ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದಲ್ಲಿ ಮೊದಲು 16-17 ವರ್ಷದ ಮಕ್ಕಳಿಗೆ ಲಸಿಕೆ ನೀಡಲು ಸೂಚನೆ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 20: ರಾಜ್ಯದಲ್ಲಿ ಮೊದಲು 16-17 ವರ್ಷದ ಮಕ್ಕಳಿಗೆ ಕೊರೊನಾ ಲಸಿಕೆ ನೀಡಲು ಸೂಚನೆ ನೀಡಲಾಗಿದೆ.

ಮಕ್ಕಳಿಗಾಗಿ ಸಿದ್ಧಪಡಿಸಲಾಗಿರುವ ಕೋವಿಡ್ ಲಸಿಕೆಗಳಿಗೆ ಅನುಮೋದನೆ ಸಿಕ್ಕ ಬಳಿಕ ಮೊದಲಿಗೆ, 16-17 ವರ್ಷದ ಮಕ್ಕಳಿಗೆ ಲಸಿಕೆ ಹಾಕುವ ಸಾಧ್ಯತೆಗಳಿವೆ ಎಂದು ತಿಳಿದುಬಂದಿದೆ.

ಕರ್ನಾಟಕ; ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ಇಲ್ಲ ಕರ್ನಾಟಕ; ವಿಮಾನ ನಿಲ್ದಾಣದಲ್ಲಿ ಆರ್‌ಟಿಪಿಸಿಆರ್‌ ಪರೀಕ್ಷೆ ಇಲ್ಲ

ಮಕ್ಕಳಲ್ಲಿ ಹೆಚ್ಚು ವಯಸ್ಸಿನ ಮಕ್ಕಳಾದ 16-17 ವರ್ಷದ ಮಕ್ಕಳಿಗೆ ಮೊದಲಿಗೆ ಲಸಿಕೆ ನೀಡುವಂತೆ, ನಂತರ ಚಿಕ್ಕ ಮಕ್ಕಳಿಗೆ ಲಸಿಕೆ ನಾವು ಶಿಫಾರಸು ಮಾಡುತ್ತೇವೆ. ಇದಷ್ಟೇ ಅಲ್ಲದೆ, ದೀರ್ಘಾವಧಿ ಕಾಯಿಲೆಗಳಿಂದ ಬಳಲುತ್ತಿರುವ ಮಕ್ಕಳಿಗೂ ಮೊದಲ ಆದ್ಯತೆ ನೀಡುವಂತೆ ತಿಳಿಸಿದ್ದೇವೆಂದು ತಾಂತ್ರಿಕ ಸಲಹಾ ಸಮಿತಿಯ ಸದಸ್ಯರಾಗಿರುವ ಜಯದೇವ ಆಸ್ಪತ್ರೆಯ ನಿರ್ದೇಶ ಡಾ.ಸಿಎನ್.ಮಂಜುನಾಥ್ ಅವರು ಹೇಳಿದ್ದಾರೆ.

Karnataka Govt Advised To First Vaccinate 16- 17-Year-Olds Against Covid

ಕೊರೊನಾ ಸೋಂಕಿನ ವಿರುದ್ಧ ಹೋರಾಡಲು ಲಸಿಕೆ ಅತ್ಯಂತ ಮುಖ್ಯವಾಗಿದ್ದು, ಮಕ್ಕಳಿಗಾಗಿ ಈಗಾಗಲೇ ಎರಡು ಲಸಿಕೆಗಳು ಸಿದ್ಧಗೊಂಡಿವೆ. ಝೈಡಸ್ ಕ್ಯಾಡಿಲಾದ ಝೈಕೋವ್ ಡಿ ಮತ್ತು ಕೋವ್ಯಾಕ್ಸಿನ್ ಲಸಿಕೆಗಳಿಗೆ ಶೀಘ್ರದಲ್ಲೇ ಅನುಮೋದನೆ ಸಿಗಲಿದೆ.

