ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರದಿಂದ ಆದೇಶ

|
Google Oneindia Kannada News

ಬೆಂಗಳೂರು, ಜೂನ್ 26: ಅಗತ್ಯ ಸೇವೆಗಳ ಮುಷ್ಕರ ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಮತ್ತೆ ಸಾರಿಗೆ ನೌಕರರು ಮುಷ್ಕರ ನಡೆಸುವ ಸುಳಿವು ಸಿಕ್ಕ ಕಾರಣ, ಪ್ರತಿಭಟನೆ ತಡೆಯಲು ರಾಜ್ಯ ಸರ್ಕಾರ ಈ ಕ್ರಮ ಕೈಗೊಂಡಿದೆ.

ಈಗಾಗಲೇ ಸಾರಿಗೆ ನಿಗಮ ನಷ್ಟದಲ್ಲಿದೆ ಈ ಸಂದರ್ಭದಲ್ಲಿ ಮತ್ತೆ ಮುಷ್ಕರ ನಡೆಸದರೆ ಮತ್ತಷ್ಟು ನಷ್ಟ ಅನುಭವಿಸಬೇಕಾಗುತ್ತದೆ ಹಾಗೂ ಸಾರ್ವಜನಿಕರಿಗೆ ತೊಂದರೆ ಉಂಟಾಗಲಿದೆ ಎಂಬುದು ಸರ್ಕಾರ ವಾದವಾಗಿದೆ.

 ಚೌಕಾಶಿಗೆ ಇಳಿದರೇ ಕೋಡಿಹಳ್ಳಿ, ಸಾರಿಗೆ ನೌಕರರ ಮುಷ್ಕರ ಸದ್ಯದಲ್ಲೇ ಅಂತ್ಯ? ಚೌಕಾಶಿಗೆ ಇಳಿದರೇ ಕೋಡಿಹಳ್ಳಿ, ಸಾರಿಗೆ ನೌಕರರ ಮುಷ್ಕರ ಸದ್ಯದಲ್ಲೇ ಅಂತ್ಯ?

ಜುಲೈ 1ರಿಂದ ಡಿಸೆಂಬರ್​​ 31ರವರೆಗೆ ಸಾರಿಗೆ ಸಿಬ್ಬಂದಿ ಮುಷ್ಕರವನ್ನು ನಿಷೇಧ ಮಾಡಲಾಗಿದೆ. ಆರ್ಥಿಕತೆಯ ಮೇಲೆ ಕೊವಿಡ್ ಸಾಕಷ್ಟು ಪ್ರಭಾವ ಬೀರಿದೆ. ಈ ಸಂದರ್ಭದಲ್ಲಿ ಮುಷ್ಕರ ಮಾಡುವುದು ಸೂಕ್ತವಲ್ಲ.

Karnataka Govt Brings in Essential Services Maintain Act To Curb Transport Employees Strike

ಹೀಗಾಗಿ ಕರ್ನಾಟಕ ಅಗತ್ಯ ಸೇವೆಗಳ ನಿರ್ವಹಣೆ ಕಾಯ್ದೆ 3 ಅನ್ವಯ ಸಾರಿಗೆ ನೌಕರರು ಮತ್ತೆ ಮುಷ್ಕರಕ್ಕೆ ಸಿದ್ದರಾಗ್ತಿದ್ದಾರೆ ಎಂಬ ಸುಳಿವು ಸಿಕ್ಕಿತ್ತು.

ಲಾಕ್​ಡೌನ್​ ಮುಗಿದ ಮೇಲೆ ಜುಲೈ 5 ರ ನಂತ್ರ ಕುಟುಂಬ ಸಮೇತ ಪ್ರತಿಭಟನೆ ನಡೆಸಲು ಸಾರಿಗೆ ನೌಕರರು ಮುಂದಾಗಿದ್ದರು. ಆದರೆ ಅದಕ್ಕೂ ಮೊದಲೇ ಅಗತ್ಯ ಸೇವೆಗಳ‌ ಮುಷ್ಕರವನ್ನ ನಿಷೇಧಿಸಿ ಸರ್ಕಾರ ಆದೇಶ ಹೊರಡಿಸಿದೆ. ಉಪವಿಭಾಗ 1ರ ಅನ್ವಯ ಅಗತ್ಯ ಸೇವೆಗಳ ಮುಷ್ಕರವನ್ನು ನಿಷೇಧಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.

Recommended Video

T20 World cup 2021 ಪಂದ್ಯ ಎಲ್ಲಿ ನಡಿಯತ್ತೆ ಗೊತ್ತಾ? | Oneindia Kannada

English summary
Karnataka Govt Brings in Essential Services Maintain Act To Curb Transport Employees Strike.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X