ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಮತಾಂತರ ನಿಷೇಧ ಕಾಯ್ದೆ ಸುಗ್ರಿವಾಜ್ಞೆಗೆ ರಾಜ್ಯಪಾಲರ ಅಂಗೀಕಾರ

|
Google Oneindia Kannada News

ಬೆಂಗಳೂರು, ಮೇ17: ಮತಾಂತರ ನಿಷೇಧ ಕಾಯ್ದೆ ರಾಜ್ಯಪಾಲರು ಅಂಕಿತವನ್ನು ಹಾಕಿದ್ದಾರೆ. ಮೇ 12 ರಂದು ಸಿಎಂ ಬಸವರಾಜ ಬೊಮ್ಮಾಯಿ ನೇತೃತ್ವದ ಸಂಪುಟ ಸಭೆಯಲ್ಲಿ ಮತಾಂತರ ನಿಷೇಧ ಕಾಯ್ದೆಯನ್ನು ಸುಗ್ರೀವಾಜ್ಞೆ ಮೂಲಕ ಸಮ್ಮತಿಸಲು ಅನುಮೋದನೆ ನೀಡಿತ್ತು. ಸಚಿವ ಸಂಪುಟ ಸಭೆಯಲ್ಲಿ ಸುಗ್ರೀವಾಜ್ಞೆ ಮೂಲಕ ಅಂಗೀಕಾರವಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತಾಂತರ ನಿಷೇಧ ಕಾಯ್ದೆಗೆ ಅನುಮೋದನೆಯನ್ನು ನೀಡಿದ್ದಾರೆ.

ಸುಗ್ರೀವಾಜ್ಞೆ ಮೂಲಕ ಜಾರಿ

ಪ್ರತಿಪಕ್ಷ ಕಾಂಗ್ರೆಸ್ ಹಾಗೂ ಅಲ್ಪಸಂಖ್ಯಾತರ ಆಕ್ರೋಶಕ್ಕೆ ಗುರಿಯಾಗಿದ್ದ ಮತಾಂತರ ನಿಷೇಧ ಕಾಯ್ದೆಯನ್ನ ಜಾರಿಗೆ ತರುವಲ್ಲಿ ಸರ್ಕಾರ ಯಶಸ್ವಿಯಾಗಿದೆ. ವಿಧಾನಸಭೆಯಲ್ಲಿ ಅಂಗೀಕಾರವಾಗಿ ಮೇಲ್ಮನೆಯಲ್ಲಿ ಚರ್ಚೆಗೂ ಬಾರದ ಬಿಲ್ ಅನ್ನ ಸುಗ್ರೀವಾಜ್ಞೆ ಮೂಲಕ ಜಾರಿಗೆ ಅನುಮೋದನೆಯನ್ನು ನೀಡಿತ್ತು. ರಾಜ್ಯಪಾಲ ತಾವರ್ ಚಂದ್ ಗೆಹ್ಲೋಟ್ ಮತಾಂತರ ನಿಷೇಧ ಕಾಯ್ದೆಗೆ ಅಂಗೀಕಾರವನ್ನು ನೀಡಿರುವ ಹಿನ್ನೆಲೆಯಲ್ಲಿ ರಾಜ್ಯದಲ್ಲಿ ಅಧಿಕೃತವಾಗಿ ಮತಾಂತರ ನಿಷೇಧ ಕಾಯ್ದೆ ಜಾರಿಗೆ ಬಂದಿದೆ.

ಮತಾಂತರ ನಿಷೇಧ ಕಾಯ್ದೆಯಲ್ಲಿರುವ ಅಂಶಗಳೇನು..?

* ಬಲವಂತ, ವಂಚನೆ, ಒತ್ತಾಯ, ಆಮಿಷದ ಮದುವೆಗೆ ನಿಷೇಧ

* ಬಲವಂತದ ಮತಾಂತರಕ್ಕೆ 3 ರಿಂದ 5 ವರ್ಷ ಜೈಲು,25 ಸಾವಿರ ದಂಡ

* ಅಪ್ರಾಪ್ತರು, ದಲಿತರ ಮತಾಂತರಕ್ಕೆ 3 ರಿಂದ 10 ವರ್ಷ ಶಿಕ್ಷೆ, 50 ಸಾವಿರ ದಂಡ

Governor Thawarchand Gehlot signed the Ordinance on Karnataka anti-conversion bill

