Siddaramaiah: ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ, ತುರ್ತು ಸಭೆ

ಬೆಂಗಳೂರು, ಆಗಸ್ಟ್ 17: ಕರ್ನಾಟಕದ ರಾಜಕೀಯದಲ್ಲಿ ಮಹತ್ವದ ಬೆಳವಣಿಗೆಯೊಂದು ನಡೆದಿದೆ. ಮೈಸೂರು ನಗರಾಭಿವೃದ್ಧಿ ಪ್ರಾಧಿಕಾರ(ಮುಡಾ) ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್ ಅನುಮತಿ ನೀಡಿದ್ದಾರೆ. ಈ ಹಿನ್ನಲೆಯಲ್ಲಿ ಸಿಎಂ ಸಿದ್ದರಾಮಯ್ಯ ತುರ್ತು ಸಭೆಯನ್ನು ನಡೆಸುತ್ತಿದ್ದಾರೆ.

ಶನಿವಾರ ರಾಜ್ಯಪಾಲರು ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದಾರೆ. ಸಾಮಾಜಿಕ ಕಾರ್ಯಕರ್ತ ಟಿ. ಜೆ. ಅಬ್ರಾಹಂ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿಯನ್ನು ನೀಡುವಂತೆ ರಾಜ್ಯಪಾಲರಿಗೆ ಅರ್ಜಿಯನ್ನು ಸಲ್ಲಿಕೆ ಮಾಡಿದ್ದರು.

Governor Issues Sanction For Prosecution Chief Minister Siddaramaiah Emergny Meeting

ಮುಡಾ ಬದಲಿ ನಿವೇಶನ ಹಂಚಿಕೆಗೆ ಸಂಬಂಧಿಸಿದಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಿಸಲು ಅವರ ವಿರುದ್ಧ ಪ್ರಾಸಿಕ್ಯೂಷನ್‌ಗೆ ಅನುಮತಿ ಕೇಳಲಾಗಿತ್ತು. ಈ ವಿಚಾರದಲ್ಲಿ ರಾಜ್ಯಪಾಲರು ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದರು, ಶನಿವಾರ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ್ದು, ಈ ಕುರಿತು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಕಡತ ರವಾನೆ ಮಾಡಿದ್ದಾರೆ.

ಸಿದ್ದರಾಮಯ್ಯ ತುರ್ತು ಸಭೆ: ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಹಿನ್ನಲೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಗೃಹ ಕಛೇರಿ ಕೃಷ್ಣದಲ್ಲಿ ತುರ್ತು ಸಭೆಯನ್ನು ನಡೆಸುತ್ತಿದ್ದಾರೆ. ಮುಂದಿನ ಕಾನೂನು ಹೋರಾಟದ ಕುರಿತು ಚರ್ಚೆಯನ್ನು ನಡೆಸುತ್ತಿದ್ದಾರೆ.

ಈ ಸಭೆಯಲ್ಲಿ ಮುಖ್ಯಮಂತ್ರಿಗಳ ಕಾನೂನು ಸಲಹೆಗಾರ ಎ. ಎಸ್. ಪೊನ್ನಣ್ಣ, ಸರ್ಕಾರದ ಮುಖ್ಯ ಕಾರ್ಯದರ್ಶಿ ಶಾಲಿನಿ ರಜನೀಶ್‌, ಗುಪ್ತಚರ ಇಲಾಖೆ ಮುಖ್ಯಸ್ಥ ಶರತ್ ಚಂದ್ರ ಭಾಗಿಯಾಗಿದ್ದಾರೆ. ಮುಖ್ಯಮಂತ್ರಿಗಳು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿರುವ ಕುರಿತು ಕರ್ನಾಟಕ ಹೈಕೋರ್ಟ್‌ಗೆ ಅರ್ಜಿ ಸಲ್ಲಿಕೆ ಮಾಡುವ ನಿರೀಕ್ಷೆ ಇದೆ.

