ಕೇಂದ್ರಕ್ಕೆ ರಾಜ್ಯಪಾಲರಿಂದ ದ. ಕನ್ನಡ ಕೋಮು ಗಲಭೆಯ ವರದಿ ಸಲ್ಲಿಕೆ?

Subscribe to Oneindia Kannada

ಬೆಂಗಳೂರು, ಜುಲೈ 12: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ನಡೆಯುತ್ತಿರುವ ಕೋಮು ಗಲಭೆಯ ವರದಿಯನ್ನು ರಾಜ್ಯಪಾಲರು ಕೇಂದ್ರಕ್ಕೆ ಸಲ್ಲಿಸುವ ಸಾಧ್ಯತೆ ಇದೆ.

'ದಕ್ಷಿಣ ಕನ್ನಡದಲ್ಲಿ ಸಂಘರ್ಷ, ಕೇಂದ್ರ ಸಂಪುಟ ಸಭೆಯಲ್ಲಿ ಪ್ರಸ್ತಾಪಿಸುವೆ'

ಇಂದು (ಬುಧವಾರ) ದೆಹಲಿಗೆ ತೆರಳಲಿರುವ ರಾಜ್ಯಪಾಲ ವಜೂಭಾಯಿ ವಾಲಾ, ರಾಷ್ಟ್ರಪತಿ ಪ್ರಣವ್ ಮುಖರ್ಜಿ ಹಾಗೂ ಗೃಹ ಸಚಿವ ರಾಜನಾಥ್ ಸಿಂಗ್ ರನ್ನು ಭೇಟಿಯಾಗಲಿದ್ದಾರೆ. ಭೇಟಿ ವೇಳೆ ಅವರು ಜಿಲ್ಲೆಯ ಕಾನೂನು ಸುವ್ಯವಸ್ಥೆ ಬಗ್ಗೆ ಪ್ರಸ್ತಾಪಿಸುವ ಸಾಧ್ಯತೆಗಳಿವೆ.

Governor may submit Dakshina Kannada communal riots report to Union Govt

ಆಯಾ ರಾಜ್ಯದ ಕಾನೂನು ಸುವ್ಯವಸ್ಥೆ, ಸರ್ಕಾರದ ಕಾರ್ಯವೈಖರಿ ಕುರಿತು ತಿಂಗಳಿಗೊಮ್ಮೆ ರಾಷ್ಟ್ರಪತಿ ಮತ್ತು ಗೃಹ ಸಚಿವಾಲಯಕ್ಕೆ ರಾಜ್ಯಪಾಲರು ವರದಿ ಸಲ್ಲಿಸುತ್ತಾರೆ.

'ನೂರು ಶರತ್‌ಗಳು ಹುಟ್ಟಿ ಬಂದು ದುಷ್ಕರ್ಮಿಗಳಿಗೆ ಪಾಠ ಕಲಿಸಲಿದ್ದಾರೆ'

ಆದರೆ ದಕ್ಷಿಣ ಕನ್ನಡದಲ್ಲಿ ತಿಂಗಳು ಕಳೆದರೂ ತಣ್ಣಗಾಗದ ಕೋಮುಗಲಭೆ, ನಿರಂತರವಾಗಿ ನಡೆಯುತ್ತಿರುವ ಹಲ್ಲೆ, ಕೊಲೆ ಪ್ರಕರಣಗಳ ಕುರಿತು ಖುದ್ದು ವರದಿ ಸಲ್ಲಿಸಲು ರಾಜ್ಯಪಾಲರು ಮುಂದಾಗಿದ್ದಾರೆ ಎನ್ನಲಾಗಿದೆ.

ರಾಜನಾಥ್ ಸಿಂಗ್, ಪ್ರಣಬ್ ಮುಖರ್ಜಿ ಭೇಟಿ ವೇಳೆ ದಕ್ಷಿಣ ಕನ್ನಡದ 4 ತಾಲ್ಲೂಕುಗಳಲ್ಲಿ ನಿಷೇಧಾಜ್ಞೆ ಹೇರಿದ್ದರೂ ಗಲಭೆ, ಚೂರಿ ಇರಿತ ಪ್ರಕರಣಗಳು ಮರು ಕಳುಹಿಸುತ್ತಿರುವುದು, ಜಿಲ್ಲೆಯಲ್ಲಿರುವ ಉದ್ವಿಗ್ನ ಪರಿಸ್ಥಿತಿ, ಪರಿಸ್ಥಿತಿಯನ್ನು ನಿಭಾಯಿಸುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿರುವುನ್ನು ವರದಿಯಲ್ಲಿ ಪ್ರಸ್ತಾಪಿಸಲಿದ್ದಾರೆ ಎಂದು ಮೂಲಗಳು ಹೇಳಿದ್ದಾಗಿ 'ಪ್ರಜಾವಾಣಿ' ವರದಿ ಮಾಡಿದೆ.

ಪ್ರೊಪೋಸಲ್‏ಗೆ ನಿರೀಕ್ಷಿಸುತ್ತಿದ್ದೀರಾ? ಕನ್ನಡ ಮ್ಯಾಟ್ರಿಮೋನಿಯಲ್ಲಿ - ಉಚಿತ ನೋಂದಣಿ !

English summary
The Governor is likely to file a report to union government on the communal riots in Dakshina Kannada district.
Please Wait while comments are loading...