ದೀರ್ಘಾವಧಿ ಕಾಯಿಲೆಯಿಂದ ಬಳಲುತ್ತಿರುವ ವಯಸ್ಕರು, ಹಿರಿಯ ನಾಗರೀಕರನ್ನು ಗುರ್ತಿಸಿ ಮೊದಲು ಲಸಿಕೆ ನೀಡಿದಂತೆಯೇ ಮಕ್ಕಳಿಗೆ ಲಸಿಕೆ ನೀಡುವ ವೇಳೆಯ 17 ವರ್ಷದ ಮಕ್ಕಳು ಹಾಗೂ ದೀರ್ಘಾವಧಿ ಕಾಯಿಲೆಯಿಂದ ಬಳಲುತ್ತಿರುವ ಮಕ್ಕಳನ್ನು ಗುರ್ತಿಸಿ ಮೊದಲು ಲಸಿಕೆ ನೀಡಬೇಕು. ಲಸಿಕೆ ಪ್ರಕ್ರಿಯೆ ಆರಂಭಕ್ಕೂ ಮುನ್ನ ಮೈಕ್ರೊಪ್ಲಾನ್ ಮಾಡಿಕೊಳ್ಳುವ ಅಗತ್ಯವಿದೆ ಎಂದು ತಿಳಿಸಿದ್ದಾರೆ.

ಈ ಯೋಜನೆಗೆ ಶಿಶುವೈದ್ಯರು, ನರ್ಸ್ ಗಳು, ಆಶಾ ಕಾರ್ಯಕರ್ತೆರನ್ನು ಸೇರ್ಪಡೆಗೊಳಿಸಿಕೊಳ್ಳಬೇಕು. ಲಸಿಕೆಗೆ ಅನುಮೋದನೆ ಹಾಗೂ ಮಾರ್ಗಸೂಚಿಗಳು ಬಂದ ಕೂಡಲೇ ಎಂಆರ್ ವ್ಯಾಕ್ಸಿನೇಷನ್ ಅಭಿಯಾನದ ವೇಳೆ ಅನುಭವ ಹೊಂದಿದ್ದವರನ್ನು ಈ ಲಸಿಕಾ ಅಭಿಯಾನದಲ್ಲಿ ಸೇರ್ಪಡೆಗೊಳಿಸಿಕೊಳ್ಳಬೇಕೆಂದು ಡಾ.ಮಂಜುನಾಥ್ ಅವರು ಹೇಳಿದ್ದಾರೆ.

ಲಸಿಕೆಗಳಿಗೆ ಭಾರತ ಸರ್ಕಾರ ಅನುಮೋದನೆ ನೀಡಲು ಮುಂದಾಗಿರುವ ಹಿನ್ನೆಲೆಯಲ್ಲಿ ರಾಜ್ಯದ ತಾಂತ್ರಿಕ ಸಲಹಾ ಸಮಿತಿಯು, ಯೋಜನೆಗಳನ್ನು ರೂಪಿಸಿ, ಸಿದ್ಧತೆ ನಡೆಸುವಂತೆ ಸಲಹೆ ನೀಡಿದೆ. ಅಲ್ಲದೆ, ಮೊದಲಿಗೆ 16-17 ವರ್ಷದ ಮಕ್ಕಳಿಗೆ ಲಸಿಕೆ ನೀಡುವಂತೆ ತಿಳಿಸಿದೆ.

ಆರಂಭದಲ್ಲಿ ಲಭ್ಯವಿರುವ ಡೋಸ್‌ಗಳ ಸಂಖ್ಯೆಯು ಸೀಮಿತವಾಗಿರುವುದರಿಂದ, ವಯಸ್ಕರಿಗೆ ಲಸಿಕೆ ಹಾಕುವಾಗ ಅಳವಡಿಸಿಕೊಂಡ ಮಾದರಿಯನ್ನು ಅನುಸರಿಸುವುದು ಉತ್ತಮ ಎಂದು ತಾಂತ್ರಿಕ ಸಲಹಾ ಸಮಿತಿಯ ತಜ್ಞರು ಅಭಿಪ್ರಾಯಪಟ್ಟಿದ್ದಾರೆ.

