5,8,9 ಮತ್ತು 11 ಬೋರ್ಡ್ ಪರೀಕ್ಷೆ; ಕರ್ನಾಟಕ ಸರ್ಕಾರದ ವಾದವೇನು?

ಬೆಂಗಳೂರು, ಮಾರ್ಚ್‌ 07: ರಾಜ್ಯ ಪಠ್ಯಕ್ರಮದ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಶಾಲೆಗಳ 5, 8, 9 ಹಾಗೂ 11ನೇ ತರಗತಿಗೆ ರಾಜ್ಯಮಟ್ಟದ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ ರಾಜ್ಯ ಸರ್ಕಾರ ಹೊರಡಿಸಿದ್ದ ಸುತ್ತೋಲೆಯನ್ನು ಹೈಕೋರ್ಟ್ ರದ್ದುಪಡಿಸಿದೆ.

ಇದರಿಂದಾಗಿ ಬೋರ್ಡ್ ಪರೀಕ್ಷೆ ನಡೆಸುವ ರಾಜ್ಯ ಸರ್ಕಾರದ ಪ್ರಯತ್ನಕ್ಕೆ ಹಿನ್ನಡೆಯಾಗಿದೆ. ಕಳೆದ ವರ್ಷವೂ ಹೀಗೆ ಆಗಿತ್ತು. ಇದರಿಂದಾಗಿ ಮಾರ್ಚ್ 11ರಿಂದ ಆರಂಭಗೊಳ್ಳಲಿರುವ ಬೋರ್ಡ್ ಪರೀಕ್ಷೆ ರದ್ದಾಗಿದೆ. ರಾಜ್ಯ ಸರ್ಕಾರ ಮೇಲ್ಮನವಿ ಸಲ್ಲಿಸಿದರೆ ಮತ್ತೊಂದು ಸುತ್ತಿನ ಕಾನೂನು ಹೋರಾಟ ನಡೆಯಲಿದೆ.

Govt Intention To Hold Board Exams Cancelled By HC

ಸರ್ಕಾರದ ಸುತ್ತೋಲೆಯನ್ನು ಪ್ರಶ್ನಿಸಿ ನೋಂದಾಯಿತ ಅನುದಾನರಹಿತ ಖಾಸಗಿ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ರೂಪ್ಸಾ) ಹಾಗೂ ಅನುದಾನ ರಹಿತ ಮಾನ್ಯತೆ ಪಡೆದ ಶಾಲೆಗಳ ಸಂಘಟನೆ (ಅವರ್ಸ್‌ ಸ್ಕೋಲ್) ಸಲ್ಲಿಸಿದ್ದ ಪ್ರತ್ಯೇಕ ತಕರಾರು ಅರ್ಜಿಗಳ ವಿಚಾರಣೆ ಪೂರ್ಣಗೊಳಿಸಿ 2024ರ ಫೆ.6ರಂದು ಕಾಯ್ದಿರಿಸಿದ್ದ ತೀರ್ಪನ್ನು ನ್ಯಾಯಮೂರ್ತಿ ರವಿ ವಿ. ಹೊಸಮನಿ ಅವರಿದ್ದ ಏಕಸದಸ್ಯ ನ್ಯಾಯಪೀಠ, ಬುಧವಾರ (ಮಾ.6)ರಂದು ಪ್ರಕಟಿಸಿದೆ.

ಹೈಕೋರ್ಟ್ ಆದೇಶವೇನು?: ಸೆಕ್ಷನ್ 22ರ ಪ್ರಕಾರ ವಿದ್ಯಾರ್ಥಿಗಳ ಪರೀಕ್ಷಾ ವ್ಯವಸ್ಥೆಯ ಮೂಲಕ ಆಂತರಿಕ ಅಥವ ಬಾಹ್ಯ ಮೌಲ್ಯಮಾಪನ ಮಾಡುವುದಕ್ಕಾಗಿ ನಿಯಮಗಳಿಗೆ ತಿದ್ದುಪಡಿ ಮಾಡಬೇಕು ಎಂದು ಹೇಳಲಾಗಿದೆ.