* ಮತಾಂತರಕ್ಕೆ ಬಲಿಯಾದವರಿಗೆ ಆಪಾದಿತನಿಂದ 5 ಲಕ್ಷ ಪರಿಹಾರ

* ಅಪರಾಧ ಪುನರಾವರ್ತನೆ ಆದಲ್ಲಿ ಐದು ವರ್ಷ ಜೈಲು ಶಿಕ್ಷೆ ಹಾಗೂ 2 ಲಕ್ಷ ದಂಡ

* ಮತಾಂತರದ ಉದ್ದೇಶದಿಂದ ಆದ ವಿವಾಹ ಅನೂರ್ಜಿತ

* ಮತಾಂತರ ಅಪರಾಧ ಜಾಮೀನು ರಹಿತವಾಗಿರಲಿದೆ

* ಮತಾಂತರಕ್ಕೂ ಅವಕಾಶವಿದೆ, 30 ದಿನ ಮೊದಲೇ ಡಿಸಿಗೆ ತಿಳಿಸಬೇಕು

* ಮತಾಂತರಗೊಂಡ ವ್ಯಕ್ತಿ 20 ದಿನದೊಳಗೆ ಡಿಸಿ ಮುಂದೆ ಹಾಜರಾಗಬೇಕು

Governor Thawarchand Gehlot signed the Ordinance on Karnataka anti-conversion bill

ಮತಾಂತರಕ್ಕೆ ಆಗಬೇಕಿದ್ದರೆ ಕಠಿಣ ನಿಯಮ..

* ಮತಾಂತರವಾಗಲು ಮುಂದಾಗಿರುವ ವ್ಯಕ್ತಿ ಕನಿಷ್ಠ ಅರವತ್ತು ದಿನಗಳ ಮೊದಲು ಜಿಲ್ಲಾ ದಂಡಾಧಿಕಾರಿಗೆ ಈ ಬಗ್ಗೆೆ ತಿಳಿಸಬೇಕು.

* ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಈ ಬಗ್ಗೆೆ ಮಾಹಿತಿ ಕೊಡಬೇಕು.

* ಈ ಮಾಹಿತಿಯನ್ನು ಜಿಲ್ಲಾಧಿಕಾರಿ ಹಾಗೂ ತಹಶೀಲ್ದಾರ್ ಕಚೇರಿ ಸೂಚನಾ ಫಲಕದಲ್ಲಿ ಹಾಕಬೇಕು. ಇದಕ್ಕೆೆ30 ದಿನಗಳ ಒಳಗಾಗಿ ಆಕ್ಷೇಪಣೆ ಬಂದರೆ ಕಂದಾಯ ಅಥವಾ ಸಮಾಜ ಕಲ್ಯಾಣ ಇಲಾಖೆಯ ಮೂಲಕ ವಿಚಾರಣೆ ನಡೆಸಲು ಅವಕಾಶ ಇದೆ.

* ವಿಚಾರಣೆಯ ಸಂದರ್ಭದಲ್ಲಿ ತಪ್ಪು ಕಂಡುಬಂದಲ್ಲಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

* ಮತಾಂತರಗೊಂಡ ವ್ಯಕ್ತಿಯೂ ಮತಾಂತರಗೊಂಡ ದಿನಾಂಕದಿಂದ ಹಿಡಿದು ಮೂಲ ಧರ್ಮ, ಮತಾಂತರಗೊಂಡ ಧರ್ಮ ಹಾಗೂ ಇನ್ನಿತರ ಮಾಹಿತಿಯನ್ನು ಜಿಲ್ಲಾಧಿಕಾರಿಗೆ ನೀಡಬೇಕು.

* ಅಪರಾಧಕ್ಕೆೆ ನೆರವು ಹಾಗೂ ಪ್ರೇರಣೆ ನೀಡಿದ ವ್ಯಕ್ತಿಯನ್ನು ಆರೋಪಿಯನ್ನಾಗಿ ಪರಿಗಣಿಸುವ ಅವಕಾಶವೂ ಇದೆ.

*ಮತಾಂತರ ಮಾಡುವ ವ್ಯಕ್ತಿಯೂ ಈ ಬಗ್ಗೆೆ ಜಿಲ್ಲಾ ದಂಡಾಧಿಕಾರಿಗೆ ಮೂವತ್ತು ದಿನಗಳ ಮೊದಲೇ ಮಾಹಿತಿ ಕೊಡಬೇಕು.

*ವಿಚಾರಣೆಯ ಸಂದರ್ಭದಲ್ಲಿ ತಪ್ಪುು ಕಂಡುಬಂದಲ್ಲಿ ಜಿಲ್ಲಾಾ ದಂಡಾಧಿಕಾರಿ ಕ್ರಿಮಿನಲ್ ಕ್ರಮ ಕೈಗೊಳ್ಳಲು ಪೊಲೀಸ್ ಇಲಾಖೆಗೆ ಸೂಚಿಸಲು ಅವಕಾಶವಿದೆ.

