Karnataka Budget: ಪಂಚ ಗ್ಯಾರಂಟಿಗಳನ್ನು ಶ್ಲಾಘಿಸಿದ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್
ಬೆಂಗಳೂರು, ಮಾರ್ಚ್ 03: ಇಂದಿನಿಂದ ಬಜೆಟ್ ಅಧಿವೇಶನ ಆರಂಭವಾಗಲಿದೆ. ಇಂದು(ಸೋಮವಾರ) ವಿಧಾನಸೌಧದಲ್ಲಿ ರಾಜ್ಯಪಾಲರಾದಂತಹ ಥಾವರ್ ಚಂದ್ ಗೆಹ್ಲೋಟ್ ಅವರು, ಜಂಟಿ ಅಧಿವೇಶನದ ಕುರಿತು ಭಾಷಣ ಮಾಡಿದರು. ಗ್ಯಾರಂಟಿ ಯೋಜನೆಗಳನ್ನು ಜಾರಿ ಮಾಡಿ ಜನರಿಗೆ ಅನುಕೂಲವಾಗಿದೆ ರೈತರ ಪಂಪ್ಸೆಟ್ ಗಳಿಗೆ ಉಚಿತ ವಿದ್ಯುತ್ ವ್ಯವಸ್ಥೆ ಮಾಡಲಾಗಿದೆ. ಹಿಂದುಳಿದ ವರ್ಗಗಳಿಗೆ ಸಬ್ಸಿಡಿ ಇಂದ ಕುಟುಂಬಗಳಿಗೆ ಲಾಭವಾಗಿದೆ. ಆರ್ಥಿಕ ಸಾಮಾಜಿಕ ಮತ್ತು ಸಾಂಸ್ಕೃತಿಕ ಅಭಯ್ ಉದಯ ಆಗಿದೆ ಅಲ್ಲದೆ ಕತ್ತಲಿನಲ್ಲಿ ಇರುವವರಿಗೆ ಬೆಳಕು ತೋರಿಸುವ ಕೆಲಸ ಆಗಿದೆ ಎಂದು ತಿಳಿಸಿದರು.
ಸರ್ಕಾರ ಕಟ್ಟ ಕಡೆಯ ವ್ಯಕ್ತಿಯವರೆಗೂ ಯೋಜನೆ ತಲುಪಿಸಿದೆ. ಗ್ಯಾರೆಂಟಿಯಿಂದ ದಿವಾಳಿ ಆಗುತ್ತದೆ ಎಂದು ಹೇಳಿದ್ದರು. ಆದರೆ ಈ ಎಲ್ಲ ಆರೋಪಗಳನ್ನು ಸರ್ಕಾರ ಸುಳ್ಳು ಎಂದು ಸಾಬೀತು ಮಾಡಿದೆ. ಜಿಎಸ್‌ಟಿ ಸಂಗ್ರಹದಲ್ಲೂ ರಾಜ್ಯ ಮಂಚೂಣಿಯಲ್ಲಿದೆ. ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.

ಉತ್ತಮ ಮಳೆಯಿಂದಾಗಿ ರೈತರಿಗೆ ಉತ್ತಮ ಫಸಲು ಬಂದಿದೆ. ಸರ್ಕಾರದ ಕಲ್ಯಾಣ ಯೋಜನೆಗಳಿಂದ ಆತ್ಮಹತ್ಯೆ ಸಂಖ್ಯೆ ಕಡಿಮೆಯಾಗಿದೆ. ರೈತರ ಆತ್ಮಹತ್ಯೆ ಸಂಖ್ಯೆಯಲ್ಲಿ ಗಣನೀಯವಾಗಿ ಇಳಿಕೆಯಾಗಿದೆ. ನಮ್ಮ ಸರ್ಕಾರ ವೇಗದ ಗತಿಯಲ್ಲಿ ಅಭಿವೃದ್ಧಿ ಕೆಲಸ ಮಾಡುತ್ತಿದೆ. ರಾಜ್ಯದ ಆಯವ್ಯಯ ವರದಿಯಾಗುತ್ತಿದೆ ರಾಜ್ಯದಲ್ಲಿ ಉತ್ತಮವಳಿಯಾಗಿದ್ದರಿಂದ ಉತ್ತಮ ಬೆಳೆ ಬಂದಿದೆ. ರಾಜ ಸರ್ಕಾರ ಕಲ್ಯಾಣ ಕಾರ್ಯಕ್ರಮಗಳನ್ನು ಜಾರಿಗೊಳಿಸಿದೆ ಎಂದು ತಿಳಿಸಿದರು.
