Gram Panchayat; ಪಿಡಿಒಗಳಿಗೆ ಹೊಸ ಸುತ್ತೋಲೆ ತಂದ ಗೊಂದಲ

ಬೆಂಗಳೂರು, ನವೆಂಬರ್ 16: ಕರ್ನಾಟಕ ಸರ್ಕಾರ ಗ್ರಾಮ ಪಂಚಾಯಿತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡುವ ಬಗ್ಗೆ ಸುತ್ತೋಲೆಯೊಂದನ್ನು ಹೊರಡಿಸಿದೆ. ಆದರೆ ಈ ಸುತ್ತೋಲೆ ಪಿಡಿಒಗಳ ಗೊಂದಲಕ್ಕೆ ಕಾರಣವಾಗಿದೆ.

ಆಯುಕ್ತರು, ಕರ್ನಾಟಕ ಪಂ.ರಾಜ್ ಆಯುಕ್ತಾಲಯ, ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಇಲಾಖೆ ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಪಿಡಿಒ ಹುದ್ದೆಗಳ ಪ್ರಭಾರ ವ್ಯವಸ್ಥೆ ಬಗ್ಗೆ ಎಲ್ಲಾ ಜಿಲ್ಲಾ ಪಂಚಾಯತಿಗಳ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಮಾಹಿತಿ ನೀಡಿದ್ದರೆ.

karnataka-government-pdo-circular

ಆದರೆ ಈ ಸುತ್ತೋಲೆಯಲ್ಲಿ ಉಲ್ಲೇಖ ಮಾಡಿರುವ ಹಿಂದಿನ ಸುತ್ತೋಲೆಗಳ ಕಾರಣದಿಂದಾಗಿ ಹೊಸ ಸುತ್ತೋಲೆ ಗೊಂದಲ ಮೂಡಿಸಿದೆ. ಈ ಗೊಂದಲ ನಿವಾರಣೆ ಮಾಡುವಂತೆ ಪಿಡಿಒಗಳು ಒತ್ತಾಯಿಸಿದ್ದಾರೆ.

ಹೊಸ ಸುತ್ತೋಲೆ ಗೊಂದಲ; ಹೊಸ ಸುತ್ತೋಲೆಯಲ್ಲಿ 2014ರ ಡಿ.23ರ ಸುತ್ತೋಲೆಯನ್ನು ಲಗತ್ತಿಸಲಾಗಿದೆ. ಇದು ಗ್ರೇಡ್ 2 ಗ್ರಾಮ ಪಂಚಾಯಿತಿಗಳಲ್ಲಿ ಪಿಡಿಒ ಹುದ್ದೆ ಖಾಲಿ ಇದ್ದಲ್ಲಿ ಅಂತಹ ಹುದ್ದೆಗೆ ಅದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಣೆ ಮಾಡುತ್ತಿರುವ ಗ್ರೇಡ್ 2 ಗ್ರಾಪಂ ಕಾರ್ಯದರ್ಶಿಯನ್ನು ಪ್ರಭಾರದಲ್ಲಿ ಇರಿಸಬೇಕು ಎಂದು ಹೇಳಿದೆ.

ಒಂದು ವೇಳೆ ಗ್ರಾಪಂಗಳಲ್ಲಿ ಪಿಡಿಒ ಹುದ್ದೆ ಹಾಗೂ ಗ್ರಾಪಂ ಕಾರ್ಯದರ್ಶಿ ಗ್ರೇಡ್ 2 ಎರಡೂ ಹುದ್ದೆ ಖಾಲಿ ಇದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಪಿಡಿಒ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿರುವಂತೆ ಸುತ್ತೋಲೆ ತಿಳಿಸಿದೆ.

