ಜ.22ರಿಂದ 30ರವರೆಗೆ ಜಂಟಿ ಅಧಿವೇಶನ
ಬೆಂಗಳೂರು, ಜ.8 : ಬಜೆಟ್ ಅಧಿವೇಶನಕ್ಕೂ ಮೊದಲು ವಿಧಾನ ಮಂಡಲದ ಜಂಟಿ ಅಧಿವೇಶನ ನಡೆಸಲು ಸರ್ಕಾರ ತೀರ್ಮಾನಿಸಿದೆ. ಜ.22ರಿಂದ 30ರವರೆಗೆ ಅಧಿವೇಶನ ನಡೆಯಲಿದ್ದು, ಮೊದಲ ದಿನ ರಾಜ್ಯಪಾಲರು ಜಂಟಿ ಅಧಿವೇಶನ ಉದ್ದೇಶಿಸಿ ಭಾಷಣ ಮಾಡಲಿದ್ದಾರೆ.
ಮಂಗಳವಾರ ವಿಧಾನಸೌಧದಲ್ಲಿ ಪತ್ರಿಕಾಗೋಷ್ಠಿ ನಡೆಸಿದ ಕಾನೂನು ಮತ್ತು ಸಂಸದೀಯ ವ್ಯವಹಾರ ಸಚಿವ ಟಿ.ಬಿ. ಜಯಚಂದ್ರ, ಜಂಟಿ ಸದನದ ಕುರಿತು ವಿವರಗಳನ್ನು ನೀಡಿದರು. ಜಂಟಿ ಅಧಿವೇಶನದ ದಿನಾಂಕವನ್ನು ಸಚಿವ ಸಂಪುಟ ಸಭೆಯಲ್ಲಿ ನಿರ್ಧರಿಸಬೇಕಿತ್ತು. ಆದರೆ, ಸಿಎಂ ದೆಹಲಿಗೆ ತೆರಳುವುದರಿಂದ, ವಿಳಂಬವಾಗತ್ತದೆ ಎಂಬ ಕಾರಣಕ್ಕೆ ಅವರೊಂದಿಗೆ ಚರ್ಚಿಸಿ, ದಿನಾಂಕ ನಿಗದಿಗೊಳಿಸಲಾಗಿದೆ ಎಂದು ಹೇಳಿದರು.

ಜ.22ರಿಂದ 30ರವರೆಗೆ ಅಧಿವೇಶನ ನಡೆಸಲು ತೀರ್ಮಾನಿಸಲಾಗಿದೆ. ಜಂಟಿ ಅಧಿವೇಶನದ ಮೊದಲ ದಿನವಾದ ಜ.22ರಂದು ರಾಜ್ಯಪಾಲರು ಜಂಟಿ ಸದನವನ್ನು ಉದ್ದೇಶಿಸಿ ಮಾತನಾಡಲಿದ್ದಾರೆ. ನಂತರ ಕಲಾಪಗಳು ನಡೆಯಲಿವೆ ಎಂದು ಸಚಿವ ಟಿ.ಬಿ.ಜಯಚಂದ್ರ ಮಾಹಿತಿ ನೀಡಿದರು.
ಫೆಬ್ರವರಿಯಲ್ಲಿ ಬಜೆಟ್ ಅಧಿವೇಶನ : ಬಜೆಟ್ ಅಧಿವೇಶನವನ್ನು ಒಂದು ತಿಂಗಳು ನಡೆಸಬೇಕಿದೆ. ಆದರೆ, ಲೋಕಸಭೆ ಚುನಾವಣೆಗೆ ಮಾರ್ಚ್ ಮೊದಲ ವಾರ ನೀತಿ ಸಂಹಿತೆ ಜಾರಿಗೆ ಬರುವ ಸಾಧ್ಯತೆಯಿದೆ. ಆದ್ದರಿಂದ ಜಂಟಿ ಅಧಿವೇಶನವನ್ನು ಜನವರಿಯಲ್ಲಿ ನಡೆಸಿ ಫೆಬ್ರವರಿ 2ನೇ ವಾರದಲ್ಲಿ ಬಜೆಟ್ ಅಧಿವೇಶನ ನಡೆಸಲು ಉದ್ದೇಶಿಸಲಾಗಿದೆ ಎಂದ ಹೇಳಿದರು.