ಮೈಕ್ರೋ ಫೈನಾನ್ಸ್ ಸಿಬ್ಬಂದಿ ಕಿರುಕುಳ ತಡೆಗೆ, 5 ಲಕ್ಷ ರೂಪಾಯಿ ದಂಡ ವಿಧಿಸುವ ಸುಗ್ರೀವಾಜ್ಞೆ ಜಾರಿಗೆ ತರಲಾಗಿದೆ. ಕಿರು ಸಾಲ ವಸೂಲಾತಿ ಕಿರುಕುಳ ತಡೆಯಲು ಶಾಸನಾತ್ಮಕ ಕ್ರಮ ಕೈಗೊಳ್ಳಲಾಗಿದೆ. ಕಳೆದ 19 ತಿಂಗಳಲ್ಲಿ ಗಂಭೀರ ಕಾನೂನು ವ್ಯವಸ್ಥೆ ಸಮಸ್ಯೆ ಉದ್ಭವಿಸಿಲ್ಲ. ಪೊಲೀಸ್ ಠಾಣೆಗಳು ಜನಸ್ನೇಹಿಯಾಗಿ ಕೆಲಸ ಮಾಡುತ್ತಿವೆ. ಪೊಲೀಸರು ಅಪರಾಧಿಗಳನ್ನು ಶೀಘ್ರ ಪತ್ತೆ ಹಚ್ಚುವ ಕೆಲಸ ಮಾಡುತ್ತಿದ್ದಾರೆ. ಹಾಗಾಗಿ ಈ ಪ್ರಕರಣಗಳಲ್ಲೂ ಇಳಿಕೆ ಕಾಣುತ್ತಿದೆ. ಮೂಲಸೌಕರ್ಯ ಒದಗಿಸುವುದರಲ್ಲೂ ಕರ್ನಾಟಕ ಮುಂಚೂಣಿಯಲ್ಲಿದೆ.
ಸರ್ಕಾರಕ್ಕೆ ಶೇ.99 ಅಂಕ ನೀಡಿದ ರಾಜ್ಯಪಾಲರು : ದಿನೇಶ್ ಗೂಳಿಗೌಡ
ಸಂವಿಧಾನ ಮುಖ್ಯಸ್ಥರು, ರಾಜ್ಯಪಾಲರಾದ ಥಾವರ್‌ಚಂದ್ ಗೆಹ್ಲೋಟ್ ಅವರು ರಾಜ್ಯದ ಸರ್ಕಾರದ ಸಾಧನೆಗಳನ್ನು ಹಾಗೂ ಅಭಿವೃದ್ಧಿ ಕಾರ್ಯದ ಮುನ್ನೋಟವನ್ನು ಬಹಳ ಸಂತೋಷದಿಂದ ಮಂಡಿಸಿದ್ದಾರೆ. ನಮ್ಮ ಸರ್ಕಾರ ಕಳೆದ ಆಯವ್ಯಯದಲ್ಲಿ ಸಮಗ್ರ ಕರ್ನಾಟಕದ ಅಭಿವೃದ್ಧಿ ಬಗ್ಗೆ ಕೃಷಿ, ಹೈನುಗಾರಿಕೆ, ನೀರಾವರಿ, ಬೆಂಗಳೂರು ನಗರಾಭಿವೃದ್ಧಿ, ವಸತಿ, ಬಂಡವಾಳ ಹೂಡಿಕೆ, ರೇಷ್ಮೆ, ಮೂಲಭೂತ ಸೌಕರ್ಯ, ಶಿಕ್ಷಣ ಸೇರಿದಂತೆ ಗ್ಯಾರಂಟಿ ಯೋಜನೆಗಳ ಯಶಸ್ವಿ ಜಾರಿ ಬಗ್ಗೆ ಶ್ಲಾಘಿಸಿದ್ದಾರೆ.
ನಮ್ಮ ಬಜೆಟ್‌ನಲ್ಲಿ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಮತ್ತು ಉಪ ಮುಖ್ಯಮಂತ್ರಿಗಳಾದ ಡಿ.ಕೆ. ಶಿವಕುಮಾರ್ ಅವರು ಘೋಷಣೆ ಮಾಡಿದ್ದ 334 ಭರವಸೆಗಳಲ್ಲಿ 331 ಭರವಸೆಗಳನ್ನು ಜಾರಿ ಮಾಡಿ ಜನಕಲ್ಯಾಣಕ್ಕೆ ಕಾಂಗ್ರೆಸ್ ಸರ್ಕಾರ ನೆರವಾಗಿದೆ. ಶೇ.99. ಅಂಕಗಳನ್ನು ನಮ್ಮ ರಾಜ್ಯಪಾಲರು ನೀಡಿದ್ದಾರೆ. ನಮ್ಮ ರಾಜ್ಯಪಾಲರು ತಮ್ಮ ಭಾಷಣದಲ್ಲಿ ಪ್ರಸ್ತಾಪ ಮಾಡಿರುವಂಥ 117 ವಿಷಯಗಳನ್ನು ಸದನ ಮತ್ತು ರಾಜ್ಯದ ಜನತೆಯ ಮಧ್ಯೆ ಮಂಡಿಸಿರುವುದನ್ನು ಸನ್ಮಾನ್ಯ ವಿರೋಧ ಪಕ್ಷದ ನಾಯಕರು ಕೂಲಂಕಷವಾಗಿ ಓದಬೇಕು. ಅದನ್ನು ಬಿಟ್ಟು ಟೀಕೆ ಮಾಡಬೇಕೆಂದೇ ಟೀಕೆ ಮಾಡುವುದು ಸರಿಯಲ್ಲ ಎಂದು ಹೇಳಿದರು.












Click it and Unblock the Notifications