Water Project: ವಿಜಯಪುರ ಕುಡಿಯುವ ನೀರಿನ ಯೋಜನೆಗೆ ಸರ್ಕಾರ ಒಪ್ಪಿಗೆ

ಬೆಂಗಳೂರು, ನವೆಂಬರ್ 05: ಉತ್ತರ ಕರ್ನಾಟಕದ ವಿವಿಧ ಪಟ್ಟಣೆಗಳಿಗೆ 135 ಎಲ್‌ಪಿಸಿಡಿ ಕುಡಿಯು ನೀರು ಪೋರೈಕೆಯ ಬೃಹತ್ ಯೋಜನೆಗೆ ರಾಜ್ಯ ಸರ್ಕಾರ ಮಂಗಳವಾರ ಒಪ್ಪಿಗೆ ನೀಡಿದೆ. ಬಹುಕೋಟಿ ವೆಚ್ಚದಲ್ಲಿ ಕಿಲೋ ಮೀಟರ್‌ಗಟ್ಟಲೇ ಪೈಪ್‌ಲೈನ್ ಅಳವಡಿಕೆಗೆ ಹಾಗೂ ಯೋಜನೆ ತ್ವರಿತ ಅನುಷ್ಠಾನಕ್ಕೆ ಒಪ್ಪಿಗೆ ನೀಡಿದೆ ಎಂದು ಬೃಹತ್ ಮತ್ತು ಮಧ್ಯಮ ಕೈಗಾರಿಕಾ ಸಚಿವ ಎಂ.ಬಿ. ಪಾಟೀಲ್ ಮಾಹಿತಿ ನೀಡಿದರು.

ವಿಧಾನಸೌಧದ ತಮ್ಮ ಕಚೇರಿಯಲ್ಲಿ ಮಂಗಳವಾರ ನಡೆದ ವಿಜಯಪುರ ನಗರ ಸೇರಿದಂತೆ ಜಿಲ್ಲೆಯ ವಿವಿಧ ತಾಲ್ಲೂಕು ಕೇಂದ್ರಗಳಲ್ಲಿನ ಕುಡಿಯುವ ನೀರು ಸರಬರಾಜು ಯೋಜನೆಗಳ ಪ್ರಗತಿ ಪರಿಶೀಲನಾ ಸಭೆ ನಡೆಸಿದರು. ಬಳಿಕ ಸುದ್ದಿಗಾರರಿಗೆ ಯೋಜನೆಗಳು, ಜಿಲ್ಲೆಯ ವ್ಯಾಪ್ತಿಯಲ್ಲಿ ಸರ್ಕಾರ ಕೈಗೊಂಡ ಪ್ಲಾನ್ ಬಗ್ಗೆ ತಿಳಿಸಿದರು.

Govt agreed Project of Replacement of Dilapidated Drinking Water Pipeline in Vijayapura MB Patil

ಅಲಮಟ್ಟಿ ಹಿನ್ನೀರಿನಿಂದ ಕುಡಿಯುವ ನೀರನ್ನು ವಿಜಯಪುರ ನಗರಕ್ಕೆ ಪೂರೈಸುವ ಸುಮಾರು 10.8 ಕಿ.ಮೀ ಉದ್ದದ ಕೊಳವೆ ಮಾರ್ಗ ಶಿಥಿಲವಾಗಿದೆ. ಅದರ ದುರಸ್ತಿ ಅಗತ್ಯವಾಗಿದ್ದನ್ನು ಮನಗಂಡಿದ್ದೇನೆ. ಅದರ ಬದಲಾವಣೆಗೆ ₹52 ಕೋಟಿ ವೆಚ್ಚದಲ್ಲಿ ಯೋಜನೆ ರೂಪಿಸಲಾಗಿದೆ. ಹೊಸ ಎಂ.ಎಸ್‌. ಪೈಪುಗಳನ್ನು ಅಳವಡಿಸಲಾಗುವುದು ಎಂದು ಅವರು ಮಾಹಿತಿ ನೀಡಿದರು.

