ಒಂದಂಕಿ ಲಾಟರಿ ಹಗರಣ, ವಿವರ ಕೇಳಿದ ರಾಜ್ಯಪಾಲರು
ಬೆಂಗಳೂರು, ಮೇ 25 : ಬಹುಕೋಟಿ ರೂಪಾಯಿ ಲಾಟರಿ ಹಗರಣದ ಬಗ್ಗೆ ವಿವರ ನೀಡುವಂತೆ ರಾಜ್ಯಪಾಲರು ಸರ್ಕಾರದ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿದ್ದಾರೆ. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವುದು ಆತಂಕ ಮೂಡಿಸಿದೆ ಎಂದು ಅವರು ಪತ್ರದಲ್ಲಿ ತಿಳಿಸಿದ್ದಾರೆ.
ಒಂದಂಕಿ ಲಾಟರಿ ಹಗರಣದ ವಿಷಯವನ್ನು ಮಾಧ್ಯಮಗಳಿಂದ ತಿಳಿದಿದ್ದೇನೆ. ಹಗರಣದ ಸಂಬಂಧ ವಿವರವಾದ ವರದಿಯನ್ನು ಸೋಮವಾರ ಸಂಜೆಯೊಳಗೆ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿ ಕೌಶಿಕ್ ಮುಖರ್ಜಿ ಅವರಿಗೆ ಪತ್ರ ಬರೆದಿದ್ದಾರೆ. [ಲಾಟರಿ ಹಗರಣವನ್ನು ಸಿಬಿಐ ತನಿಖೆಗೆ ಒಪ್ಪಿಸಿ]

'ಲಾಟರಿ ಹಗರಣದಲ್ಲಿ ಭಾಗಿಯಾದ ಆರೋಪದ ಮೇಲೆ ಹಿರಿಯ ಪೊಲೀಸ್ ಅಧಿಕಾರಿಗಳನ್ನು ಅಮಾನತು ಮಾಡಲಾಗಿದೆ ಎಂಬ ವಿಚಾರ ಮಾಧ್ಯಮಗಳಿಂದ ತಿಳಿಯಿತು. ಹಗರಣದಲ್ಲಿ ಪೊಲೀಸ್ ಅಧಿಕಾರಿಗಳು ಭಾಗಿಯಾಗಿರುವುದು ಆತಂಕ ಮೂಡಿಸಿದೆ' ಎಂದು ಅವರು ಪತ್ರದಲ್ಲಿ ವಿವರಿಸಿದ್ದಾರೆ.[ಸಿಐಡಿ ಪ್ರಶ್ನೆಗಳಿಗೆ ಅಲೋಕ್ ಕುಮಾರ್ ಉತ್ತರವೇನು?]
ಲಾಟರಿ ಹಗರಣದ ತನಿಖೆಯನ್ನು ಸರ್ಕಾರ ಸಿಐಡಿಗೆ ವಹಿಸಿದೆ. ಹಗರಣದ ಸಂಬಂಧ ಅಬಕಾರಿ ಮತ್ತು ಲಾಟರಿ ನಿಷೇಧ ದಳದ ಎಸ್ಪಿ ಧರಣೇಶ್ ಮತ್ತು ಐಜಿಪಿ ಅಲೋಕ್ ಕುಮಾರ್ ಅವರನ್ನು ಈಗಾಗಲೇ ಅಮಾನತುಗೊಳಿಸಿದೆ. ಭಾನುವಾರ ಸಿಐಡಿ ಅಧಿಕಾರಿಗಳು ಅಲೋಕ್ ಕುಮಾರ್ ಅವರ ವಿಚಾರಣೆಯನ್ನು ನಡೆಸಿದ್ದಾರೆ.












Click it and Unblock the Notifications