ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ ರಚನೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ ರಾಜ್ಯಪಾಲ ವಾಲಾ

By Sachhidananda Acharya
|
Google Oneindia Kannada News

ಬೆಂಗಳೂರು, ಮೇ 19: ಜೆಡಿಎಸ್ ರಾಜ್ಯಾಧ್ಯಕ್ಷ, ಮಾಜಿ ಮುಖ್ಯಮಂತ್ರಿ ಎಚ್.ಡಿ. ಕುಮಾರಸ್ವಾಮಿಯವರಿಗೆ ಸರಕಾರ ರಚಿಸುವಂತೆ ರಾಜ್ಯಪಾಲ ವಜೂಭಾಯಿ ವಾಲಾ ಆಹ್ವಾನ ನೀಡಿದ್ದಾರೆ.

ತಮಗೆ 116 ಶಾಸಕರ ಬೆಂಬಲ ಇದೆ. ಸರಕಾರ ರಚಿಸಲು ಅವಕಾಶ ನೀಡಿ ಎಂದು ಎಚ್.ಡಿ. ಕುಮಾರಸ್ವಾಮಿ ರಾಜ್ಯಪಾಲರ ಬಳಿ ಹಕ್ಕು ಮಂಡಿಸಿದ್ದರು.

LIVE:ಸರ್ಕಾರ ರಚನೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ ರಾಜ್ಯಪಾಲ ವಾಲಾLIVE:ಸರ್ಕಾರ ರಚನೆಗೆ ಕುಮಾರಸ್ವಾಮಿಯನ್ನು ಆಹ್ವಾನಿಸಿದ ರಾಜ್ಯಪಾಲ ವಾಲಾ

ಆದರೆ ಈ ಹಿಂದೆ ರಾಜ್ಯಪಾಲರು ಬಿಜೆಪಿ ರಾಜ್ಯಾಧ್ಯಕ್ಷ ಬಿ.ಎಸ್. ಯಡಿಯೂರಪ್ಪರನ್ನು ಸರಕಾರ ರಚನೆಗೆ ಆಹ್ವಾನಿಸಿದ್ದರು. ಇದೀಗ ಜೆಡಿಎಸ್-ಕಾಂಗ್ರೆಸ್ ಮೈತ್ರಿಕೂಟಕ್ಕೆ ಸರಕಾರ ರಚನೆಗೆ ಆಹ್ವಾನ ನೀಡಿದ್ದಾರೆ.

 Governor invites HD Kumaraswamy to form the government

ಮೈತ್ರಿಕೂಟದಿಂದ ಎಚ್.ಡಿ. ಕುಮಾರಸ್ವಾಮಿ ಮುಖ್ಯಮಂತ್ರಿಯಾಗಲಿದ್ದಾರೆ. ಆದರೆ ಪ್ರಮಾಣ ವಚನಕ್ಕೆ ಇನ್ನೂ ಸಮಯ ನಿಗದಿಯಾಗಿಲ್ಲ.

ಸಂಭಾವ್ಯ : ಕೈ-ತೆನೆ ಮೈತ್ರಿ ಸರ್ಕಾರದಲ್ಲಿ ಸಚಿವರು ಹಾಗೂ ಖಾತೆಗಳುಸಂಭಾವ್ಯ : ಕೈ-ತೆನೆ ಮೈತ್ರಿ ಸರ್ಕಾರದಲ್ಲಿ ಸಚಿವರು ಹಾಗೂ ಖಾತೆಗಳು

ರಾಜ್ಯಪಾಲರ ಭೇಟಿ

ಇಂದು ಸಂಜೆ 7.30ಕ್ಕೆ ರಾಜ್ಯಪಾಲರನ್ನು ಎಚ್.ಡಿ. ಕುಮಾರಸ್ವಾಮಿ ಭೇಟಿಯಾಗಲಿದ್ದಾರೆ. ಈ ಸಂದರ್ಭದಲ್ಲಿ ಪ್ರಮಾಣ ವಚನಕ್ಕೆ ದಿನ ಮತ್ತು ಸಮಯ ನಿಗದಿ ಪಡಿಸುವ ಸಾಧ್ಯತೆ ಇದೆ.

ವರದಿಗಳ ಪ್ರಕಾರ ಸೋಮವಾರ ಮಧ್ಯಾಹ್ನ ಕುಮಾರಸ್ವಾಮಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ.

English summary
Governor Vajubhai Vala invited JD(S) state president HD Kumaraswamy to form the government. As per the reports he will take oath on Monday.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X