43 ಕಿ.ಮೀ.ದೂರದಿಂದ ನಗರಕ್ಕೆ ನೀರು

ಸದ್ಯ ವಿಜಯಪುರಕ್ಕೆ 43 ಕಿಲೋ ಮೀಟರ್ ದೂರದ ಕೊಲ್ಹಾರದಿಂದ ಕುಡಿಯುವ ನೀರು ಪೂರೈಕೆ ಮಾಡಲಾಗುತ್ತಿದೆ. ಈ ನೀರು ಪೂರೈಕೆ ಮಾರ್ಗದಲ್ಲಿ ಸುಮಾರು 10.8 ಕಿ.ಮೀ ಉದ್ದದ ಪಿ.ಎಸ್‌.ಸಿ ಕೊಳವೆ ಮಾರ್ಗವು ದುರಸ್ತಿ ಎದುರು ನೋಡುತ್ತಿದೆ. ಪರಿಣಾಮವಾಗಿ ಕುಡಿಯುವ ನೀರು ಸೋರಿಕೆಯಾಗಿ ಪೋಲಾಗುತ್ತಿದೆ.

ಇದನ್ನು ಬದಲಿಸಲು ಹಲವು ವರ್ಷಗಳಿಂದ ಪ್ರಯತ್ನಿಸುತ್ತಿದ್ದರೂ ವಿವಿಧ ಕಾರಣಗಳಿಂದಾಗಿ ಸಾಧ್ಯವಾಗಿರಲಿಲ್ಲ.ಇದೀ ಸರ್ಕಾರ ಯೋಜನೆ ತ್ವರಿತ ಜಾರಿಗೆ ಒಪ್ಪಿಗೆ ನೀಡಿದೆ. ಅಗತ್ಯ ಅನುದಾನ ಒದಗಿಸಲು ರಾಜ್ಯ ಹಣಕಾಸು ಇಲಾಖೆಸ ಗ್ರೀನ್ ಸಿಗ್ನಲ್ ಕೊಟ್ಟಿದೆ ಎಂದು ಅವರು ವಿವರಿಸಿದರು.

Govt agreed Project of Replacement of Dilapidated Drinking Water Pipeline in Vijayapura MB Patil

ಈ ಯೋಜನೆಗೆ ಕುರಿತು ಪ್ಲಾನ್ ಮಾಡಿದ ಆರಂಭದಲ್ಲಿ ₹32 ಕೋಟಿ ವೆಚ್ಚಕ್ಕೆ ಅಂದಾಜು ಮಾಡಲಾಗಿತ್ತು. ಕಾಮಗಾರಿ ವಿಳಂಬವಾದ ಕಾರಣ ಅಂದಾಜು ವೆಚ್ಚ ಹೆಚ್ಚಾಗಿ ₹52 ಕೋಟಿಗೆ ಹೆಚ್ಚಳವಾಗಿದೆ. ಸದ್ಯ ಪರಿಷ್ಕೃತ ಅಂದಾಜು ವೆಚ್ಚಕ್ಕೂ ಹಣಕಾಸು ಇಲಾಖೆ ಒಪ್ಪಿಗೆ ನೀಡಿದೆ. ಶೀಘ್ರವೇ ಅಧಿಕಾರಿಗಳ ಮೇಲ್ವಿಚಾರಣೆಯಲ್ಲಿ ಕಾಮಗಾರಿ ಆರಂಭಿಸಲಾಗುತ್ತದೆ ಎಂದು ತಿಳಿಸಿದರು.

