ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯಪಾಲ ವಜುಭಾಯಿ ವಾಲಾ ಆಸ್ಪತ್ರೆಗೆ ದಾಖಲು

|
Google Oneindia Kannada News

ಬೆಂಗಳೂರು, ನವೆಂಬರ್ 27 : ಕರ್ನಾಟಕದ ರಾಜ್ಯಪಾಲ ವಜುಭಾಯಿ ವಾಲಾ ಆಸ್ಪತ್ರೆಗೆ ದಾಖಲಾಗಿದ್ದಾರೆ. ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಆಸ್ಪತ್ರೆಗೆ ಭೇಟಿ ನೀಡಿದ್ದು, ಆರೋಗ್ಯ ವಿಚಾರಿಸಿದರು.

80 ವರ್ಷದ ವಜುಭಾಯಿ ವಾಲಾ ಆರೋಗ್ಯದಲ್ಲಿ ಏರುಪೇರು ಉಂಟಾಗಿದೆ. ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ಅವರನ್ನು ದಾಖಲು ಮಾಡಲಾಗಿದೆ. ಯಡಿಯೂರಪ್ಪ ಬುಧವಾರ ಆಸ್ಪತ್ರೆಗೆ ಭೇಟಿ ನೀಡಿದರು. ರಾಜ್ಯಪಾಲರು ದಾಖಲಾಗಿರುವ ಹಿನ್ನಲೆಯಲ್ಲಿ ಆಸ್ಪತ್ರೆ ಸುತ್ತಮುತ್ತ ಬಿಗಿ ಬಂದೋಬಸ್ತ್ ಮಾಡಲಾಗಿದೆ.

ಇನ್ನೆರಡು ತಿಂಗಳು ಮಾತ್ರ ಯಡಿಯೂರಪ್ಪ ಸಿಎಂ, ನಂತರ ರಾಜ್ಯಪಾಲ? ಇನ್ನೆರಡು ತಿಂಗಳು ಮಾತ್ರ ಯಡಿಯೂರಪ್ಪ ಸಿಎಂ, ನಂತರ ರಾಜ್ಯಪಾಲ?

Governor Vajubhai Vala Hospitalized

ಗುಜರಾತ್ ಮೂಲದ ವಜುಭಾಯಿ ವಾಲಾ 2014ರಿಂದ ಕರ್ನಾಟಕದ ರಾಜ್ಯಪಾಲರಾಗಿದ್ದಾರೆ. ಗುಜರಾತ್ ವಿಧಾನಸಭೆ ಸ್ಪೀಕರ್ ಸೇರಿದಂತೆ ವಿವಿಧ ಹುದ್ದೆಗಳಲ್ಲಿ ಅವರು ಕಾರ್ಯ ನಿರ್ವಹಣೆ ಮಾಡಿದ್ದಾರೆ.

ಕಲಬುರಗಿ; ಜಯದೇವದಿಂದ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣ ಕಲಬುರಗಿ; ಜಯದೇವದಿಂದ 300 ಹಾಸಿಗೆಯ ಆಸ್ಪತ್ರೆ ನಿರ್ಮಾಣ

2014ರ ಸೆಪ್ಟೆಂಬರ್ 1ರಂದು ವಜುಭಾಯಿ ವಾಲಾ ಕರ್ನಾಟಕದ ರಾಜ್ಯಪಾಲರಾಗಿ ಅಧಿಕಾರ ಸ್ವೀಕಾರ ಮಾಡಿದ್ದರು. ಅವರ ಅವಧಿ ಮಾರ್ಚ್‌ಗೆ ಮುಕ್ತಾಯಗೊಂಡಿದೆ. ಇನ್ನೂ ಹೊಸ ರಾಜ್ಯಪಾಲರನ್ನು ನೇಮಕ ಮಾಡಿಲ್ಲ.

"ಅನಾರೋಗ್ಯದ ಕಾರಣ ಖಾಸಗಿ ಆಸ್ಪತ್ರೆಗೆ ದಾಖಲಾಗಿರುವ ಮಾನ್ಯ ರಾಜ್ಯಪಾಲರಾದ ಶ್ರೀ ವಜುಭಾಯಿ ವಾಲಾರವರನ್ನು ಭೇಟಿ ಮಾಡಿ ಆರೋಗ್ಯ ವಿಚಾರಿಸಲಾಯಿತು. ಅವರು ಶೀಘ್ರ ಗುಣಮುಖರಾಗಲೆಂದು ದೇವರಲ್ಲಿ ಪ್ರಾರ್ಥಿಸುವೆನು" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಟ್ವೀಟ್ ಮಾಡಿದ್ದಾರೆ.

English summary
Krnataka governor Vajubhai Vala admitted to private hospital Bengaluru. Chief Minister B. S. Yediyurappa visited the hospital.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X