿ ಬೋಪಯ್ಯ ನೇಮಕವಾಗಿದ್ದಾರೆ.
ವಿರಾಜಪೇಟೆ ಶಾಸಕ ಕೆಜಿ ಬೋಪಯ್ಯ ಹೆಸರನ್ನು ಸ್ಪೀಕರ್ ಸ್ಥಾನಕ್ಕೆ ಶಿಫಾರಸ್ಸು ಮಾಡಿ ವಿಧಾನಸಭೆ ಕಾರ್ಯದರ್ಶಿ ರಾಜ್ಯಪಾಲರಿಗೆ ಪ್ರಸ್ತಾವನೆ ಸಲ್ಲಿಸಿದ್ದರು. ಪ್ರಸ್ತಾವನೆಗೆ ರಾಜ್ಯಪಾಲ ವಜೂಭಾಯಿ ವಾಲಾ ಒಪ್ಪಿಗೆ ಸೂಚಿಸಿದ್ದು ಕೆಜಿ ಬೋಪಯ್ಯರನ್ನು ಸ್ಪೀಕರ್ ಆಗಿ ನೇಮಕ ಮಾಡಿದ್ದಾರೆ.
2008-13ರ ಬಿಜೆಪಿ ಸರಕಾರದ ಅವಧಿಯಲ್ಲಿ ಕೆಜಿ ಬೋಪಯ್ಯ ಸ್ಪೀಕರ್ ಆಗಿ ಕಾರ್ಯನಿರ್ವಹಿಸಿದ್ದರು. ಈ ಸಂದರ್ಭ ನಡೆದ ವಿಶ್ವಾಸ ಮತಯಾಚನೆಯ ಪ್ರಕ್ರಿಯೆಗಳನ್ನು ಅವರು ನಿರ್ವಹಿಸಿದ್ದರು. ಇದೀಗ ಅವರನ್ನು ಹಂಗಾಮಿ ಸ್ಪೀಕರ್ ಆಗಿ ನೇಮಕ ಮಾಡಲಾಗಿದೆ.

ಶನಿವಾರ ಸಂಜೆ 4 ಗಂಟೆಗೆ ನಡೆಯಲಿರುವ ಬಹು ನಿರೀಕ್ಷಿತ ವಿಶ್ವಾಸ ಮತ ಯಾಚನೆ ಪ್ರಕ್ರಿಯೆಯನ್ನು ಕೆಜಿ ಬೋಪಯ್ಯನವರೇ ನಿರ್ವಹಿಸಲಿದ್ದಾರೆ.
ಪ್ರಮಾಣವಚನ ಸ್ವೀಕಾರ
ಈಗಾಗಲೇ ಕೆಜಿ ಬೋಪಯ್ಯ ಹಂಗಾಮಿ ಸ್ಪೀಕರ್ ಆಗಿ ಪ್ರಮಾಣವಚನವನ್ನೂ ಸ್ವೀಕರಿಸಿದ್ದಾರೆ. ರಾಜ್ಯಪಾಲ ವಜೂಭಾಯಿ ವಾಲಾ ಅವರಿಗೆ ಪ್ರಮಾಣ ವಚನ ಬೋಧಿಸಿದ್ದಾರೆ.












Click it and Unblock the Notifications