Get Updates
Get notified of breaking news, exclusive insights, and must-see stories!

ಬಿಪಿಎಲ್‌ ಪಡಿತರ ಚೀಟಿ, ಗೃಹ ಲಕ್ಷ್ಮಿ ಯೋಜನೆ ಕುರಿತು ರಾಜ್ಯಪಾಲರ ಭಾಷಣ

ಬೆಂಗಳೂರು, ಜನವರಿ 26: ರಾಜ್ಯದಲ್ಲಿ 76ನೇ ಗಣರಾಜ್ಯೋತ್ಸವ ಸಂಭ್ರಮ ಮನೆ ಮಾಡಿದೆ. ಬೆಂಗಳೂರಿನ ಮಾಣೆಕ್ ಷಾ ಪರೇಡ್ ಮೈದಾನದಲ್ಲಿ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ಗಜಾರೋಹಣ ನೆರವೇರಿಸಿ ಗೌರವ ವಂದನೆ ಸ್ವೀಕರಿಸಿದರು.

ಇದೇ ವೇಳೆ ರಾಜ್ಯವನ್ನು ಉದ್ದೇಶಿಸಿ ಭಾಷಣ ಮಾಡಿದ ರಾಜ್ಯಪಾಲರು, ರಾಜ್ಯದಲ್ಲಿ ಮಹಿಳೆಯರ ಆರ್ಥಿಕ ಸಬಲೀಕರಣಕ್ಕಾಗಿ ಜಾರಿಗೆ ತರಲಾದ "ಗೃಹಲಕ್ಷ್ಮಿ" ಯೋಜನೆಯಡಿ, ಆಗಸ್ಟ್ 2023 ರಿಂದ ಪ್ರತಿ ಕುಟುಂಬದ ಯಜಮಾನಿಯರಿಗೆ ಮಾಸಿಕ ರೂ.2000 ದರದಲ್ಲಿ ಒಟ್ಟು ರೂ.35,180.20 ಕೋಟಿ ಆರ್ಥಿಕ ನೆರವು ನೀಡಲಾಗಿದೆ. "ಗೃಹ ಜ್ಯೋತಿ" ಯೋಜನೆಯಡಿ, ಪ್ರಸ್ತುತ 1.62 ಕೋಟಿ ಗ್ರಾಹಕರು ಪ್ರಯೋಜನ ಪಡೆಯುತ್ತಿದ್ದಾರೆ. ಸರ್ಕಾರವು ಆಗಸ್ಟ್ 2023 ರಿಂದ ಈ ವರೆಗೆ (18 ತಿಂಗಳುಗಳು) ವಿದ್ಯುತ್ ಸರಬರಾಜು ಕಂಪನಿಗಳಿಗೆ ರೂ.13,409 ಕೋಟಿ ಸಬ್ಸಿಡಿ ಮೊತ್ತವನ್ನು ಬಿಡುಗಡೆ ಮಾಡಿದೆ.

Governor Thawar Chand Gehlot speech on the occasion of Republic Day

ರಾಜ್ಯ ಸರ್ಕಾರವು ತನ್ನ ಮಹತ್ವಾಕಾಂಕ್ಷಿ ಯೋಜನೆಯಾದ "ಶಕ್ತಿ" ಯೋಜನೆ - ಮಹಿಳೆಯರಿಗೆ ಉಚಿತ ಪ್ರಯಾಣವನ್ನು ದಿನಾಂಕ: 11.06.2023 ರಂದು ಜಾರಿಗೊಳಿಸಿದ್ದು, ಇದು ಮಹಿಳಾ ಸಬಲೀಕರಣವನ್ನು ಬಲಪಡಿಸುವತ್ತ ಸರ್ಕಾರದ ಒಂದು ಹೆಜ್ಜೆಯಾಗಿದೆ. ಯೋಜನೆಯ ಆರಂಭದಿಂದ 17-01-2025 ರವರೆಗೆ ರಾಜ್ಯದಲ್ಲಿ ಒಟ್ಟು 373.27 ಕೋಟಿ ಟ್ರಿಪ್ಪುಗಳಲ್ಲಿ ಫಲಾನುಭವಿಗಳು ಶಕ್ತಿ ಯೋಜನೆಯಿಂದ ಪ್ರಯೋಜನ ಪಡೆದಿದ್ದಾರೆ. ಇದಕ್ಕಾಗಿ ಸರ್ಕಾರವು 9,051 ಕೋಟಿ ರೂಪಾಯಿಗಳನ್ನು ವಿನಿಯೋಗಿಸಿದೆ.

