ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲರ ಅಂಕಿತ

|
Google Oneindia Kannada News

ಬೆಂಗಳೂರು, ಜನವರಿ 6:ಕರ್ನಾಟಕದಲ್ಲಿ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ವಿಆರ್ ವಾಲಾ ಅಂಕಿತ ಹಾಕಿದ್ದಾರೆ.

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೂ ವಿಧಾನಸಭೆಯಲ್ಲಿ ಅಂಗೀಕೃತಗೊಂಡಿದ್ದ ಬಿಜೆಪಿ ಸರ್ಕಾರದ ಮಹತ್ವಾಕಾಂಕ್ಷೆಯ ಗೋಹತ್ಯೆ ನಿಷೇಧ ಸುಗ್ರೀವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಮಂಗಳವಾರ ಸಹಿ ಹಾಕಿದ್ದು, ರಾಜ್ಯದಲ್ಲಿ ಗೋಹತ್ಯೆ ನಿಷೇಧ ಕಾಯ್ದೆ ಜಾರಿಯಾಗಿದೆ.

ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ಪ್ರಕರಣಕ್ಕೆ ಸಂಬಂಧಿಸಿದಂತೆ ಸಬ್ ಇನ್ಸ್‌ಪೆಕ್ಟರ್ ಅಥವಾ ಉನ್ನತ ಹುದ್ದೆಯ ಪೊಲೀಸ್ ಅಧಿಕಾರಿಗೆ ಕಳ್ಳಸಾಗಣೆ ಮಾಡಲು ಅಥವಾ ಕೊಲ್ಲಲು ಹೊರಟಿರುವ ಹಸುಗಳನ್ನು ಶೋಧಿಸಲು ಮತ್ತು ವಶಪಡಿಸಿಕೊಳ್ಳಲು ಅಧಿಕಾರ ನೀಡುತ್ತದೆ.

ವಶಪಡಿಸಿಕೊಂಡ ನಂತರ, ಅಧಿಕಾರಿ ಅದನ್ನು ಮುಟ್ಟುಗೋಲು ಹಾಕಿಕೊಳ್ಳಲು ಉಪ-ವಿಭಾಗೀಯ ಮ್ಯಾಜಿಸ್ಟ್ರೇಟ್ ಮುಂದೆ ವರದಿ ಮಾಡಬೇಕು. ಹಣಕಾಸಿನ ಪರಿಣಾಮಗಳಿಗೆ ಸಂಬಂಧಿಸಿದಂತೆ, ಮಸೂದೆಯು ಈ ಹಂತದಲ್ಲಿ ಅದನ್ನು ಪ್ರಮಾಣೀಕರಿಸಲಾಗುವುದಿಲ್ಲ ಎಂದು ಹೇಳುತ್ತದೆ. ಆದಾಗ್ಯೂ, ಅಗತ್ಯವಿದ್ದಾಗ ಮತ್ತು ಹಣವನ್ನು ಒದಗಿಸಲಾಗುತ್ತದೆ.

ತಾಕತ್ತಿದ್ದರೆ ಗೋಮಾಂಸ ರಫ್ತು ನಿಷೇಧಿಸಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲುತಾಕತ್ತಿದ್ದರೆ ಗೋಮಾಂಸ ರಫ್ತು ನಿಷೇಧಿಸಿ: ಬಿಜೆಪಿಗೆ ಸಿದ್ದರಾಮಯ್ಯ ಸವಾಲು

ರಾಜ್ಯದಲ್ಲಿ ಜಾನುವಾರು ಸಾಗಾಣಿಕೆ, ಹತ್ಯೆಗೆ ನಿರ್ಬಂಧ ಹೇರಲಾಗಿದೆ. ಜೊತೆಗೆ, ಹತ್ಯೆಗಾಗಿ ಜಾನುವಾರು ಮಾರಾಟ, ಖರೀದಿ ಮೇಲೆ ಸಹ ನಿರ್ಬಂಧ ವಿಧಿಸಲಾಗಿದೆ.ನೂತನ ಕಾಯ್ದೆ ಪ್ರಕಾರ, ಜಾನುವಾರು ಎಂದರೆ ಹಸು, ಹಸುವಿನ ಕರು, ಎತ್ತು, ಎಮ್ಮೆ ಎಂದು ವ್ಯಾಖ್ಯಾನಿಸಲಾಗಿದೆ.

ಜಾನುವಾರುಗಳನ್ನು ಹತ್ಯೆ ಮಾಡಿದರೆ ಜೈಲುಶಿಕ್ಷೆ

ಜಾನುವಾರುಗಳನ್ನು ಹತ್ಯೆ ಮಾಡಿದರೆ ಜೈಲುಶಿಕ್ಷೆ

ಈ ಜಾನುವಾರುಗಳನ್ನು ಹತ್ಯೆ ಮಾಡಿದರೆ ಮೂರರಿಂದ ಏಳು ವರ್ಷದವರೆಗೆ ಕಠಿಣ ಜೈಲುಶಿಕ್ಷೆ ವಿಧಿಸಲಾಗುತ್ತದೆ. ಅಲ್ಲದೆ ದಂಡವಾಗಿ ಮೊದಲ ಸಲ 50 ಸಾವಿರ ರೂಪಾಯಿಗಳಿಂದ 5 ಲಕ್ಷದವರೆಗೆ ಇರುತ್ತದೆ. ಎರಡನೇ ಸಲ 1 ಲಕ್ಷದಿಂದ 10 ಲಕ್ಷದವರೆಗೆ ದಂಡ ವಿಧಿಸಬಹುದಾಗಿದೆ.