2018ರ ನ.23ರ ಸುತ್ತೋಲೆಯಲ್ಲಿ ಗ್ರಾಪಂಗಳಲ್ಲಿ ಪಿಡಿಒ ಹುದ್ದೆ ನಿವೃತ್ತಿ, ಅಮಾನತು ಇನ್ನಿತರೆ ಕಾರಣಗಳಿಗೆ ತೆರವಾದಲ್ಲಿ ಆ ಗ್ರಾಮ ಪಂಚಾಯಿತಿಯಲ್ಲಿ ಗ್ರೇಡ್ 1 ಕಾರ್ಯದರ್ಶಿ ಪೂರ್ಣಕಾಲಿಕವಾಗಿ ಕಾರ್ಯನಿರ್ವಹಿಸುತ್ತಿದ್ದಲ್ಲಿ ಅವರಿಗೆ ಪ್ರಭಾರ ವಹಿಸಬೇಕು ಎಂದು ವಿವರಣೆ ನೀಡಲಾಗಿದೆ.

ಪೂರ್ಣಕಾಲಿಕ ಗ್ರೇಡ್ 1 ಕಾರ್ಯದರ್ಶಿ ಇಲ್ಲದಿದ್ದಲ್ಲಿ ನೆರೆಯ ಗ್ರಾಪಂನ ಪಿಡಿಒಗೆ ಹೆಚ್ಚುವರಿ ಪ್ರಭಾರ ವಹಿಸಬೇಕು. ಗ್ರೇಡ್ 2 ಕಾರ್ಯದರ್ಶಿ ಹಾಗೂ ದ್ವಿತೀಯ ದರ್ಜೆ ಲೆಕ್ಕ ಸಹಾಯಕರುಗಳಿಗೆ ಪಿಡಿಒ ಹುದ್ದೆ ಪ್ರಭಾರ ವಹಿಸಬಾರದು ಎಂದು ಸ್ಪಷ್ಟಪಡಿಸಲಾಗಿದೆ. ಆದ್ದರಿಂದ ಹಿಂದಿನ ಹಾಗೂ ಈಗಿನ ಸುತ್ತೋಲೆ ಗೊಂದಲಕ್ಕೆ ಕಾರಣವಾಗಿದೆ.

ಕರ್ನಾಟಕ ಸರ್ಕಾರ ರಾಜ್ಯದಲ್ಲಿನ ಗ್ರಾಮ ಪಂಚಾಯತಿಗಳಲ್ಲಿ ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ (ಪಿಡಿಒ) ಹುದ್ದೆಗಳಿಗೆ ಒಬ್ಬ ನೌಕರರಿಗೆ 3 ರಿಂದ 4 ಗ್ರಾಮ ಪಂಚಾಯತಿಗಳ ಪ್ರಭಾರ/ ಜವಾಬ್ದಾರಿ ನೀಡಿರುವುದನ್ನು ಗಮನಿಸಿ, ಖಾಲಿ ಇರುವ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಗಳಿಗೆ ಹೆಚ್ಚುವರಿ ಪ್ರಭಾರ ವ್ಯವಸ್ಥೆ ಮಾಡುವ ಬಗ್ಗೆ ಸುತ್ತೋಲೆಯಲ್ಲಿ ವಿವರಣೆ ನೀಡಿತ್ತು.

ಕರ್ನಾಟಕ ಸರ್ಕಾರದ ಸಚಿವಾಲಯ ಬಹುಮಹಡಿಗಳ ಕಟ್ಟಡ, ಬೆಂಗಳೂರು. (ಕೆ. ಯಾಲಕ್ಕಿ ಗೌಡ) ನಿರ್ದೇಶಕರು (ಪಂ.ರಾಜ್) ಹಾಗೂ ಪದನಿಮಿತ್ತ ಸರ್ಕಾರದ ಜಂಟಿ ಕಾರ್ಯ ಗ್ರಾಮೀಣಾಭಿವೃದ್ಧಿ ಮತ್ತು ಪಂ.ರಾಜ್ ಈ ಹಿಂದೆ ಹೊರಡಿಸಿದ್ದ ಸುತ್ತೋಲೆಯನ್ನು ಆದೇಶದಲ್ಲಿ ಉಲ್ಲೇಖ ಮಾಡಲಾಗಿತ್ತು.

