ಸಿಎಂ ರಾಜಕೀಯ ಕಾರ್ಯದರ್ಶಿ ಹುದ್ದೆಗೆ ಇಬ್ಬರು ವಿಧಾನ ಪರಿಷತ್ ಸದಸ್ಯರು ನೇಮಕ
ಬೆಂಗಳೂರು, ಜೂನ್ 01: ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಸಂಪುಟದಲ್ಲಿ ಸ್ಥಾನ ಪಡೆಯಲು ವಿಫಲರಾಗಿದ್ದ ವಿಧಾನ ಪರಿಷತ್ ಸದಸ್ಯರಿಗೆ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ನೇಮಕ ಮಾಡಲಾಗಿದೆ.
ವಿಧಾನ ಪರಿಷತ್ ಸದಸ್ಯರಾಗಿರುವ ಗೋವಿಂದರಾಜು ಹಾಗೂ ನಜೀರ್ ಅಹ್ಮದ್ ಅವರನ್ನ ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿಯಾಗಿ ಸಂಪುಟ ದರ್ಜೆಯ ಸ್ಥಾನಮಾನವನ್ನು ನೀಡಲಾಗಿದ್ದು, ಈ ಬಗ್ಗೆ ಗೋವಿಂದರಾಜು ಅವರ ಅಭಿಮಾನಿಗಳು ಸಾಮಾಜಿಕ ಜಾಲತಾಣದಲ್ಲಿ ಸಂತಸ ವ್ಯಕ್ತಪಡಿಸಿದ್ದಾರೆ.

ಸಚಿವ ಸಂಪುಟ ವಿಸ್ತರಣೆಯ ಸಂದರ್ಭದಲ್ಲಿ ಮಂತ್ರಿ ಸ್ಥಾನ ಸಿಗದ ಹಿನ್ನೆಲೆಯಲ್ಲಿ ವಿಧಾನ ಪರಿಷತ್ ಸದಸ್ಯರು ಬೇಸರವನ್ನ ವ್ಯಕ್ತಪಡಿಸಿದರು. ಸಂಪುಟ ವಿಸ್ತರಣೆ ಬಳಿಕ ಬಿ ಕೆ ಹರಿಪ್ರಸಾದ್ ಹಾಗೂ ಸಲೀಂ ಅಹ್ಮದ್ ಸಚಿವ ಸ್ಥಾನ ಸಿಗದ ಹಿನ್ನಲೆ ಬಹಿರಂಗ ಆಕ್ರೋಶ ವ್ಯಕ್ತಪಡಿಸಿದ್ದರು. ಪರಿಣಾಮ ಅವರ ಮನವೊಲಿಸಲು ರಾಜಕೀಯ ಕಾರ್ಯದರ್ಶಿ ಹುದ್ದೆಯನ್ನು ನೀಡಿದ್ದಾರೆ ಎನ್ನಲಾಗಿದೆ.
ಇನ್ನೂ ಕಾಂಗ್ರೆಸ್ ಚುನಾವಣಾ ತಂತ್ರಗಾರ ಸುನಿಲ್ ಕನುಗೋಳ್ ಅವರನ್ನು ಮುಖ್ಯ ಸಲಹೆಗಾರರನ್ನಾಗಿ ನೇಮಿಸಿಸಲಾಗಿದೆ.
ಈ ಹಿಂದೆ ಚುನಾವಣೆ ವೇಳೆ ಪೇಸಿಎಂ, ಸೇಸಿಎಂ ಅಭಿಯಾನ, ಉಚಿತ ಗ್ಯಾರಂಟಿಗಳ ಹಿಂದಿನ ಸೂತ್ರಧಾರಿಯಾಗಿದ್ದು, ಕಾಂಗ್ರೆಸ್ ಪಕ್ಷ ಗೆಲ್ಲುವಲ್ಲಿ ತೆರೆ ಹಿಂದಿನ ತಂತ್ರಗಾರಿಕೆಯನ್ನು ಹೆಣೆದಿದ್ದಾರೆ ಎನ್ನಲಾಗಿದೆ. ಇದೀಗ ಈಗ ಆಡಳಿತದಲ್ಲೂ ಸಿಎಂ ಸಿದ್ದರಾಮಯ್ಯ ಅವರಿಗೆ ಮುಖ್ಯ ಸಲಹೆಗಾರರಾಗಿ ಜವಾಬ್ದಾರಿ ನಿಭಾಯಿಸಲಿದ್ದಾರೆ.












Click it and Unblock the Notifications