Governor Thawarchand Gehlot signed the Ordinance on Karnataka anti-conversion bill

ಮೇಲ್ಮನೆಯಲ್ಲಿ ಬಹುಮತವಿಲ್ಲದ ಕಾರಣ ಸುಗ್ರೀವಾಜ್ಞೆ ಮೂಲಕ ಮತಾಂತರ ನಿಷೇಧ ಕಾಯ್ದೆ ಜಾರಿ ಯಶಸ್ವಿ

ಕಳೆದ ಬೆಳಗಾವಿ ಚಳಿಗಾಲದ ಅಧಿವೇಶನದಲ್ಲಿ ಧಾರ್ಮಿಕ ಸ್ವಾತಂತ್ರ್ಯ ರಕ್ಷಣೆ ಹೆಸರಿನಲ್ಲಿ ವಿಧೇಯಕವನ್ನ ಮಂಡಿಸಲಾಗಿತ್ತು. ಪ್ರತಿಪಕ್ಷ ಕಾಂಗ್ರೆಸ್ ತೀರ್ವ ವಿರೋಧದ ನಡುವೆಯೂ ಕೆಳಮನೆಯಲ್ಲಿ ಪಾಸಾಗಿತ್ತು. ಮೇಲ್ಮನೆಯಲ್ಲೂ ಮಂಡನೆಗೆ ಪ್ರಯತ್ನ ನಡೆಸಲಾಯ್ತು, ಆದರೆ ಬಹುಮತದ ಕೊರೆತೆಯಿಂದಾಗಿ ಸರ್ಕಾರ ಮಂಡನೆಯನ್ನೇ ಮಾಡಲಿಲ್ಲ. ಆನಂತರ ಬೆಂಗಳೂರಿನಲ್ಲಿ ನಡೆದ ಜಂಟಿ‌ ಅಧಿವೇಶನದಲ್ಲಿ ಮಂಡನೆ ಮಾಡಿದರು ಚರ್ಚೆಗೆ ಕೈಗೆತ್ತಿಕೊಳ್ಳಲಿಲ್ಲ.

ಲಖನ್ ಜಾರಕಿಹೊಳಿ ಸೇರಿ ನಾಲ್ವರು ಸದಸ್ಯರು ಗೈರಾಗಿದ್ದರಿಂದ ಮತ್ತೆ ನೆನೆಗುದಿಗೆ ಬಿದ್ದಿತ್ತು. ಕಾಯ್ದೆ ಜಾರಿಗೆ ಆರ್‌ಎಸ್‌ಎಸ್‌ನಿಂದ ನಿರಂತರ ಒತ್ತಡ ಬಂದಿದ್ದರಿಂದ ಇಂದು ನಡೆದ ಸಂಪುಟ ಸಭೆಯಲ್ಲಿ ಸರ್ಕಾರ ಸುಗ್ರೀವಾಜ್ಞೆಯ ಮೂಲಕ ಮತಾಂತರ ನಿಷೇದ ಕಾಯ್ದೆ ಜಾರಿ ಅನುಮೋದನೆಯನ್ನು ನೀಡಿತ್ತು.

ಸರ್ಕಾರ ವಿಧಾನ ಪರಿಷತ್ತಿನಲ್ಲಿ ಅಂಗೀಕಾರವಾಗಬೇಕಿದ್ದ ಮತಾಂತರ ನಿಷೇಧ ಕಾಯ್ದೆಯನ್ನು ತರತುರಿಯಲ್ಲಿ ಸುಗ್ರಿವಾಜ್ಞೆಯ ಮೂಲಕ ಅಂಗೀಕರಿಸಿ ರಾಜ್ಯಪಾಲರ ಅನುಮೋದನೆಗೆ ಕಳುಹಿಸಿಕೊಡಲಾಗಿತ್ತು. ರಾಜ್ಯಪಾಲ ತಾವರ್ ಚೆಂದ್ ಗೆಹ್ಲೋಟ್ ಮತಾಂತರ ನಿಷೇಧಕ್ಕೆ ಅನುಮೋಧನೆಯನ್ನು ನೀಡಿರೋದರಿಂದ ಕಾಯ್ದೆ ಅಧಿಕೃತವಾಗಿ ಜಾರಿಯಾಗಿದೆ. ಕಾಯ್ದೆಯನ್ನು ಮೀರಿ ಮತಾಂತರವನ್ನು ಮಾಡಿದರೇದಂಡ ಮತ್ತು ಕಾರಾಗೃಹ ಶಿಕ್ಷೆಯನ್ನು ಅನುಭವಿಸಬೇಕಾಗುತ್ತದೆ.

Recommended Video

ಬೆಂಗಳೂರಲ್ಲಿ‌ ಮಹಾಮಳೆ:ಮನೆಗಳಿಗೆ ನುಗ್ಗಿದ‌ ನೀರು,ಜನಜೀವನ ಅಸ್ತವ್ಯಸ್ತ | Oneindia Kannada

English summary
Karnataka Governor Thawarchand Gehlot gave approval to the Ordinance on Karnataka Protection of Right to Freedom of Religion Bill.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X