ಸಿಎಂ ಬೆಸ್ಟ್, ಕೆಲವು ಸಚಿವರು ವೇಸ್ಟ್: ರಾಜ್ಯಪಾಲರು

H.R.Bhardwaj
ಉತ್ತರ ಕನ್ನಡ, ಡಿ. 4 : ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ಸಿಎಂ ಸಿದ್ದರಾಮಯ್ಯ ಅವರ ಆಡಳಿತ ವೈಖರಿಯನ್ನು ಮತ್ತೊಮ್ಮೆ ಮುಕ್ತ ಕಂಠದಿಂದ ಶ್ಲಾಘಿಸಿದ್ದಾರೆ. ಆದರೆ, ಸಿಎಂ ಸಚಿವ ಸಂಪುಟದ ಕೆಲವು ಸಚಿವರ ವಿರುದ್ಧ ಅವರು ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಿಎಂ ಉತ್ತಮವಾಗಿ ಕಾರ್ಯನಿರ್ವಹಿಸುತ್ತಿದ್ದಾರೆ. ಆದರೆ, ಕೆಲವು ಸಚಿವರ ಕಾರ್ಯ ನನಗೆ ತೃಪ್ತಿ ತಂದಿಲ್ಲ ಎಂದು ರಾಜ್ಯಪಾಲರು ಬಹಿರಂಗವಾಗಿ ಹೇಳಿದ್ದಾರೆ.

ಬುಧವಾರ ಕಾರವಾರದ ಸಿ-ಬರ್ಡ್ ನೌಕಾನೆಲೆಯಲ್ಲಿ ಪತ್ರಿಕಾಗೋಷ್ಠಿ ನಡೆಸಿದ ರಾಜ್ಯಪಾಲರು, ಸಿಎಂ ಸಿದ್ದರಾಮಯ್ಯ ಅವರ ಕಾರ್ಯ ವೈಖರಿಯನ್ನು ಹೊಗಳಿದರು. ವೈಯಕ್ತಿಕವಾಗಿಯೂ ಯಾವುದೇ ಆರೋಪಗಳಿಲ್ಲದ ಸಿದ್ದರಾಮಯ್ಯ ಉತ್ತಮವಾಗಿ ಆಡಳಿತ ನಡೆಸುತ್ತಿದ್ದಾರೆ. ಆದರೆ, ಕೆಲವು ಸಚಿವರು ಕಾರ್ಯವೈಖರಿ ತಮಗೆ ತೃಪ್ತಿ ತಂದಿಲ್ಲ ಎಂದು ಹೇಳಿದರು.

ವಿಶ್ವವಿದ್ಯಾಲಯಗಳಿಗೆ ಕುಲಪತಿಗಳನ್ನು ನೇಮಕ ಮಾಡಲು ಉನ್ನತ ಶಿಕ್ಷಣ ಸಚಿವರು ಅನಗತ್ಯ ವಿಳಂಬ ಮಾಡುತ್ತಿದ್ದಾರೆ ಎಂದು ಭಾರದ್ವಾಜ್ ಸಚಿವ ಆರ್.ವಿ.ದೇಶಪಾಂಡೆ ವಿರುದ್ಧ ಪರೋಕ್ಷ ವಾಗ್ದಾಳಿ ನಡೆಸಿದರು. ಮುಖ್ಯಮಂತ್ರಿ ಸಿದ್ದರಾಮಯ್ಯ ಈ ಕುರಿತು ಗಮನವಹಿಸಿ ವಿವಿಗಳಿಗೆ ಶೀಘ್ರವೇ ಕುಲಪತಿಗಳನ್ನು ನೇಮಕ ಮಾಡಬೇಕು ಎಂದು ಸಲಹೆ ನೀಡಿದರು.(ಶಾಸಕಾಂಗ ಸಭೆಯಲ್ಲಿ ಸಿಎಂ ಗರಂ, ಸಚಿವರಿಗೆ ಕ್ಲಾಸ್!)

ರಾಮನಗರದಲ್ಲಿನ ಆರೋಗ್ಯ ವಿವಿ ಕಟ್ಟಡ ಕಾರ್ಯ ವಿಳಂಬವಾಗುತ್ತದೆ ಎಂದು ಅಸಮಾಧಾನ ವ್ಯಕ್ತಪಡಿಸಿದ ರಾಜ್ಯಪಾಲರು, ಖಾಸಗಿ ಜಾಗದಲ್ಲಿ ವಿವಿ ಕಟ್ಟಡ ನಿರ್ಮಾಣ ಮಾಡುವುದು ಉತ್ತಮವಲ್ಲ ಎಂದು ಅಭಿಪ್ರಾಯಪಟ್ಟರು. ಬೆಂಗಳೂರಿನಲ್ಲೇ ಸ್ಥಳವಕಾಶವಿದೆ. ಆದರೆ, ರಾಮನಗರದಲ್ಲಿ ಏಕೆ ವಿವಿ ಕಟ್ಟಡ ನಿರ್ಮಾಣ ವಾಗುತ್ತಿದೆ ಎಂದು ಪ್ರಶ್ನಿಸಿದರು.

ದೇಶಪಾಂಡೆ ಟಾರ್ಗೆಟ್ : ಕೆಲವು ದಿನ ಹಿಂದೆಯೂ ಸಿಎಂ ಸಿದ್ದರಾಮಯ್ಯ ರಾಜ್ಯಪಾಲರನ್ನು ಭೇಟಿ ಆದಾಗ ಅವರು, ಉನ್ನತ ಶಿಕ್ಷಣ ಸಚಿವ ಆರ್‌.ವಿ.­ದೇಶಪಾಂಡೆ ಅವರ ಕಾರ್ಯವೈಖರಿ ಬಗ್ಗೆ ಅಸಮಾಧಾ­ನ ವ್ಯಕ್ತಪಡಿಸಿದ್ದರು. ಸದ್ಯ ಮತ್ತೊಮ್ಮೆ ಪರೋಕ್ಷವಾಗಿ ದೇಶಪಾಂಡೆ ಅವರನ್ನು ರಾಜ್ಯಪಾಲರು ಟಾರ್ಗೆಟ್ ಮಾಡಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+