"ಯುವನಿಧಿ" ಯೋಜನೆಯಡಿಯಲ್ಲಿ 1,94,986 ಅಭ್ಯರ್ಥಿಗಳನ್ನು ನೋಂದಾಯಿಸಲಾಗಿದೆ ಮತ್ತು 1,24,176 ಅರ್ಹ ಅಭ್ಯರ್ಥಿಗಳಿಗೆ ನೇರ ನಗದು ವರ್ಗಾವಣೆ ಮಾಡಲಾಗಿದೆ. ಯುವನಿಧಿ ಪ್ಲಸ್ ಉಪಕ್ರಮದಡಿಯಲ್ಲಿ, 25,000 ಯುವನಿಧಿ ಫಲಾನುಭವಿಗಳಿಗೆ ಅವರ ಉದ್ಯೋಗ ಸಾಮರ್ಥ್ಯವನ್ನು ಹೆಚ್ಚಿಸಲು ವಿವಿಧ ಕೌಶಲ್ಯಗಳ ಅಡಿಯಲ್ಲಿ ಕೌಶಲ್ಯ ತರಬೇತಿ ನೀಡಲಾಗುವುದು. 12,000 ಅಭ್ಯರ್ಥಿಗಳಿಗೆ ಕೈಗಾರಿಕಾ ಸಂಪರ್ಕ ಕೋಶ ಮತ್ತು ಭವಿಷ್ಯದ ಕೌಶಲ್ಯಗಳ ಅಡಿಯಲ್ಲಿ ತರಬೇತಿ ನೀಡಲಾಗುತ್ತದೆ.

ಜನರ ಹಸಿವನ್ನು ನೀಗಿಸುವುದರ ದೃಷ್ಟಿಯಿಂದ "ಅನ್ನಭಾಗ್ಯ" ಯೋಜನೆಯನ್ನು ಜಾರಿಗೆ ತರಲಾಯಿತು. ಬಿಪಿಎಲ್‌ ಪಡಿತರ ಚೀಟಿಗಳ ಪ್ರತಿ ಫಲಾನುಭವಿಗೆ 5 ಕೆಜಿ ಅಕ್ಕಿ ನೀಡುವ ಜೊತೆಗೆ, ಹೆಚ್ಚುವರಿ 5 ಕೆಜಿ ಅಕ್ಕಿಯ ಬದಲಾಗಿ ಪ್ರತಿ ಸದಸ್ಯರಿಗೆ ರೂ.170/- ರಂತೆ ಅವರ ಬ್ಯಾಂಕ್‌ ಖಾತೆಗೆ ನೇರ ಹಣ ವರ್ಗಾವಣೆ ಮಾಡಲಾಗುತ್ತಿದೆ. ಜುಲೈ-2023 ರಿಂದ ಇಲ್ಲಿಯವರೆಗೆ 4,48,12,382 ಫಲಾನುಭವಿಗಳ ಬ್ಯಾಂಕ್‌ ಖಾತೆಗಳಿಗೆ ಡಿಬಿಟಿ ಮೂಲಕ ವರ್ಗಾಯಿಸಲು ರೂ.9,775.51 ಕೋಟಿ ಬಿಡುಗಡೆ ಮಾಡಲಾಗಿದೆ.

ಕರ್ನಾಟಕ ಸರ್ಕಾರವು 2024-25ರಲ್ಲಿ ರಾಜ್ಯದ ಹಣಕಾಸು ವ್ಯವಸ್ಥೆಯನ್ನು ಉತ್ತಮವಾಗಿ ನಿರ್ವಹಿಸಿದೆ ಮತ್ತು ರಾಜ್ಯದ ಆರ್ಥಿಕ ಬೆಳವಣಿಗೆಯನ್ನು ಉತ್ತೇಜಿಸಿದೆ. ಡಿಸೆಂಬರ್ 2024 ರ ಅಂತ್ಯದ ವೇಳೆಗೆ, ರಾಜ್ಯದ ಆದಾಯ ಸಂಗ್ರಹವು ರೂ.1,81,908 ಕೋಟಿಗಳಷ್ಟಿತ್ತು ಮತ್ತು ವರ್ಷದಿಂದ ವರ್ಷಕ್ಕೆ 13% ಬೆಳವಣಿಗೆಯನ್ನು ಸಾಧಿಸಿಕೊಂಡು ಬಂದಿದೆ. ರಾಜ್ಯಗಳು ಸಂಗ್ರಹಿಸಿದ ಒಟ್ಟು ಜಿಎಸ್‌ಟಿ ಆದಾಯದ ವಿಷಯದಲ್ಲಿ ಕರ್ನಾಟಕವು ದೇಶದಲ್ಲಿ ಎರಡನೇ ಸ್ಥಾನದಲ್ಲಿದೆ.