ರಾಜ್ಯದಲ್ಲಿ ಕೊರೊನಾ ಪ್ರಕರಣಗಳ ಸಂಖ್ಯೆಯಲ್ಲಿ ಏರಿಳಿತ ಮುಂದುವರೆದಿದ್ದು ಕಳೆದ 24 ಗಂಟೆಯಲ್ಲಿ 349 ಕೊರೊನಾ ಪ್ರಕರಣಗಳು ವರದಿಯಾಗಿದೆ. ಇದರೊಂದಿಗೆ ಸೋಂಕಿತರ ಸಂಖ್ಯೆ 29,84,022ಕ್ಕೆ ಏರಿಕೆಯಾಗಿದೆ.

ಕೊರೊನಾ ಸೋಂಕಿಗೆ 14 ಮಂದಿ ಬಲಿಯಾಗಿದ್ದಾರೆ. ಇದರೊಂದಿಗೆ ಸಾವಿನ ಸಂಖ್ಯೆ 37,967ಕ್ಕೆ ಏರಿಕೆಯಾಗಿದೆ ಎಂದು ಆರೋಗ್ಯ ಸಚಿವ ಡಾ.ಕೆ ಸುಧಾಕರ್ ಟ್ವೀಟ್ ಮಾಡಿದ್ದಾರೆ.

ಬೆಂಗಳೂರಿನಲ್ಲಿ ಇಂದು 161 ಮಂದಿಗೆ ಸೋಂಕು ದೃಢಪಟ್ಟಿದ್ದು, ಇದರೊಂದಿಗೆ ನಗರದಲ್ಲಿ ಸೋಂಕಿತರ ಸಂಖ್ಯೆ 12,49,662ಕ್ಕೆ ಏರಿಕೆಯಾಗಿದೆ. ಇಂದು ನಗರದಲ್ಲಿ 5 ಮಂದಿ ಸಾವನ್ನಪ್ಪಿದ್ದಾರೆ.

ರಾಜ್ಯದಲ್ಲಿ ಇಂದು 399 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಡಿಸ್ಚಾರ್ಜ್ ಆಗಿದ್ದಾರೆ. ಇದರೊಂದಿಗೆ ಸೋಂಕಿನಿಂದ ಚೇತರಿಸಿಕೊಂಡವರ ಸಂಖ್ಯೆ 29,36,926ಕ್ಕೆ ಏರಿಕೆಯಾಗಿದೆ. ಇನ್ನು 9,100 ಸಕ್ರೀಯ ಪ್ರಕರಣಗಳಿವೆ.

ರಾಜ್ಯಾದ್ಯಂತ ಇಂದು 85,022 ಕೋವಿಡ್ ಟೆಸ್ಟ್ ನಡೆಸಲಾಗಿದ್ದು, 349 ಪಾಸಿಟಿವ್ ಪ್ರಕರಣಗಳು ಪತ್ತೆಯಾಗಿವೆ. ಇದರೊಂದಿಗೆ ರಾಜ್ಯದಲ್ಲಿ ಪಾಸಿಟಿವಿಟಿ ದರ ಶೇ. 0.41ಕ್ಕೆ ಇಳಿದಿದೆ.

Recommended Video

ಧೋನಿ ತಂಡಕ್ಕೆ ವಾಪಸ್ ಬಂದಿರೋದಕ್ಕೆ KL ರಾಹುಲ್ ಹಾಕೊಂಡಿರೋ ಸ್ಕೆಚ್ ಏನು? | Oneindia Kannada

English summary
Once approvals for Covid vaccines for children come through, the Karnataka government is likely to start vaccinating kids in the age group of 16-17 first.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X