ಆಲಮಟ್ಟಿ ಹಿನ್ನೀರಿನ ವ್ಯಾಪ್ತಿಯಲ್ಲಿ ಜಾಕ್ವೆಲ್ ನಿರ್ಮಾಣ

ಜಿಲ್ಲೆಯ ವ್ಯಾಪ್ತಿಯಲ್ಲಿ 3ನೇ ಹಂತದ ಕುಡಿಯುವ ನೀರು ಪೂರೈಕೆ ಯೋಜನೆಯ ಭಾಗವಾಗಿ ಆಲಮಟ್ಟಿ ಹಿನ್ನೀರಿನ ರಂಭಾಪುರಿ ಬಳಿ ಜಾಕ್ವೆಲ್ ನಿರ್ಮಿಸುವ ಅವಶ್ಯಕತೆ ಇದೆ. ಇದರಿಂದ ನಾವು 111 ದಶಲಕ್ಷ ಲೀಟರ್ ನೀರು ಶುದ್ಧೀಕರಣ ಮಾಡಬಹುದಾಗಿದೆ. ಇದರ ಸಾಕಾರಕ್ಕಾಗಿ ಅಧಿಕಾರಿಗಳಿಗೆ ಡಿಪಿಆರ್ ತಯಾರಿಸುವಂತೆ ಸೂಚಿಸಲಾಗಿದೆ. ಅದರ ಪ್ರಕ್ರಿಯೆ ಮುಗಿಯುತ್ತಿದ್ದಂತೆ ತಕ್ಷಣವೇ ಕಾಮಗಾರಿ ಶುರುಮಾಡಲು ಅವರು ಈ ವೇಳೆ ನಿರ್ದೇಶಿಸಿದರು.

ಇಲ್ಲಿ ಅಮೃತ್ 2.0 ಯೋಜನೆಯ ಕೆಲಸ ವಿಳಂಬವಾಗಿದೆ. ಕಾಮಗಾರಿಯ ಗುತ್ತಿಗೆ ಪಡೆದಿರುವ ಜೈನ್ ಇರಿಗೇಶನ್ ಸಂಸ್ಥೆಗೆ ನೋಟಿಸ್ ಕೊಡಲಾಗಿದೆ. ಸಂಸ್ಥೆಯು ಡಿಸೆಂಬರ್ ವೇಳೆಗೆ ಕಾಮಗಾರಿ ಪೂರ್ಣಗೊಳಿಸುವುದಾಗಿ ತಿಳಿಸಿದೆ. ಬಾಕಿ ಇರುವ ₹17 ಕೋಟಿ ಬಿಡುಗಡೆಗೆ ಕ್ರಮವಹಿಸಲಾಗುವುದು ಎಂದರು.

ಬಬಲೇಶ್ವರ, ತಿಕೋಟಾ ಪಟ್ಟಣಗಳಿಗೆ 135 ಎಲ್‌ಪಿಸಿಡಿ ನೀರು

ಪಟ್ಟಣ ಪಂಚಾಯಿತಿಗಳಾಗಿ ಮೇಲ್ದರ್ಜೆಗೆ ಏರಿರುವ ವಿಜಯಪುರ ಜಿಲ್ಲೆಯ ಬಬಲೇಶ್ವರ ಮತ್ತು ತಿಕೋಟಾ ಪಟ್ಟಣಗಳ ಜನತೆಗೆ ಸದ್ಯ 55 ಎಲ್‌ಪಿಸಿಡಿ (ಒಬ್ಬ ವ್ಯಕ್ತಿಗೆ ದಿನಕ್ಕೆ 55 ಲೀಟರ್) ಕುಡಿಯುವ ನೀರು ಪೂರೈಸುತ್ತಿದೆ. ಅದನ್ನು 135 ಎಲ್‌ಪಿಸಿಡಿ ಗೆ ಹೆಚ್ಚಿಸುವ ಸಲುವಾಗಿ ಯೋಜನೆ ರೂಪಿಸಲಿದ್ದೇವೆ.

ಗ್ರಾಮೀಣ ಕುಡಿಯುವ ನೀರು ಸರಬರಾಜು ಮತ್ತು ನೈರ್ಮಲ್ಯ ಇಲಾಖೆ ವತಿಯಿಂದ ಈ ಎರಡೂ ಪಟ್ಟಣಗಳಿಗೆ 55 ಎಲ್‌ಪಿಸಿಡಿ ನೀರು ಪೂರೈಕೆ ಮಾಡಲಾಗುತ್ತಿದೆ. ಇವೆರಡದಲ್ಲೂ ಪಟ್ಟಣ ಪಂಚಾಯಿತಿಗಳಾಗಿರುವ ಕಾರಣ ಅಲ್ಲಿಗೆ ಪೂರೈಸುವ ನೀರಿನ ಪ್ರಮಾಣವನ್ನು 135 ಎಲ್‌ಪಿಸಿಡಿಗೆ ಹೆಚ್ಚಿಸಲಾಗಿದೆ ಎಂದು ಅವರು ವಿವಿಧ ವಿಷಯಗಳನ್ನು ವಿವರಿಸಿದರು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+