ಸರ್ಕಾರವು ನಾಡಿನ ಸಮಗ್ರ ಅಭಿವೃದ್ಧಿ ಮತ್ತು ಸಂಪತ್ತಿನ ವಿನಿಯೋಗದಲ್ಲಿ ಸಾಮಾಜಿಕ ನ್ಯಾಯವನ್ನು ಅನುಷ್ಠಾನ ಮಾಡುವಲ್ಲಿ ಮಹತ್ತರ ಪಾತ್ರವಹಿಸಿದೆ. ಆರೋಗ್ಯ, ವಿದ್ಯುತ್‌, ಶಿಕ್ಷಣ, ರಸ್ತೆ ಮುಂತಾದ ಮೂಲಭೂತ ಸೌಲಭ್ಯಗಳ ಒದಗಿಸುವಿಕೆಯಲ್ಲಿ ಮುಂದೆ ಇದೆ. ನಮ್ಮ ಸಂವಿಧಾನವು ಅಂದಿನಿಂದ ಇಂದಿನವರೆಗೆ ಈ ದೇಶದ ಚರಿತ್ರೆಯನ್ನು ರೂಪಿಸಿದೆ, ಮುಂದಿನ ಭವಿಷ್ಯವನ್ನೂ ರೂಪಿಸಲಿದೆ. ಆದ್ದರಿಂದ ನಾವು ಸಂವಿಧಾನವನ್ನು ರಕ್ಷಿಸಿದರೆ ಸಂವಿಧಾನವು ನಮ್ಮನ್ನು ರಕ್ಷಿಸುತ್ತದೆ ಎಂಬ ಅರಿವು ಜನರಲ್ಲಿ ಮೂಡಿಸಬೇಕಾಗಿದೆ.

ನಮ್ಮ ಸಂವಿಧಾನದ ಉದಾತ್ತ ಆಶಯಗಳು ನಮ್ಮ ಶ್ರೀಮಂತ ಪರಂಪರೆಯನ್ನು ನೆನಪಿಸುತ್ತವೆ. ನಮ್ಮ ಸಂವಿಧಾನವು ನಮ್ಮ ಪ್ರಜಾಪ್ರಭುತ್ವವನ್ನು ರಕ್ಷಿಸುತ್ತದೆ. ನಮ್ಮ ಸಂವಿಧಾನವು ಸರ್ವರ ಪಾಲ್ಗೊಳ್ಳುವಿಕೆಯ ಮೂಲಕ ದೇಶವನ್ನು ಬೆಳೆಸುವ ಮತ್ತು ಎಲ್ಲಾ ನಾಗರಿಕರ ಸಮೃದ್ಧಿಯನ್ನು ಖಾತ್ರಿಪಡಿಸುವ ನಿಟ್ಟಿನಲ್ಲಿ ಕಂಕಣಬದ್ಧವಾಗಿದೆ ಮತ್ತು ಪ್ರತಿಯೊಬ್ಬರೂ ಹೊರಬೇಕಾದ ಜವಾಬ್ದಾರಿಗಳನ್ನು ಸಹ ಅದು ನೆನಪಿಸುತ್ತದೆ. ಗಣತಂತ್ರ ದಿನದ ಈ ವಿಶೇಷ ಸಂದರ್ಭದಲ್ಲಿ ನಾವೆಲ್ಲರೂ ನಮ್ಮ ಘನ ಸಂವಿಧಾನದ ಮೂಲಕ ದೇಶ ಸಾಧಿಸಿರುವ ಪ್ರಗತಿಯನ್ನು ಗೌರವಿಸೋಣ. ಅದೇ ರೀತಿ ಇಂತಹದ್ದೊಂದು ಮಹೋನ್ನತ ಸಂವಿಧಾನವನ್ನು ಬಾಬಾ ಸಾಹೇಬ್ ಡಾ. ಬಿ. ಆರ್. ಅಂಬೇಡ್ಕರ್ ಅವರ ನೇತೃತ್ವದಲ್ಲಿ ರಚಿಸಲು ಕಾರಣರಾದ ಎಲ್ಲಾ ಮಹನೀಯರಿಗೆ ಮನಸಾ ನಮಿಸೋಣ ಎಂದು ತಿಳಿಸಿದ್ದಾರೆ.

More From
Prev
Next
Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+