ಉಲ್ಲೇಖಿತ ಸುತ್ತೋಲೆಯಲ್ಲಿ ಜಿಲ್ಲಾ ಪಂಚಾಯತ್‌ ಮುಖ್ಯ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಈ ಸೂಚನೆಗಳನ್ನು ನೀಡಲಾಗಿತ್ತು.

* ಗ್ರೇಡ್-1 ವೃಂದದ ಗ್ರಾಮ ಪಂಚಾಯಿತಿ ಕಾರ್ಯದರ್ಶಿಗಳನ್ನು ಅವರು ಕರ್ತವ್ಯ ನಿರ್ವಹಿಸುತ್ತಿರುವ ಹುದ್ದೆಯ ಜೊತೆಗೆ ಅದೇ ಗ್ರಾಮ ಪಂಚಾಯಿತಿಯಲ್ಲಿ ಖಾಲಿ ಇರುವ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆಗೆ ಹೆಚ್ಚುವರಿ ಪ್ರಭಾರದಲ್ಲಿ ಇಡತಕ್ಕದ್ದು.

* ಗ್ರೇಡ್-2 ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಖಾಲಿ ಇದ್ದಲ್ಲಿ ಅಂತಹ ಹುದ್ದೆಗೆ ಅದೇ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಗ್ರೇಡ್-2 ಗ್ರಾಮ ಪಂಚಾಯಿತಿ ಕಾರ್ಯದರ್ಶಿರವರನ್ನೇ ಪಂಚಾಯತಿ ಅಭಿವೃದ್ಧಿ ಅಧಿಕಾರಿಯ ಹೆಚ್ಚುವರಿ ಪ್ರಭಾರದಲ್ಲಿರಿಸತಕ್ಕದ್ದು.

* ಗ್ರಾಮ ಪಂಚಾಯಿತಿಗಳಲ್ಲಿ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಹುದ್ದೆ ಹಾಗೂ ಗ್ರಾಮ ಪಂಚಾಯತಿ ಕಾರ್ಯದರ್ಶಿ ಗ್ರೇಡ್-2 ಎರಡೂ ಹುದ್ದೆಗಳು ಖಾಲಿ ಇದ್ದಲ್ಲಿ ಅಂತಹ ಗ್ರಾಮ ಪಂಚಾಯಿತಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನೇ ಪಂಚಾಯತಿ ಅಭಿವೃದ್ಧಿ ಅಧಿಕಾರಿ ಹುದ್ದೆಯ ಹೆಚ್ಚುವರಿ ಪ್ರಭಾರದಲ್ಲಿರಿಸತಕ್ಕದ್ದು,

* ಒಬ್ಬ ನೌಕರನನ್ನು ಅವರು ಕರ್ತವ್ಯ ನಿರ್ವಹಿಸುವ ಗ್ರಾಮ ಪಂಚಾಯಿತಿಗೆ ಮಾತ್ರ ಹೆಚ್ಚುವರಿ
ಪ್ರಭಾರದಲ್ಲಿರಿಸತಕ್ಕದ್ದು.

ಈ ವ್ಯವಸ್ಥೆಯು ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ವೃಂದದ ಖಾಲಿ ಹುದ್ದೆಗಳು ನೇರ ನೇಮಕಾತಿ/ ಬಡ್ತಿ ಮೂಲಕ ಭರ್ತಿಯಾಗುವೆವರೆಗೆ ಮಾತ್ರ ಅನ್ವಯಿಸುತ್ತದೆ ಎಂದು ಸುತ್ತೋಲೆಯಲ್ಲಿ ತಿಳಿಸಲಾಗಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+