ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಸರ್ಕಾರ ವಿವಿಧ ಬೇಡಿಕೆ ಈಡೇರಿಸದಿದ್ದರೆ ಡಿ.1ರಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ

|
Google Oneindia Kannada News

ಬೆಂಗಳೂರಿನ ನವೆಂಬರ್ 29: ವಿವಿಧ ಪ್ರಮುಖ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ಡಿಸೆಂಬರ್ 1ರಿಂದ ಅಂಗನವಾಡಿ ಕಾರ್ಯಕರ್ತೆಯರ ಪ್ರತಿಭಟನೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸಲಿದ್ದಾರೆ.

ಬೆಂಗಳೂರಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ಅಧ್ಯಕ್ಷೆ ವರಲಕ್ಷ್ಮೀ ಅವರು, ಅಂಗನವಾಡಿ ಕಾರ್ಯಕರ್ತೆಯರನ್ನು ಶಿಕ್ಷಕಿಯರನ್ನಾಗಿ ಪರಿಗಣಿಸಿ ಇಲ್ಲಿಯೇ ಪೂರ್ವ ಪ್ರಾಥಮಿಕ ಶಿಕ್ಷಣವನ್ನು ನೀಡಬೇಕು. ಗ್ರ್ಯಾಚುಟಿ ನೀಡುವುದು ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರ ಈಡೇರಿಸಬೇಕು. ಇಲ್ಲವಾದರೆ ರಾಜ್ಯಾದ್ಯಂತ ಉಗ್ರ ಹೋರಾಟ ಮಾಡಲಾಗುವುದು ಎಂದು ಅವರು ಎಚ್ಚರಿಕೆ ನೀಡಿದರು.

ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಮತ್ತೆ ಹೋರಾಟ : ವರಲಕ್ಷ್ಮೀ ಕೊಟ್ಟ ಮಾತು ಉಳಿಸಿಕೊಳ್ಳದಿದ್ದರೆ ಮತ್ತೆ ಹೋರಾಟ : ವರಲಕ್ಷ್ಮೀ

ಇದೇ ವರ್ಷ 2022ರ ಏಪ್ರಿಲ್‌ 25ರಂದು ಸುಪ್ರೀಂ ಕೋರ್ಟ್‌, 1972ರ ಗ್ರಾಚ್ಯುಟಿ ಕಾಯ್ದೆಯ ಪ್ರಕಾರ ಅಂಗನವಾಡಿ ನೌಕರರು ಗ್ರಾಚ್ಯುಟಿ ಪಡೆಯಲು ಅರ್ಹರು ಎಂದು ತೀರ್ಪು ನೀಡಿತ್ತು. ಆದರೆ ಕರ್ನಾಟಕದಲ್ಲಿ ಈವರೆಗೆ ಅದು ಜಾರಿ ಯಾಗಿಲ್ಲ. ದ್ದು, ಇದುವರೆಗೂ ಅದು ಜಾರಿಯಾಗಿಲ್ಲ ಎಂದು ಬೇಸರ ವ್ಯಕ್ತಪಡಿಸಿದರು.

Govt If Not Fulfilled Of Demands Anganwadi workers Protest Across Karnataka From December 1st.

ರಾಜ್ಯದಾದ್ಯಂತ ಸಾವಿರಾರು ನಿವೃತ್ತಿ ನೌಕರರು ಸಂಬಂಧಪಟ್ಟ ಅಧಿಕಾರಿಗಳಿಗೆ ಮನವಿ ಸಲ್ಲಿಸಿದರೂ ಪ್ರಯೋಜನವಾಗಿಲ್ಲ. ರಾಜ್ಯ ಸರ್ಕಾರ ಕೂಡಲೇ ಗ್ರಾಚ್ಯುಟಿಯನ್ನು ಪಾವತಿಸಿಬೇಕು. ಅನ್ನದೊಟ್ಟಿಗೆ ಅಕ್ಷರ ಕೇಂದ್ರವಾಗಿ ಅಂಗನವಾಡಿ ಕೇಂದ್ರಗಳನ್ನು ಮೇಲ್ದರ್ಜೆಗೆ ಏರಿಸಬೇಕು. ಅಂಗನವಾಡಿಗಳನ್ನು ಬಲಿಷ್ಠಗೊಳಿಸಬೇಕು. ಐಸಿಡಿಎಸ್ ಮಾರ್ಗಸೂಚಿಗಳ ಪ್ರಕಾರ ಆರು ಸೇವೆಗಳಿಗೆ ಮಾತ್ರ ಅಂಗನವಾಡಿ ನೌಕರರನ್ನು ಬಳಸಿಕೊಳ್ಳಬೇಕು. ಆದರೆ ಸ್ತ್ರೀ ಶಕ್ತಿ, ಭಾಗ್ಯಲಕ್ಷ್ಮಿ, ಮಾತೃವಂದನ ಕೆಲಸಗಳಲ್ಲಿ ಬಳಸಿಕೊಳ್ಳಲಾಗುತ್ತಿದ್ದು, ಐಸಿಡಿಎಸ್‌ ಉದ್ದೇಶಕ್ಕೆ ಧಕ್ಕೆ ತರಲಾಗುತ್ತಿದೆ ಎಂದು ಅವರು ಆರೋಪಿಸಿದರು..

Govt If Not Fulfilled Of Demands Anganwadi workers Protest Across Karnataka From December 1st.

ಸಂಘದ ಉಪಾಧ್ಯಕ್ಷೆ ಲೀಲಾವತಿ ಮಾತನಾಡಿ, ಅಂಗನವಾಡಿ ಕೇಂದ್ರದ ವೇಳಾಪಟ್ಟಿಯನ್ನು ಬೆಳಿಗ್ಗೆ 10ಗಂಟೆಯಿಂದ ಮಧ್ಯಾಹ್ನ 1ಗಂಟೆಯ ವರೆಗೂ ಪೂರ್ವ ಪ್ರಾಥಮಿಕ ಶಿಕ್ಷಣ ನೀಡಲು ಸಮಯ ನಿಗದಿಗೊಳಿಸಬೇಕು. ಆ ಸಮಯದಲ್ಲಿ ಸಾರ್ವಜನಿಕರಿಗೆ ಅಂಗನವಾಡಿ ಕೇಂದ್ರದ ಭೇಟಿಗೆ ಅವಕಾಶ ಕಲ್ಪಿಸಬಾರದು' ಎಂದು ಒತ್ತಾಯಿಸಿದರು.

English summary
Karnataka Government if not fulfilled of demands Anganwadi workers protest across Karnataka from December 1st.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X