ಕೆಲವು ದಿನಗಳ ಹಿಂದೆ ತಮ್ಮ ನಿವಾಸದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಸಚಿವರ ಜೊತೆ ಉಪಹಾರ ಕೂಟ ನಡೆಸಿದ್ದರು. ಈ ಸಭೆಯಲ್ಲಿಯೇ ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಹೈಕೋರ್ಟ್ ಮೆಟ್ಟಿಲೇರಲು ತೀರ್ಮಾನವನ್ನು ಕೈಗೊಂಡಿದ್ದರು. ಈಗ ಮುಖ್ಯಮಂತ್ರಿಗಳು ಕಾನೂನು ಹೋರಾಟ ನಡೆಸುವ ನಿರೀಕ್ಷೆ ಇದೆ.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದರೆ ಮುಂದಿನ ಹೋರಾಟದ ಬಗ್ಗೆ ಸಚಿವರ ಜೊತೆ ಸಿದ್ದರಾಮಯ್ಯ ವಿವರವಾಗಿ ಚರ್ಚೆ ನಡೆಸಿದ್ದರು. ಮುಡಾ ವಿಚಾರದಲ್ಲಿ ಮುಖ್ಯಮಂತ್ರಿಗಳಿಗೆ ಎಲ್ಲಾ ಸಚಿವರು ಸಂಪೂರ್ಣ ಬೆಂಬಲ ನೀಡಿದ್ದರು. ಈಗ ರಾಜ್ಯಪಾಲರು ಅನುಮತಿ ನೀಡುತ್ತಿದ್ದಂತೆಯೇ ಸಚಿವರು ಕೇಂದ್ರ ಸರ್ಕಾರ, ರಾಜ್ಯಪಾಲರ ನಡೆ ವಿರುದ್ಧ ಆಕ್ರೋಶವನ್ನು ವ್ಯಕ್ತಪಡಿಸುತ್ತಿದ್ದಾರೆ.

ರಾಜ್ಯಪಾಲರು ಮುಖ್ಯಮಂತ್ರಿ ಸಿದ್ದರಾಮಯ್ಯಗೆ ಶೋಕಾಸ್ ನೋಟಿಸ್ ನೀಡಿದ್ದು ಸರ್ಕಾರ ಮತ್ತು ರಾಜಭನವನದ ನಡುವನ ಸಂಘರ್ಷಕ್ಕೆ ಕಾರಣವಾಗಿತ್ತು. ಈ ಎಲ್ಲಾ ಬೆಳವಣಿಗೆ ಬಳಿಕ ಮೊದಲ ಬಾರಿಗೆ ಆಗಸ್ಟ್ 15ರಂದು ಸ್ವಾತಂತ್ರ್ಯೋತ್ಸವದ ಅಂಗವಾಗಿ ರಾಜ್ಯಪಾಲ ಥಾವರಚಂದ್ ಗೆಹ್ಲೋಟ್‌ ರಾಜಭವನದಲ್ಲಿ ಆಯೋಜಿಸಿದ್ದ ಉಪಹಾರ ಕೂಟದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಪಾಲ್ಗೊಂಡಿದ್ದರು.

ರಾಜ್ಯಪಾಲರು ಪ್ರಾಸಿಕ್ಯೂಷನ್‌ಗೆ ಅನುಮತಿ ನೀಡಿದ ಬಳಿಕ ವಿವಿಧ ಸಚಿವರು ಪ್ರತಿಕ್ರಿಯೆ ನೀಡಿದ್ದಾರೆ. ಮುಖ್ಯಮಂತ್ರಿ ಸಿದ್ದರಾಮಯ್ಯ ರಾಜೀನಾಮೆ ನೀಡುವುದಿಲ್ಲ ಎಂದು ಹೇಳಿದ್ದಾರೆ. ಕೆಲವು ಸಚಿವರು ಸಿದ್ದರಾಮಯ್ಯ ಭೇಟಿಯಾಗಲು ಗೃಹ ಕಛೇರಿಗೆ ಆಗಮಿಸುತ್ತಿದ್ದಾರೆ.

ಕೇಂದ್ರ ಸರ್ಕಾರ ರಾಜ್ಯಪಾಲರನ್ನು ಬಳಕೆ ಮಾಡಿಕೊಂಡು ಸರ್ಕಾರದ ವಿರುದ್ಧ ಷಡ್ಯಂತ್ರವನ್ನು ರೂಪಿಸಿದೆ. ನಾವೆಲ್ಲರೂ ಒಗ್ಗಟ್ಟಾಗಿದ್ದೇವೆ. ಕಾನೂನು ಬಾಹಿರ ನಡೆಯನ್ನು ಒಟ್ಟಾಗಿ ಎದುರಿಸುತ್ತೇವೆ ಎಂದು ಸಚಿವರು ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಬೆಂಬಲಿಸಿದ್ದಾರೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+