ವಿಧಾನಸಭೆಯಲ್ಲಿ ಅಂಗೀಕಾರ

ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಜಾನುವಾರು ಹತ್ಯೆ ಪ್ರತಿಬಂಧಕ ಮತ್ತು ಸಂರಕ್ಷಣಾ ವಿಧೇಯಕ-2020 ಅನ್ನು ವಿಧಾನಸಭೆಯಲ್ಲಿ ಮಂಡಿಸಿ ಅಂಗೀಕಾರ ಪಡೆಯಲಾಗಿತ್ತು. ಆದರೆ ಬಿಜೆಪಿ ಸರ್ಕಾರಕ್ಕೆ ವಿಧಾನ ಪರಿಷತ್​ನಲ್ಲಿ ಬಹುಮತ ಇಲ್ಲದ ಕಾರಣ ಪರಿಷತ್​ನಲ್ಲಿ ಮಂಡನೆಯಾಗಿರಲಿಲ್ಲ. ಹೀಗಾಗಿ ಈ ಕಾಯ್ದೆ ಜಾರಿಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸಿತ್ತು. ಅದಕ್ಕೆ ಇಂದು ರಾಜ್ಯಪಾಲರು ಸಹಿ ಹಾಕಿದ್ದಾರೆ.

ಗೋ ಹತ್ಯೆ ನಿಷೇಧ ಕಾಯ್ದೆ

ಗೋ ಹತ್ಯೆ ನಿಷೇಧ ಕಾಯ್ದೆ

ಗೋ ಹತ್ಯೆ ಅರಿವಿನ ಅಪರಾಧ ಪ್ರಕರಣಗಳನ್ನು ವಿಲೇವಾರಿ ಮಾಡಲು ವಿಶೇಷ ನ್ಯಾಯಾಲಯಗಳನ್ನು ರಚಿಸುವಂತೆ ಮಸೂದೆ ಶಿಫಾರಸು ಮಾಡಿದೆ ಇತರ ರಾಜ್ಯಗಳಿಗೆ ಗೋವುಗಳನ್ನು ಸಾಗಣೆ ಮಾಡುವಂತಿಲ್ಲ. ಮೊದಲ ಬಾರಿಗೆ ಮಾಡಿದ ಅಪರಾಧಕ್ಕೆ ದಂಡ, 50 ಸಾವಿರದಿಂದ 5 ಲಕ್ಷ ರೂಪಾಯಿಗಳವರೆಗೆ ದಂಡ, ಎರಡನೆಯ ಮತ್ತು ನಂತರದ ಅಪರಾಧಕ್ಕೆ 1 ಲಕ್ಷದಿಂದ 10 ಲಕ್ಷ ರೂಪಾಯಿಗಳವರೆಗೆ ದಂಡದ ಮೊತ್ತವಿರುತ್ತದೆ. ವಶಪಡಿಸಿಕೊಂಡ ಗೋಮಾಂಸವನ್ನು ಎಸೆಯಬೇಕೆ ಹೊರತು ಬಳಸಬಾರದು.

ಹತ್ಯೆಗಾಗಿ ಮಾರಾಟ ಮಾಡಿದರೆ ಜಾನುವಾರುಗಳ ಜಪ್ತಿ

ಹತ್ಯೆಗಾಗಿ ಮಾರಾಟ ಮಾಡಿದರೆ ಜಾನುವಾರುಗಳ ಜಪ್ತಿ

ಒಂದು ವೇಳೆ, ಹತ್ಯೆಗಾಗಿ ಮಾರಾಟ ಮಾಡಿದರೆ ಆ ಜಾನುವಾರುಗಳನ್ನು ಜಪ್ತಿ ಮಾಡಲಾಗುವುದು. ನಿಯಮ ಉಲ್ಲಂಘಿಸಿದರೆ ಮೂರು ವರ್ಷದಿಂದ ಏಳು ವರ್ಷ ಜೈಲು ಶಿಕ್ಷೆ ಸಹ ವಿಧಿಸಲಾಗುವುದು ಎಂದು ಹೇಳಲಾಗಿದೆ. ಅಲ್ಲದೆ 50 ಸಾವಿರದಿಂದ 5 ಲಕ್ಷ ರೂಪಾಯಿವರೆಗೆ ದಂಡ ಸಹ ವಿಧಿಸಲಾಗುವುದು. ಆದರೆ, ಕೃಷಿ ಮತ್ತು ಪಶು ಸಂಗೋಪನೆಗೆ ಜಾನುವಾರು ಸಾಗಿಸಬಹುದು ಎಂದು ಸುಗ್ರೀವಾಜ್ಞೆಯಲ್ಲಿ ಉಲ್ಲೇಖಿಸಲಾಗಿದೆ.

Recommended Video

Team India ದೊಡ್ಡ ಶಕ್ತಿ ಏನೆಂದು ತಿಳಿಸಿದ ಆಸೀಸ್ ಕೋಚ್ Justin Langer | Oneindia Kannada

English summary
Karnataka's Prevention of Slaughter and Preservation of Cattle Ordinance, 2020 became law on Tuesday after Governor Vajubhai Vala gave assent to it. The 'anti-cow slaughter' law provides for punishment for the killing of cattle and offers protection to those "acting in good faith" to save them.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X