ಅಲ್ಪಸಂಖ್ಯಾತರ ವಿರುದ್ಧದ ಕೇಸ್ ವಾಪಸ್, ಹೊಸ ವಿವಾದ
Recommended Video

ಬೆಂಗಳೂರು, ಜನವರಿ 26 : ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರದ ನಿರ್ಧಾರವೊಂದು ವಿವಾದಕ್ಕೆ ಕಾರಣವಾಗಿದೆ. ಕೋಮು ಗಲಭೆಯಲ್ಲಿ ಭಾಗಿಯಾದ ಅಲ್ಪ ಸಂಖ್ಯಾತರಿಗೆ ಕ್ಲೀನ್ ಚಿಟ್ ನೀಡಲು ಸರ್ಕಾರ ತೀರ್ಮಾನಿಸಿದೆ. ಈ ಬಗ್ಗೆ ಸಾಮಾಜಿಕ ಜಾಲತಾಣಗಳಲ್ಲಿ ಭಾರೀ ಚರ್ಚೆ ನಡೆಯುತ್ತಿದೆ.
ಕೋಮುಗಲಭೆಯಲ್ಲಿ ಭಾಗಿಯಾದ ಅಲ್ಪಸಂಖ್ಯಾತರಿಗೆ ಕ್ಲೀನ್ ಚಿಟ್ ನೀಡಲು ಸರ್ಕಾರ ನಿರ್ಧರಿಸಿದ್ದು, ದಾಖಲಾಗಿರುವ ಪ್ರಕರಣಗಳನ್ನು ವಾಪಸ್ ಪಡೆಯಲು ಮುಂದಾಗಿದೆ. ಅಭಿಯೋಜನೆಯಿಂದ ಕೇಸುಗಳನ್ನು ವಾಪಸ್ ಪಡೆಯಲು ಕೋರಿ ಪತ್ರ ಬರೆಯಲಾಗಿದೆ.

ರಾಜ್ಯ ಸರ್ಕಾರ ಬರೆದಿರುವ ಪತ್ರದಲ್ಲಿ 5 ವರ್ಷಗಳಲ್ಲಿ 20 ಮತ್ತು ಬೆಳಗಾವಿ ಮತ್ತು ಮಂಗಳೂರು ಕಮೀಷನರೇಟ್ ವ್ಯಾಪ್ತಿಯಲ್ಲಿ ದಾಖಲಾಗಿರುವ ಪ್ರಕರಣಗಳನ್ನು ಹಿಂಪಡೆಯಲು ಅಭಿಯೋಜನೆಯನ್ನು ಕೋರಿದೆ.

ಗೃಹ ಸಚಿವರ ಸಮರ್ಥನೆ : ಸರ್ಕಾರದ ನಿರ್ಧಾರವನ್ನು ಗೃಹ ಸಚಿವ ರಾಮಲಿಂಗಾ ರೆಡ್ಡಿ ಸಮರ್ಥಿಸಿಕೊಂಡಿದ್ದಾರೆ. 'ಮಹದಾಯಿ, ಕಾವೇರಿ ಹೋರಾಟದಲ್ಲಿ ಭಾಗಿಯಾಗಿದ್ದ ರೈತರ ಮೇಲಿನ ಪ್ರಕರಣಗಳನ್ನು ವಾಪಸ್ ಪಡೆದಿದ್ದೇವೆ' ಎಂದು ಹೇಳಿದರು.
'ಟಿಪ್ಪು ಜಯಂತಿ ವೇಳೆ ಹಲವು ಕಡೆ ಪರ-ವಿರೋಧ ಪ್ರತಿಭಟನೆಗಳು ನಡೆದಿವೆ. ಆಸ್ತಿ ಹಾನಿ, ಕೊಲೆ ಯತ್ನ ಪ್ರಕರಣಗಳನ್ನು ನಾವು ವಾಪಸ್ ಪಡೆಯುತ್ತಿಲ್ಲ' ಎಂದು ಗೃಹ ಸಚಿವರು ಸ್ಪಷ್ಟನೆ ನೀಡಿದರು.
ಬಿಜೆಪಿ ಆಕ್ರೋಶ : ಕರ್ನಾಟಕ ಸರ್ಕಾರದ ನಿರ್ಧಾರಕ್ಕೆ ಪ್ರತಿಪಕ್ಷ ಬಿಜೆಪಿ ಆಕ್ರೋಶ ವ್ಯಕ್ತಪಡಿಸಿದೆ. ಅಲ್ಪ ಸಂಖ್ಯಾತರ ವಿರುದ್ಧದ ಪ್ರಕರಣಗಳನ್ನು ವಾಪಸ್ ಪಡೆಯುವ ಮೂಲಕ ಸರ್ಕಾರ ವೋಟ್ ಬ್ಯಾಂಕ್ ರಾಜಕಾರಣ ಮಾಡುತ್ತಿದೆ ಬಿಜೆಪಿ ನಾಯಕರು ಆರೋಪಿಸಿದ್ದಾರೆ.
ಸಿಎಂ ಹೇಳುವುದೇನು? : ಬಿಜೆಪಿ ಆರೋಪದ ಬಗ್ಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರತಿಕ್ರಿಯೆ ನೀಡಿದ್ದಾರೆ. 'ಬರೀ ಅಲ್ಪಸಂಖ್ಯಾತರ ಕೇಸ್‌ಗಳನ್ನು ಮಾತ್ರ ವಾಪಸ್ ಪಡೆಯುತ್ತಿಲ್ಲ. ರೈತ ಸಂಘಟನೆ, ಕನ್ನಡ ಪರ ಸಂಘಟನೆಗಳ ಸದಸ್ಯರ ಮೇಲಿನ ಕೇಸುಗಳನ್ನು ವಾಪಸ್ ಪಡೆಯುತ್ತೇವೆ. ಈ ಬಗ್ಗೆ ಪರಿಶೀಲನೆ ನಡೆಯುತ್ತಿದೆ' ಎಂದರು.












Click it and Unblock the Notifications