ಕರ್ನಾಟಕದಿಂದ ದಲಿತ ಕೋಟಾದಲ್ಲಿ ಇವರಿಗೆ ಕೇಂದ್ರ ಸಚಿವ ಸ್ಥಾನ ಫಿಕ್ಸ್?
ಭಾರತದ ಪ್ರಧಾನಿ ಆಗಿ ಮೋದಿ ಪ್ರಮಾಣ ವಚನ ಸ್ವೀಕರಿಸು ಸಮಾರಂಭಕ್ಕೆ ಕ್ಷಣಗಣನೆ ಆರಂಭವಾಗಿದೆ. ಈ ವೇಳೆ ಯಾರಿಗೆಲ್ಲಾ ಸಚಿವ ಸ್ಥಾನ ಸಿಗಬಹುದು ಎಂಬ ಲೆಕ್ಕಾಚಾರವನ್ನು ಹಾಕಿಕೊಳ್ಳಲಾಗುತ್ತಿದೆ. ಕರ್ನಾಟಕದ ಸಂಸದರಿಗೂ ಈ ಬಾರಿ ಬಂಪರ್ ಕಾದಿದೆ.
ಭಾನುವಾರ (ಜೂನ್ 9) ಸಂಜೆ ರಾಷ್ಟ್ರಪತಿ ಭವನದಲ್ಲಿ ನಡೆಯುವ ಪ್ರಮಾಣ ವಚನ ಕಾರ್ಯಕ್ರಮದಲ್ಲಿ ನರೇಂದ್ರ ಮೋದಿ ಜೊತೆ ಇನ್ನು ಹಲವರು ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸುವ ಸಾಧ್ಯತೆ ಇದೆ. ಎನ್‌ಡಿಎ ಮೈತ್ರಿ ಕೂಟದ ಪಕ್ಷಗಳ ಸಂಸದರೂ ಸಹ ಈ ವೇಳೆ ಪ್ರಮಾಣ ವಚನ ಸ್ವೀಕರಿಸಲಿದ್ದಾರೆ.

ಯಾರಿಗೆಲ್ಲಾ ಸಚಿವ ಸ್ಥಾನ?
ಈ ಬಾರಿಯ ಲೋಕಸಭಾ ಚುನಾವಣೆಯಲ್ಲಿ ಕರ್ನಾಟಕದಲ್ಲಿ ಬಿಜೆಪಿ ಹಾಗೂ ಜೆಡಿಎಸ್ ಪಕ್ಷಗಳು ಮೈತ್ರಿ ಮಾಡಿಕೊಂಡಿದ್ದವು. ಹೀಗಾಗಿ ಮಾಜಿ ಸಿಎಂ ಎಚ್‌ಡಿ ಕುಮಾರಸ್ವಾಮಿ ಅವರಿಗೆ ಕೇಂದ್ರದಲ್ಲಿ ಮಂತ್ರಿಗಿರಿ ಸಿಗುವುದು ಪಕ್ಕಾ ಎಂದು ಹೇಳಲಾಗುತ್ತಿದೆ. ಈ ಮೂಲಕ ಹಳೆಯ ಮೈಸೂರು ಭಾಗದಲ್ಲಿ ಬಿಜೆಪಿ ತನ್ನ ಹಿಡಿತವನ್ನು ಮತ್ತಷ್ಟು ಬಲ ಪಡಿಸಿಕೊಳ್ಳಿವ ಸಹಾಯವಾಗುತ್ತದೆ.
ಧಾರವಾಡ ಲೋಕಸಭಾ ಕ್ಷೇತ್ರದ ಪ್ರಹ್ಲಾದ್ ಜೋಶಿ ಅವರಿಗೆ ಕೇಂದ್ರದ ಸಚಿವರಾಗಿ ಅನುಭವ ಇದೆ. ಹೀಗಾಗಿ ಇವರಿಗೆ ಮೊದಲ ಆಯ್ಕೆ ನೀಡುವ ಸಾಧ್ಯತೆ ಇದೆ. ಇನ್ನು ಕರ್ನಾಟಕದ ಲಿಂಗಾಯತ ಮತಗಳನ್ನು ತನ್ನತ್ತ ಸೆಳೆಯಲು ಬಿಜೆಪಿ ಮಾಜಿ ಸಿಎಂ ಜಗದೀಶ್ ಶೆಟ್ಟರ್ ಅಥವಾ ಬಸವಾರಜ್ ಬೊಮ್ಮಾಯಿ ಇಬ್ಬರಲ್ಲಿ ಒಬ್ಬರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿ ಕಾಣುತ್ತಿದೆ. ಲಿಂಗಾಯತ ಮತಗಳನ್ನು ಸೆಳೆಯಲು ಬಿಜೆಪೆ ಯಾವ ಪ್ಲ್ಯಾನ್ ಮಾಡುತ್ತದೆ ಕಾದು ನೋಡಬೇಕಿದೆ.
ಕರ್ನಾಟಕಕ್ಕೆ ಎಷ್ಟು ಸ್ಥಾನ
ಕರ್ನಾಟಕದಲ್ಲಿ ಇನ್ನು ಹಲವರ ಹೆಸರುಗಳು ಸಚಿವ ಸ್ಥಾನದ ರೇಸ್‌ನಲ್ಲಿ ಓಡುತ್ತಿವೆ. ಅದರಲ್ಲಿ ಶೋಭಾ ಕರಂದ್ಲಾಜೆ, ವಿ. ಸೋಮಣ್ಣ ಹೆಸರುಗಳು ಸಹ ಕೇಳಿ ಬರುತ್ತಿವೆ. ಇನ್ನು ಚಿತ್ರದುರ್ಗದ ಸಂಸದ ಗೋವಿಂದ್ ಕಾರಜೋಳ ಅವರಿಗೂ ಈ ಬಾರಿ ಸಚಿವ ಸ್ಥಾನ ಸಿಗುವ ಚಾನ್ಸ್ ಇದೆ. ದಲಿತ ಕೋಟಾದ ಅಡಿಯಲ್ಲಿ ಇವರಿಗೆ ಕೇಂದ್ರ ಸಚಿವ ಸ್ಥಾನ ಸಿಗುವ ಚಾನ್ಸ್ ಇದೆ.
ಭಾರೀ ಜಿದ್ದಾಜಿದ್ದಿಗೆ ಕಾರಣವಾಗಿದ್ದ ಬೆಂಗಳೂರು ಗ್ರಾಮಾಂತರ ಲೋಕಸಭಾ ಚುನಾವಣೆಯಲ್ಲಿ ಡಿಕೆ ಸುರೇಶ್ ಅವರನ್ನು ಮಣಿಸಿ ಸಂಸತ್‌ಗೆ ಮೊದಲ ಬಾರಿ ಪ್ರವೇಶ ಪಡೆದಿರುವ ಡಾಕ್ಟರ್ ಮಂಜುನಾಥ್ ಅವರಿಗೂ ಕೇಂದ್ರ ಸಚಿವ ಸ್ಥಾನ ಸಿಗವಹುದು ಎಂದು ಹೇಳಲಾಗುತ್ತಿದೆ.












Click it and Unblock the Notifications