ಗೋಡೆ ಒಡೆಯುವುದು ಸಂಸ್ಕೃತಿ ಅಲ್ಲ : ಸಚಿವರು ತಮ್ಮ ಕಚೇರಿ ವಿಸ್ತರಣೆಗಾಗಿ ವಿಧಾನಸೌಧದಲ್ಲಿ ಗೋಡೆ ಒಡೆಯುವುದು ಒಳ್ಳೆಯ ಸಂಸ್ಕೃತಿ ಅಲ್ಲ. ಸಚಿವರ ಈ ತೀರ್ಮಾನ ಸರಿಯಿಲ್ಲ. ವಿಧಾನಸೌಧದಲ್ಲಿ ಈ ರೀತಿ ಗೋಡೆ ಕೆಡಹುವುದು ಗಂಭೀರ ವಿಚಾರ. ಆದ್ದರಿಂದ, ಸ್ಪೀಕರ್ ಅಧ್ಯಕ್ಷತೆಯಲ್ಲಿರುವ ವಿಶೇಷ ಮಂಡಳಿಯು ಈ ಬಗ್ಗೆ ಚರ್ಚಿಸಿ ಸೂಕ್ತ ತೀರ್ಮಾನ ತೆಗೆದುಕೊಳ್ಳುತ್ತದೆ ಎಂದು ಟಿ.ಬಿ.ಜಯಚಂದ್ರ ತಿಳಿಸಿದರು. [ವಿಧಾನಸೌಧದ ಗೋಡೆ ಒಡೆದ ಸಚಿವ ಆಂಜನೇಯ]
-
ಮಾರ್ಚ್ 29ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: ಶಾಲೆಗಳಿಗೂ BWSSB ನೀರಿನ ಬಿಲ್ ಶಾಕ್; ಡಿಸಿಎಂ ಡಿ.ಕೆ. ಶಿವಕುಮಾರ್ ಮೊರೆ ಹೋದ ಖಾಸಗಿ ಶಿಕ್ಷಣ ಸಂಸ್ಥೆಗಳು -
Siddaramaiah: ಶಿಸ್ತು, ಪ್ರಾಮಾಣಿಕತೆ ಮತ್ತು ಮಾನವೀಯತೆ ಪೊಲೀಸ್ ಸೇವೆಯ ಆಧಾರ: ಸಿದ್ದರಾಮಯ್ಯ -
ಮಾರ್ಚ್ 30ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಪರಮಾತ್ಮ ಹೇಳಿದ್ರೂ ಹಿಂದೆ ಸರಿಯಲ್ಲ ಎಂದಿದ್ದ ಕಾಂಗ್ರೆಸ್ನ ಸಾದಿಕ್ ಪೈಲ್ವಾನ್ ನಾಮಪತ್ರ ಹಿಂಪಡೆಯಲು ಇದೆ ಹಲವು ಕಾರಣ -
Gold Rate : ಮಾರ್ಚ್ 29ರ ಚಿನ್ನ ಮತ್ತು ಬೆಳ್ಳಿ ಬೆಲೆ: ಪ್ರಮುಖ ನಗರಗಳ ಇಂದಿನ ದರ ಪಟ್ಟಿ ಹೀಗಿದೆ -
Pooja Gandhi: ಹಿಂದಿ ಒಂದು ಭಾಷೆಯಾಗಿ ಕಲಿಯಲಿ, ಆದ್ರೆ ಕನ್ನಡದ ಮಕ್ಕಳ ಮೇಲೆ ಹೇರಿಕೆ ಬೇಡ: ನಟಿ ಪೂಜಾ ಗಾಂಧಿ -
Khushbu Sundar: ಲವ್ ಜಿಹಾದ್ ಆರೋಪ ಹೊತ್ತಿದ್ದ ನಟಿ ಖುಷ್ಬೂ ಪತಿ ಸುಂದರ್ ರಾಜಕೀಯಕ್ಕೆ ಎಂಟ್ರಿ: ಮಧುರೈ ಸೆಂಟ್ರಲ್ನಿಂದ ಸ್ಪರ್ಧೆ -
April Monthly Horoscope: ಏಪ್ರಿಲ್ ಮಾಸ ಭವಿಷ್ಯ: ಉದ್ಯೋಗ, ಹಣಕಾಸು ಮತ್ತು ಆರೋಗ್ಯದ ಸೂಚನೆಗಳು -
EPFO 3.0: ಇನ್ಮುಂದೆ UPI, ATM ಮೂಲಕವೇ ಪಿಎಫ್ ಹಣ ಪಡೆಯಬಹುದು; ಏಪ್ರಿಲ್ 1 ರಿಂದಲೇ ಹೊಸ ನಿಯಮ ಜಾರಿ -
Karnataka Weather: ದಕ್ಷಿಣ ಒಳನಾಡಿನಲ್ಲಿ ಗುಡುಗು ಸಹಿತ ಮಳೆ ಮುನ್ಸೂಚನೆ -
Chicken Leg Piece: ಚಿಕನ್ ಲೆಗ್ ಪೀಸ್ ಸಿಗಲಿಲ್ಲ ಎಂದು ಮದುವೆ ಮಂಟಪದಲ್ಲೇ ಮಾರಾಮಾರಿ, ವಿಡಿಯೋ ಇಲ್ಲಿದೆ












Click it and Unblock the Notifications