ಅಲ್ಲದೆ, ಸೆಕ್ಷನ್ 145(4)ರ ಪ್ರಕಾರ ಯಾವುದೇ ನಿಯಮಗಳಲ್ಲಿ ಬದಲಾವಣೆ ಮಾಡಬೇಕಾದಲ್ಲಿ ಶಾಸನ ಸಭೆಯಲ್ಲಿ ಚರ್ಚಿಸಿದ ಬಳಿಕ ಕ್ರಮಕ್ಕೆ ಮುಂದಾಗಬೇಕು ಎಂದು ಹೇಳಲಾಗಿದೆ. ಆದರೆ, ಶಿಕ್ಷಣ ಇಲಾಖೆ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಈ ರೀತಿಯ ಯಾವುದೇ ನಿಯಮಗಳಿಗೆ ತಿದ್ದುಪಡಿ ಮಾಡಿಲ್ಲ. ಆದ್ದರಿಂದ ಬೋರ್ಡ್ ಪರೀಕ್ಷೆ ನಡೆಸುವುದಕ್ಕೆ ಮುಂದಾಗಿರುವ ಕ್ರಮ ಶಿಕ್ಷಣ ಕಾಯಿದೆ ಸೆಕ್ಷನ್ 22ಕ್ಕೆ ತದ್ವಿರುದ್ದವಾಗಿದೆ ಎಂದು ನ್ಯಾಯಪೀಠ ತಿಳಿಸಿದೆ.

5,8 ಹಾಗೂ 9ನೇ ತರಗತಿ ವಿದ್ಯಾರ್ಥಿಗಳಿಗೆ ಬೋರ್ಡ್ ಪರೀಕ್ಷೆ ನಡೆಸುವ ಸಂಬಂಧ 2023ರ ಅಕ್ಟೋಬರ್ 6 ಮತ್ತು 7ರಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹೊರಡಿಸಿದ್ದ ಸುತ್ತೋಲೆಗಳನ್ನು ರದ್ದುಪಡಿಸಿ ಆದೇಶಿಸಿದೆ.

ಕರ್ನಾಟಕ ಶಿಕ್ಷಣ ಕಾಯ್ದೆ-1983ರಡಿ ಅಧಿಸೂಚನೆ ಹೊರಡಿಸಲಾಗಿತ್ತು. ಇದೀಗ ಆ ಅಧಿಸೂಚನೆಯನ್ನು ಹೈಕೋರ್ಟ್ ರದ್ದುಪಡಿಸಿದ್ದು ಕರ್ನಾಟಕ ಶಿಕ್ಷಣ ಕಾಯ್ದೆ-1983ರಡಿ ಪರೀಕ್ಷೆಗೆ ಸಂಬಧಿಸಿದ ಸೆಕ್ಷನ್ 22ರ ಪ್ರಕಾರ, ಪರೀಕ್ಷಾ ಪದ್ದತಿಯಲ್ಲಿ ಬದಲಾವಣೆ ಮಾಡಬೇಕಾದರೆ, ಕಾಯ್ದೆ ಅನ್ವಯ ಮೊದಲು ನಿಯಮಗಳನ್ನು ರೂಪಿಸಬೇಕು. ಅದು ಶಾಸಕಾಂಗದಲ್ಲಿ ಅನುಮೊಂದನೆಗೊಂಡ ಬಳಿಕವಷ್ಟೇ ಅಂತಿಮಗೊಳಿಸಿ ಜಾರಿಗೆ ತರಬೇಕು ಆದರೆ, ಈ ಪ್ರಕರಣದಲ್ಲಿ ಸರ್ಕಾರ ಅಂತಹ ವಿಧಾನವನ್ನು ಪಾಲಿಸಿಲ್ಲ ಎಂಬ ವಾದವನ್ನು ನ್ಯಾಯಾಲಯ ಮಾನ್ಯ ಮಾಡಿದೆ.

