ವಿಪಕ್ಷಗಳ ಸಭೆಯಲ್ಲಿ ಐಎಎಸ್ ಅಧಿಕಾರಿಗಳ ಬಳಕೆ: ವರದಿ ಕೇಳಿದ ರಾಜ್ಯಪಾಲರು
ಬೆಂಗಳೂರು, ಜುಲೈ 22: ಲೋಕಸಭಾ ಚುನಾವಣೆ ಹಿನ್ನೆಲೆ ಬೆಂಗಳೂರಿನಲ್ಲಿ ಎರಡು ದಿನಗಳ ಕಾಲ ನಡೆದ ಪ್ರತಿಪಕ್ಷಗಳ ಸಮಾವೇಶದಲ್ಲಿ ರಾಜ್ಯ ಸರ್ಕಾರವು ಐಎಎಸ್ ಅಧಿಕಾರಿಗಳನ್ನ ಬಳಕೆ ಮಾಡಿಕೊಂಡಿದೆ ಎಂಬ ಆರೋಪದ ಕುರಿತು ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಅವರಿಂದ ವರದಿ ಕೇಳಿದ್ದಾರೆ.
ರಾಜ್ಯದ ಎರಡು ಪ್ರಮುಖ ವಿರೋಧ ಪಕ್ಷಗಳಾದ ಬಿಜೆಪಿ ಮತ್ತು ಜೆಡಿಎಸ್‌ನ ಜಂಟಿ ನಿಯೋಗದ ಮನವಿಯ ನಂತರ ರಾಜ್ಯಪಾಲರು ಮುಖ್ಯ ಕಾರ್ಯದರ್ಶಿಗೆ ಪತ್ರ ಬರೆದು ವಿವರಣೆ ಕೇಳಿದ್ದಾರ ಎಂದು ಸರ್ಕಾರಿ ಮೂಲಗಳು ತಿಳಿಸಿದೆ. ಜುಲೈ 17-18ರ ಸಭೆಯಲ್ಲಿ ವಿರೋಧ ಪಕ್ಷದ ನಾಯಕರಿಗೆ ಪ್ರೋಟೋಕಾಲ್ ಅಧಿಕಾರಿಗಳು ಎಂದು ನಿಯೋಜಸಿದ ಸುಮಾರು 25 ಅಧಿಕಾರಿಗಳನ್ನ ದುರುಪಯೋಗಪಡಿಸಿಕೊಂಡಿದ್ದಾರೆ ಎಂದು ಬಿಜೆಪಿ-ಜೆಡಿಸ್ ಮನವಿಯಲ್ಲಿ ತಿಳಿಸಲಾಗಿದೆ.

ಕರ್ನಾಟಕದ ವ್ಯವಹಾರಗಳಿಗೆ ಯಾವುದೇ ರೀತಿಯಲ್ಲಿ ಸಂಬಂಧವಿಲ್ಲದ ರಾಜಕೀಯ ಕಾರ್ಯಕ್ರಮಕ್ಕೆ ಐಎಸ್‌ಎಸ್ ಅಧಿಕಾರಿಗಳನ್ನು 'ಪ್ರೋಟೋಕಾಲ್ ಅಧಿಕಾರಿಗಳು' ಎಂದು ಘೋಷಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದೆ.
ಈ ಕುರಿತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ವಿವರಣೆ ಪಡೆಯುವಂತೆ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್‌ಗೆ ಬಿಜೆಪಿ ಹಾಗೂ ಜೆಡಿಎಸ್ ಮನವಿ ಮಾಡಿದ್ದವು. ಇದೇ ವಿಚಾರಕ್ಕೆ ವಿಧಾನಸಭೆಯಲ್ಲಿ ಬುಧವಾರ ಗಲಾಟೆಯಾಗಿ ಸ್ಪೀಕರ್ ಯುಟಿ ಖಾದರ್ 10 ಬಿಜೆಪಿ ಶಾಸಕರ ಅಮಾನತು ಮಾಡಿದ್ದರು. ಅಮಾನತು ಮಾಡಿರುವುದನ್ನ ಖಂಡಿಸಿ, ಬಿಜೆಪಿ ಹಾಗೂ ಜೆಡಿಎಸ್ ಶಾಸಕರು ಸದನವನ್ನ ಬಹಿಷ್ಕರಿಸಿದರು.
ಇನ್ನೂ ಕಾಂಗ್ರೆಸ್ ಸರ್ಕಾರದ ವಿರುದ್ದ ವಿಧಾನಸೌಧದ ಆವರಣದಲ್ಲಿರುವ ಮಹಾತ್ಮಗಾಂಧಿ ಪುತಿಮೆ ಎದುರು ಬಿಜೆಪಿ ಶಾಸಕರು ಧರಣಿ ಸತ್ಯಾಗ್ರಹ ನಡೆಸಿ, ಸರ್ಕಾರ ಹಾಗೂ ಸ್ಪೀಕರ್ ವಿರುದ್ಧ ಘೋಷಣೆಗಳನ್ನು ಕೂಗಿದರು. ಸ್ಪೀಕರ್ ಆಗಿರುವವರು ಪಕ್ಷಾತೀತವಾಗಿ ಅಧ್ಯಕ್ಷ ಸ್ಥಾನವನ್ನು ನಿರೀಕ್ಷಿಸಬೇಕು ಎಂದು ಸ್ವೀಕರ್ ಯು ಟಿ ಖಾದರ್ ವಿರುದ್ದ ಅಸಮಾಧಾನ ಹೊರಹಾಕಿದ್ದರು.












Click it and Unblock the Notifications