• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಾರ್ಮಿಕ ಕಾಯ್ದೆ ತಿದ್ದುಪಡಿಗೆ ರಾಜ್ಯಪಾಲರ ಅಂಕಿತ

|

ಬೆಂಗಳೂರು, ಜು. 31: ಕಾರ್ಮಿಕ ಸಂಘಟನೆಗಳು, ವಿರೋಧ ಪಕ್ಷಗಳ ತೀವ್ರ ವಿರೋಧದ ಮಧ್ಯೆಯೂ ರಾಜ್ಯ ಸರ್ಕಾರ ಹೊರಡಿಸಿದ್ದ ಕೈಗಾರಿಕಾ ವ್ಯಾಜ್ಯಗಳ ಕಾಯ್ದೆ ತಿದ್ದುಪಡಿ ಸುಗ್ರಿವಾಜ್ಞೆಗೆ ರಾಜ್ಯಪಾಲ ವಜುಭಾಯಿ ವಾಲಾ ಅವರು ಅಂಕಿತ ಹಾಕಿದ್ದಾರೆ.

ಕಾರ್ಮಿಕ ಕಾಯಿದೆಗೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲು ರಾಜ್ಯಪಾಲರ ಅನುಮೋದನೆಗೆ ಕಳುಹಿಸಲಾಗಿತ್ತು. ಸುಗ್ರೀವಾಜ್ಞೆ ಮೂಲಕ ರಾಜ್ಯದಲ್ಲಿ ಕಾರ್ಮಿಕರು ಮತ್ತು ಕಾರ್ಖಾನೆ ಮಾಲಿಕರ ನಡುವಿನ ವ್ಯಾಜ್ಯಗಳನ್ನು ಕಡಿಮೆ ಮಾಡಲು ಹಾಗೂ ಸುಗಮ ಆಡಳಿತ ನಡೆಸಲು ಅನುಕೂಲವಾಗುಂತೆ ತಿದ್ದುಪಡಿ ಮಾಡಲಾಗಿದೆ ಎಂದು ಕಾರ್ಮಿಕ ಸಚಿವರು ತಿಳಿಸಿದ್ದರು. ಈಗ ಕೈಗಾರಿಕೆಗಳ ವಿವಾದಗಳ ಅಧಿನಿಯಮ 1947, ಕಾರ್ಖಾನೆಗಳ ಅಧಿನಿಯಮ 1948, ಗುತ್ತಿಗೆ ಕಾರ್ಮಿಕರ ಅಧಿನಿಯಮ 1970 ಕ್ಕೆ ತಿದ್ದುಪಡಿ ಮಾಡಿ ಸುಗ್ರೀವಾಜ್ಞೆ ಹೊರಡಿಸಲಾಗಿದೆ.

ಕೋವಿಡ್ ಸಂಕಷ್ಟದ ಸಂದರ್ಭದಲ್ಲಿ ನಷ್ಟ ಅನುಭವಿಸುತ್ತಿದ್ದ ಕಾರ್ಖಾನೆ ಮಾಲಿಕರು ಉತ್ತರ ಪ್ರದೇಶದ ಮಾದರಿಯಲ್ಲಿ ರಾಜ್ಯ ಸರ್ಕಾರವೂ ಕಾಯ್ದೆಗೆ ತಿದ್ದುಪಡಿ ತರುವಂತೆ ಮನವಿ ಮಾಡಿದ್ದರು. ಕೇಂದ್ರ ಸರ್ಕಾರ ಕೂಡ ಕಾರ್ಮಿಕ ಖಾಯ್ದೆಗೆ ತಿದ್ದುಪಡಿ ತರುವಂತೆ ಸೂಚಿಸಿತ್ತು. ಅದರಂತೆ ಸುಗ್ರಿವಾಜ್ಞೆ ಮೂಲಕ ತಿದ್ದುಪಡಿ ಮಾಡಿದೆ.

ಹೊಸ ತಿದ್ದುಪಡಿ ಕಾಯ್ದೆ ಪ್ರಕಾರ ವಿದ್ಯುತ್ ಸೌಲಭ್ಯದ ಜತೆಗೆ ಕನಿಷ್ಠ 10 ಕಾರ್ಮಿಕರಿರುವ ಕಾರ್ಖಾನೆಯ ಬದಲು 20 ಕಾರ್ಮಿಕರಿರುವುದನ್ನು ಕಾರ್ಖಾನೆ ವ್ಯಾಪ್ತಿಯಿಂದ ಹೊರಗಿಡಲಾಗಿದೆ.

ಸದ್ಯ ಇರುವ ಕಾಯ್ದೆ ಪ್ರಕಾರ ನೂರಕ್ಕೂ ಹೆಚ್ಚು ಕಾರ್ಮಿಕರಿರುವ ಕಾರ್ಖಾನೆ ಮುಚ್ಚುವುದಾದರೆ ಸರ್ಕಾರದ ಅನುಮತಿ ಪಡೆಯಬೇಕು. ಈ ಮಿತಿಯನ್ನು ನೂರರಿಂದ 300ಕ್ಕೆ ಹೆಚ್ಚಳ ಮಾಡಲಾಗಿದೆ. ಇನ್ನು ಹೆಚ್ಚುವರಿ ಕೆಲಸದ ಅವಧಿಯನ್ನು 75 ಗಂಟೆಗಳಿಂದ 125 ಗಂಟೆಗಳಿಗೆ ಹೆಚ್ಚಿಸಲು ಹೊಸ ಕಾಯ್ದೆಯಲ್ಲಿ ಅವಕಾಶ ಕಲ್ಪಿಸಲಾಗಿದೆ.

ಇದರೊಂದಿಗೆ ಟೌನ್ ಆ್ಯಂಡ್ ಕಂಟ್ರಿ ಪ್ಲ್ಯಾನಿಂಗ್ ಕಾಯ್ದೆಗೂ ಸುಗ್ರೀವಾಜ್ಞೆ ಮೂಲಕ ತಿದ್ದುಪಡಿ ಮಾಡಲಾಗಿದ್ದು ಕಾಯ್ದೆಗೆ 18 ಬಿ ಯನ್ನು ಹೊಸದಾಗಿ ಸೇರಿಸಲಾಗಿದ್ದು, ಮೆಟ್ರೊ ಮಾರ್ಗದ ಎರಡೂ ಬದಿಗೆ ಫ್ರಿಮಿಯಂ ಎಫ್.ಎ ಆರ್ ದರವನ್ನು ನಿಗದಿ ಪಡಿಸಲು ತಿದ್ದುಪಡಿಯಲ್ಲಿ ಅವಕಾಶ ಮಾಡಿಕೊಡಲಾಗಿದೆ. ಈ ರೀತಿಯ ಮಾದರಿ ಮುಂಬೈನಲ್ಲಿದೆ. ಅದೆ ಮಾದರಿಯಲ್ಲಿ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಮೂಲಕ ಕಾನೂನು ತಿದ್ದುಪಡಿ ಮಾಡಿದ್ದು, ಈ ಕಾಯ್ದೆಗೂ ರಾಜ್ಯಪಾಲರು ಅನುಮತಿ ನೀಡಿದ್ದಾರೆ.

English summary
Governor Vajubhai Wala has signed the Industrial Relations Act Amendment Ordinance issued by the state government amid fierce opposition from labor unions and opposition parties.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X