'ವೀರಶೈವ-ಲಿಂಗಾಯತ ವಿಚಾರದಲ್ಲಿ ಸರ್ಕಾರದ ಯಾವುದೇ ನಿಲುವಿಲ್ಲ'
ಚಾಮರಾಜನಗರ, ಅ.10 : 'ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಸರ್ಕಾರದ ನಿಲುವು ಯಾವುದೂ ಇಲ್ಲ. ಆದರೆ, ಈ ಈ ವಿಚಾರವನ್ನು ನಾನು ಹುಟ್ಟು ಹಾಕಿದ್ದು ಎಂದು ಬಿಂಬಿಸಲಾಗುತ್ತಿದೆ' ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು.
ಗುರುವಾರ ಚಾಮರಾಜನಗರದಲ್ಲಿ ಮಾತನಾಡಿದ ಸಿದ್ದರಾಮಯ್ಯ ಅವರು, 'ವೀರಶೈವ ಮಹಾಸಭಾದವರು ಕಾರ್ಯಕ್ರಮದಲ್ಲಿ ಪ್ರತ್ಯೇಕ ಧರ್ಮಕ್ಕಾಗಿ ಬೇಡಿಕೆ ಇಟ್ಟಿದ್ದರು. ಎಲ್ಲರೂ ಒಟ್ಟಾಗಿ ಮನವಿ ಸಲ್ಲಿಸಿದರೆ ಪರಿಗಣಿಸುತ್ತೇನೆ ಎಂದು ಹೇಳಿದ್ದೆ. ಈ ವಿಚಾರ ನಾನು ಹುಟ್ಟು ಹಾಕಿದ್ದಲ್ಲ' ಎಂದು ಸ್ಪಷ್ಟಪಡಿಸಿದರು.

'ವೀರಶೈವ ಲಿಂಗಾಯತ ಧರ್ಮದ ವಿಚಾರದಲ್ಲಿ ಸರ್ಕಾರದ ಯಾವ ನಿಲುವೂ ಇಲ್ಲ. ಮಾತೆ ಮಹಾದೇವಿ ಮತ್ತು ಶಾಮನೂರು ಶಿವಶಂಕರಪ್ಪ ಪತ್ರ ಬರೆದಿದ್ದರು. ಇದರಲ್ಲಿ ನನ್ನ ಪಾತ್ರ ಮತ್ತು ನಿಲುವು ಏನೂ ಇಲ್ಲ' ಎಂದು ಸಿದ್ದರಾಮಯ್ಯ ತಿಳಿಸಿದರು.
ಮುಖ್ಯಮಂತ್ರಿಗಳ ಭೇಟಿ : ಲಿಂಗಾಯತ ಸಮುದಾಯಕ್ಕೆ ಪ್ರತ್ಯೇಕ ಧರ್ಮ ಸ್ಥಾನಮಾನ ನೀಡುವ ವಿಚಾರಕ್ಕೆ ಕುರಿತಂತೆ ಇಂದು ಬೆಂಗಳೂರಿನಲ್ಲಿ ಸಮಾಲೋಚನೆ ಸಭೆ ನಡೆಯಿತು. ವಿವಿಧ ಮಠಾಧೀಶರು ಸಂಜೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರನ್ನು ಭೇಟಿಯಾಗುವ ತೀರ್ಮಾನವನ್ನು ಕೈಗೊಂಡಿದ್ದಾರೆ.
ಆದೇಶ ಪಾಲನೆ : 'ಕಾವೇರಿ ನ್ಯಾಯಾಧೀಕರಣದ ಆದೇಶದಂತೆ ತಮಿಳುನಾಡಿಗೆ ನೀರು ಹರಿಸಿದ್ದೇವೆ. ನಮ್ಮ ರೈತರಿಗೂ ಇಂದಿನಿಂದ ನೀರು ಹರಿಸಲಾಗುತ್ತಿದೆ' ಎಂದು ಹೇಳಿದರು.











Click it and Unblock the Notifications