ಅರ್ಜಿದಾರರು ವಾದ ಮಾಡುವಾಗ ಪರೀಕ್ಷಾ ವ್ಯವಸ್ಥೆ, ಪರೀಕ್ಷೆಗಳನ್ನು ನಡೆಸುವುದು ಹಾಗೂ ಪರೀಕ್ಷಾ ಮಾದರಿಗಳನ್ನು ಜಾರಿಗೆ ತರಬೇಕಾದರೆ ಕರ್ನಾಟಕ ಶಿಕ್ಷಣ ಕಾಯ್ದೆ-1983ರ ಸೆಕ್ಷನ್ 22ರಡಿ ನಿಯಮಗಳನ್ನು ರೂಪಿಸುವುದು ಕಡ್ಡಾಯ. ಆದರೆ ಸರ್ಕಾರ ಅದನ್ನು ಮಾಡದೇ ನೇರವಾಗಿ ಅಧಿಸೂಚನೆ ಹೊರಡಿಸುವ ಮೂಲಕ ಬೋರ್ಡ್ ಪರೀಕ್ಷೆ ನಿಗದಿಪಡಿಸಿದೆ. ಇದು ಕಾಯ್ದೆಗೆ ತದ್ವಿರುದ್ಧವಾಗಿದೆ ಎಂದು ಹೇಳಿದೆ.

ಸರ್ಕಾರದ ವಾದವೇನು?: ಆರ್‌ಟಿಇ ಕಾಯ್ದೆಯ ಸೆಕ್ಷನ್ 16ರಡಿ 5ರಿಂದ 8ನೇ ತರಗತಿವರೆಗೆ ಸಾಮಾನ್ಯ ವಾರ್ಷಿಕ ಪರೀಕ್ಷೆಯಷ್ಟೇ ನಡೆಸಬೇಕು ಎಂದಿದೆ ಅನ್ನುವುದು ಅರ್ಜಿದಾರರ ವಾದ. ಆದೆರೆ, ಅದು ಬೋರ್ಡ್ ಪರೀಕ್ಷೆ ನಿರ್ಬಂಧಿಸುತ್ತದೆ ಎಂಬ ಅರ್ಥವಲ್ಲ. ಸೆಕ್ಷನ್ 30ಕ್ಕೆ ಸಂಬಂಧಿಸಿದ ಅರ್ಜಿದಾರರ ವ್ಯಾಖ್ಯಾನ ತಪ್ಪಾಗಿದೆ.

ಕರ್ನಾಟಕ ಶಿಕ್ಷಣ ಕಾಯ್ದೆಯ ಸೆಕ್ಷನ್ 22ರಡಿ ನಿಯಮಗಳನ್ನು ರೂಪಿಸುವುದು ಕಡ್ಡಾಯವಲ್ಲ. ಯಾವ ಸಂದರ್ಭದಲ್ಲಿ ನಿಯಮಗಳನ್ನು ರೂಪಿಸಬೇಕು ಎಂಬ ವಿಶೇಷಾಧಿಕಾರವನ್ನು ಸರ್ಕಾರ ಹೊಂದಿದೆ. ಉದ್ದೇಶಿತ ಬೋರ್ಡ್ ಪರೀಕ್ಷೆ ಅಥವಾ ಮೌಲ್ಯಮಾಪನ ಪೂರ್ವಸಿದ್ಧತಾ ಸ್ವರೂಪದ್ದಾಗಿದ್ದು, 10 ಮತ್ತು 12ನೇ ತರಗತಿಗೆ ಎದುರಾಗುವ ಬೋರ್ಡ್ ಪರೀಕ್ಷೆಗೆ ಮಕ್ಕಳನ್ನು ಸನ್ನದಗೊಳಿಸುವ ಉದ್ದೇಶವಿದೆ ಎಂದು ಹೇಳಿತ್ತು.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+