ಲೋಕಾಯುಕ್ತದಲ್ಲಿ ಭ್ರಷ್ಟಾಚಾರ, ವರದಿ ಕೇಳಿದ ರಾಜ್ಯಪಾಲರು

ಬೆಂಗಳೂರು, ಜುಲೈ 06 : ಲೋಕಾಯುಕ್ತದಲ್ಲಿ ನಡೆದ ಹಣದ ಬೇಡಿಕೆ ಪ್ರಕರಣದ ಕುರಿತು ವರದಿ ನೀಡುವಂತೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಸರ್ಕಾರಕ್ಕೆ ಸೂಚನೆ ನೀಡಿದ್ದಾರೆ. ಲೋಕಾಯುಕ್ತರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.

ಲೋಕಾಯುಕ್ತದಲ್ಲಿನ ಹಗರಣ ಕೆಲವು ದಿನಗಳ ಹಿಂದೆ ಬೆಳಕಿಗೆ ಬಂದಿತ್ತು. ಇದುವರೆಗೂ ಯಾವುದೇ ಪ್ರತಿಕ್ರಿಯೆ ನೀಡದಿದ್ದ ರಾಜ್ಯಪಾಲರು ಸೋಮವಾರ ವರದಿ ನೀಡುವಂತೆ ಸರ್ಕಾರಕ್ಕೆ ಸೂಚನೆ ಕೊಟ್ಟಿದ್ದಾರೆ. ಪ್ರಕರಣದ ಸಂಪೂರ್ಣ ವಿವರ ನೀಡುವಂತೆ ನಿರ್ದೇಶನ ನೀಡಿದ್ದಾರೆ. [ಲೋಕಾಯುಕ್ತ ಪದಚ್ಯುತಿ ರಾಜ್ಯಪಾಲರಿಗೆ ಬಿಟ್ಟದ್ದು]

vajubhai vala

ರಾಜ್ಯಪಾಲ ವಜೂಭಾಯಿ ವಾಲಾ ಅವರು, ಲೋಕಾಯುಕ್ತ ನ್ಯಾಯಮೂರ್ತಿ ಭಾಸ್ಕರರಾವ್ ಅವರ ಜೊತೆ ದೂರವಾಣಿ ಮೂಲಕ ಮಾತುಕತೆ ನಡೆಸಿದ್ದು, ಹಗರಣದ ವಿವರಗಳನ್ನು ಪಡೆದುಕೊಂಡಿದ್ದಾರೆ.ಮತ್ತೊಂದು ಕಡೆ ಲೋಕಾಯುಕ್ತರ ಪದಚ್ಯುತಿ ರಾಜ್ಯಪಾಲರಿಗೆ ಬಿಟ್ಟ ವಿಚಾರ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ. [ಕರ್ನಾಟಕ ಲೋಕಾಯುಕ್ತದಲ್ಲಿ ಇದೇನಿದು ಹಗರಣ?]

ಚರ್ಚೆ ನಡೆಯಬೇಕಷ್ಟೆ : ಲೋಕಾಯುಕ್ತರ ಪದಚ್ಯುತಿ ಬಗ್ಗೆ ಶಾಸಕರ ಸಹಿ ಇರುವ ಮನವಿ ಪತ್ರವನ್ನು ನೀಡಿರುವ ಬಗ್ಗೆ ನಾನು ಪ್ರತಿಕ್ರಿಯೆ ನೀಡುವುದಿಲ್ಲ, ಈ ನಿಯಮದ ಅನ್ವಯ ಸದನದಲ್ಲಿ ಚರ್ಚೆ ನಡೆಬೇಕು ಎಂದು ಬೆಳಗಾವಿಯ ಸುವರ್ಣ ವಿಧಾನಸೌಧದಲ್ಲಿ ಸ್ಪೀಕರ್ ಕಾಗೋಡು ತಿಮ್ಮಪ್ಪ ಹೇಳಿದ್ದಾರೆ.

ಲೋಕಾಯುಕ್ತರನ್ನು ಪದಚ್ಯುತಿಗೊಳಿಸುವ ನಿರ್ಣವನ್ನು ಮಂಡಿಸಲು ಅವಕಾಶ ನೀಡಬೇಕು ಎಂದು 50 ಶಾಸಕರು ಅಥವ 33 ವಿಧಾನಪರಿಷತ್ ಸದಸ್ಯರ ಸಹಿ ಇರುವ ಪತ್ರವನ್ನು ಸ್ಪೀಕರ್‌ಗೆ ನೀಡಬೇಕು. ಸದ್ಯ, 33 ಪರಿಷತ್ ಸದಸ್ಯರ ಸಹಿ ಇರುವ ಪತ್ರ ಡಿ.ಎಚ್.ಶಂಕರಮೂರ್ತಿ ಅವರ ಕೈಸೇರಿದೆ. ಸುಮಾರು 60 ಶಾಸಕರ ಸಹಿ ಇರುವ ಪತ್ರವನ್ನು ಕಾಗೋಡು ತಿಮ್ಮಪ್ಪ ಅವರಿಗೆ ನೀಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+