ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವಧಿ ವಿಸ್ತರಣೆ: ಕಾರಣವೇನು?

ಬೆಂಗಳೂರು,ಫೆಬ್ರವರಿ 01: ಹಿಂದುಳಿದ ವರ್ಗಗಳ ಆಯೋಗ ಅವಧಿಯನ್ನ 2023ರ ನವೆಂಬರ್‌ನಲ್ಲಿ ಅವಧಿ ಮುಕ್ತಾಯವಾಗುವ ಸಂದರ್ಭದಲ್ಲಿ ಎರಡು ತಿಂಗಳವರೆಗೆ ಅಧಿಕಾರಾವಧಿಯನ್ನು ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶಿಸಿತ್ತು. ಅದರನ್ವಯ ಆಯೋಗದ ಅಧ್ಯಕ್ಷ ಜಯಪ್ರಕಾಶ್‌ ಹೆಗ್ಡೆ ಹಾಗೂ ಐವರು ಸದಸ್ಯರ ಅಧಿಕಾರವನ್ನು 2024ರ ಜನವರಿ 31ರವರೆಗೆ ಮುಂದುವರಿಸಲಾಗಿತ್ತು. ಆದರೆ, ಇದೀಗ ಮತ್ತೆ ಅವಧಿಯನ್ನ ಮುಂದುವರೆಸಲಾಗಿದೆ.

ಹೌದು, ಜಯಪ್ರಕಾಶ್ ಹೆಗಡೆ ನೇತೃತ್ವದ ಹಿಂದುಳಿದ ವರ್ಗಗಳ ಆಯೋಗ ಅವಧಿಯನ್ನು ಸಿದ್ದರಾಮಯ್ಯ ಸರ್ಕಾರ ಮತ್ತೆ ವಿಸ್ತರಣೆ ಮಾಡಿದೆ. ಒಂದು ತಿಂಗಳ ಕಾಲ ಅಂದರೆ ಫೆಬ್ರವರಿ 29ರ ವರೆಗೆ ಹಿಂದುಳಿದ ವರ್ಗದ ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರ ಅವಧಿ ವಿಸ್ತರಣೆ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಈ ಹಿನ್ನಲೆ ಮುಖ್ಯಮಂತ್ರಿ ಸಿದ್ದರಾಮಯ್ಯನವರ ಸರ್ಕಾರ ಕಾತರಾಜ್ ಅವರ ಜಾತಿ ಗಣತಿ ವರದಿ ಸ್ವೀಕರಿಸುವುದು ಖಚಿತವಾಗಲಿದೆ ಎಂದು ಹೇಳಲಾಗಿದೆ.

Govt Extends Backward Classes Commission Chairman Jayaprakash Hegde Term Till Feb 29 For Caste Census Report

ಇನ್ನು 15 ದಿನದಲ್ಲಿ ಜಾತಿ ಗಣತಿ ವರದಿಯು ಸರ್ಕಾರಕ್ಕೆ ಸಲ್ಲಿಸುವ ಸಾಧ್ಯತೆ ಇದೆ. ಜಾತಿ ಗಣತಿ ವರದಿಯನ್ನು ಅಂತಿಮಗೊಳಿಸುವ ಸಂಬಂಧ ಫೆ‌. 15ರವರೆಗೆ ವಿಸ್ತರಣೆ ಮಾಡುವಂತೆ ರಾಜ್ಯ ಸರ್ಕಾರಕ್ಕೆ ಹಿಂದುಳಿದ ವರ್ಗಗಳ ಆಯೋಗವು ಮನವಿ ಮಾಡಿತ್ತು. ಈ ಹಿನ್ನೆಲೆಯಲ್ಲಿ ಸರ್ಕಾರ ಕ್ರಮ ಕೈಗೊಂಡಿದೆ.

ಈ ಕುರಿತು ಸಚಿವ ಶಿವರಾಜ್‌ ತಂಗಡಗಿ ಮಾತನಾಡಿ, ಶಾಶ್ವತ ಹಿಂದುಳಿದ ವರ್ಗದ ಆಯೋಗ ಅಧ್ಯಕ್ಷರ ಅವಧಿಯನ್ನು ವಿಸ್ತರಣೆ ಮಾಡಿದ್ದೇವೆ. ಇವತ್ತು ಸಹಿ ಮಾಡಿ ಕಳಿಸಿದ್ದೇವೆ. ಆಯೋಗದ ಅಧ್ಯಕ್ಷ ಜಯಪ್ರಕಾಶ್ ಹೆಗ್ಡೆ ಅವರು ಫೆಬ್ರವರಿ 29ರ ತನಕ ಅವಧಿ ವಿಸ್ತರಣೆ ಸಂಬಂಧ ಮನವಿ ಮಾಡಿದ್ದರು. ಹೀಗಾಗಿ ಕ್ರಮ ಕೈಗೊಂಡಿದ್ದೇವೆ. ಆಯೋಗದ ಅಧ್ಯಕ್ಷರು ಸಮಯ ಕೇಳಿದ ಮೇಲೆ ಕೊಡಬೇಕಲ್ಲವೇ? ಎಂದು ತಿಳಿಸಿದ್ದಾರೆ.

ಜಯಪ್ರಕಾಶ್ ಹೆಗ್ಡೆ ಅವಧಿ ವಿಸ್ತರಣೆ ಯಾಕೆ?

ಹಿಂದುಳಿದ ವರ್ಗದ ಆಯೋಗವು ಕಾಂತರಾಜ್ ಅವರ ಜಾತಿ ಗಣತಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಲು ಕುರಿತು ಈ ಹಿಂದೆ ಸಾಕಷ್ಟು ವಾರೀ ತಿರ್ಮಾನಿಸಲಾಗಿತ್ತು. ಆದರೆ, ಕೆಲವು ಕಡತಗಳು ಕಾಣಿಯಾಗಿವೆ ಎನ್ನುವ ಮಾತುಗಳು ಕೇಳಿ ಬಂದಿತ್ತು. ಹಿಂದುಳಿದ ವರ್ಗದ ಆಯೋಗವು ಮೂಲ ದಾಖಲೆಗಳ ಮೂಲಕ ಹೊಸ ಕಡತಗಳನ್ನು ತಯಾರಿಸಿ ಸರ್ಕಾರಕ್ಕೆ ಸಲ್ಲಿಸಲು ತೀರ್ಮಾನಿಸಿದೆ. ಹೀಗಾಗಿ ರಾಜ್ಯ ಸರ್ಕಾರ ಜಾತಿ ಗಣತಿ ವರದಿ ಸ್ವೀಕರಿಸಲು ಹಿಂದುಳಿದ ವರ್ಗಗಳ ಆಯೋಗದ ಅಧ್ಯಕ್ಷ ಮತ್ತು ಸದಸ್ಯರ ಅವಧಿ ಮತ್ತೆ ವಿಸ್ತರಣೆ ಮಾಡಲಾಗಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+