ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಕರ್ನಾಟಕ; 14 ದಿನ ಲಾಕ್ ಡೌನ್, ಏನು ಓಪನ್, ಕ್ಲೋಸ್?

|
Google Oneindia Kannada News

ಬೆಂಗಳೂರು, ಏಪ್ರಿಲ್ 26; ಕರ್ನಾಟಕದಲ್ಲಿ ಕೋವಿಡ್ 2ನೇ ಅಲೆ ನಿಯಂತ್ರಣಕ್ಕಾಗಿ ಸರ್ಕಾರ 14 ದಿನಗಳ ಕಾಲ ಲಾಕ್ ಡೌನ್ ಘೋಷಣೆ ಮಾಡಿದೆ. ಏಪ್ರಿಲ್ 27ರ ರಾತ್ರಿಯಿಂದ ಇದು ಜಾರಿಗೆ ಬರಲಿದೆ. ರಾಜ್ಯದಲ್ಲಿ ಕೋವಿಡ್ ಪ್ರಕರಣಗಳ ಒಟ್ಟು ಸಂಖ್ಯೆ ಪ್ರಸ್ತುತ 13,39,201

ಸೋಮವಾರ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದಲ್ಲಿ ವಿಧಾನಸೌಧದಲ್ಲಿ ಸಚಿವ ಸಂಪುಟ ಸಭೆಯಲ್ಲಿ ಕೋವಿಡ್ ನಿಯಂತ್ರಣದ ಕುರಿತು ವಿವರವಾದ ಚರ್ಚೆ ನಡೆಯಿತು. ಹಲವಾರು ಸಚಿವರು ತಮ್ಮ ಅಭಿಪ್ರಾಯಗಳನ್ನು ವ್ಯಕ್ತಪಡಿಸಿದರು.

ಕೋವಿಡ್; ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ ಕೋವಿಡ್; ಆರೋಗ್ಯ ಕರ್ನಾಟಕ ಯೋಜನೆಯಡಿ ಚಿಕಿತ್ಸೆ

ಸಭೆಯ ಬಳಿಕ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಪತ್ರಿಕಾಗೋಷ್ಠಿ ನಡೆಸಿದರು. "ಕೋವಿಡ್ ಬೆಂಗಳೂರು ಮತ್ತು ವಿವಿಧ ಜಿಲ್ಲೆಗಳಲ್ಲಿ ಹೆಚ್ಚಾಗುತ್ತಿದೆ. ಇದನ್ನು ನಿಯಂತ್ರಿಸುವುದು ಅನಿವಾರ್ಯವಾಗಿದೆ" ಎಂದರು.

ಕೋವಿಡ್ 19: ಬೆಂಗಳೂರಿನ 3 ಅಪಾಯಕಾರಿ ಜೋನ್‌ಗಳಿವು ಕೋವಿಡ್ 19: ಬೆಂಗಳೂರಿನ 3 ಅಪಾಯಕಾರಿ ಜೋನ್‌ಗಳಿವು

"ಕೋವಿಡ್ ಹರಡುವಿಕೆ ತಡೆಯಲು 14 ದಿನ ಇಡೀ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ. ಜನರು ಸರ್ಕಾರದ ಜೊತೆ ಸಹಕಾರ ನೀಡಬೇಕು" ಎಂದು ಯಡಿಯೂರಪ್ಪ ಅವರು ರಾಜ್ಯದ ಜನರಲ್ಲಿ ಮನವಿ ಮಾಡಿದರು.

ಶಿವಮೊಗ್ಗ; ವಾಹನ ತಪಾಸಣೆ ವೇಳೆ ಕೋವಿಡ್ ಸೋಂಕಿತ ಪ್ರತ್ಯಕ್ಷ ಶಿವಮೊಗ್ಗ; ವಾಹನ ತಪಾಸಣೆ ವೇಳೆ ಕೋವಿಡ್ ಸೋಂಕಿತ ಪ್ರತ್ಯಕ್ಷ

ಯಡಿಯೂರಪ್ಪ ಹೇಳಿದ್ದೇನು?

ಯಡಿಯೂರಪ್ಪ ಹೇಳಿದ್ದೇನು?

"ಏಪ್ರಿಲ್ 27ರಿಂದ 14 ದಿನ ಬೆಂಗಳೂರು ಸೇರಿ ಇಡೀ ರಾಜ್ಯದಲ್ಲಿ ಕಠಿಣ ನಿಯಮಗಳನ್ನು ಜಾರಿಗೊಳಿಸಲಾಗುತ್ತದೆ. ಸರಕು ಸಾಗಣೆ, ಉತ್ಪಾದಕ, ಕೃಷಿ ಕ್ಷೇತ್ರಕ್ಕೆ ವಿನಾಯಿತಿ ನೀಡಲಾಗಿದೆ. ಗಾರ್ಮೆಂಟ್ಸ್‌ಗಳಿಗೆ ಯಾವುದೇ ವಿನಾಯಿತಿ ನೀಡಿಲ್ಲ" ಎಂದು ಯಡಿಯೂರಪ್ಪ ಅವರು ಸ್ಪಷ್ಟಪಡಿಸಿದರು.

ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

ಅಗತ್ಯ ವಸ್ತುಗಳ ಖರೀದಿಗೆ ಅವಕಾಶ

"ಪ್ರತಿದಿನ ಬೆಳಗ್ಗೆ 6 ರಿಂದ 10 ಗಂಟೆ ತನಕ ಅಗತ್ಯ ವಸ್ತುಗಳ ಖರೀದಿಗೆ ಅವಕಾಶವನ್ನು ನೀಡಲಾಗುತ್ತದೆ. ಬಳಿಕ ಜನರ ಓಡಾಟವನ್ನು ಸಂಪೂರ್ಣವಾಗಿ ಬಂದ್ ಮಾಡಲಾಗುತ್ತದೆ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಸ್ಪಷ್ಟಪಡಿಸಿದರು.

ಬಸ್, ಖಾಸಗಿ ವಾಹನ ಸಂಚಾರವಿಲ್ಲ

ಬಸ್, ಖಾಸಗಿ ವಾಹನ ಸಂಚಾರವಿಲ್ಲ

14 ದಿನಗಳ ಕಾಲ ರಾಜ್ಯದಲ್ಲಿ ಸರಕು ಸಾಗಣೆ ವಾಹನಗಳ ಸಂಚಾರಕ್ಕೆ ಯಾವುದೇ ನಿರ್ಬಂಧವಿಲ್ಲ. ಬಸ್ ಸಂಚಾರ, ಖಾಸಗಿ ವಾಹನಗಳ ಸಂಚಾರಕ್ಕೆ ಅವಕಾಶವಿಲ್ಲ. ಆಟೋ, ಕ್ಯಾಬ್‌ಗಳ ಸಂಚಾರವಿಲ್ಲ. ಅಗತ್ಯ ವಸ್ತುಗಳ ಸರಕು ಸಾಗಣೆಗೆ ಅವಕಾಶವನ್ನು ನೀಡಲಾಗಿದೆ.

ಪಾರ್ಸೆಲ್‌ಗಳಿಗೆ ಅವಕಾಶವಿದೆ

ಪಾರ್ಸೆಲ್‌ಗಳಿಗೆ ಅವಕಾಶವಿದೆ

"14 ದಿನಗಳ ಕಾಲ ರಾಜ್ಯದಲ್ಲಿ ಹೋಟೆಲ್, ಬಾರ್‌ಗಳಲ್ಲಿ ಪಾರ್ಸೆಲ್‌ ಪಡೆಯಲು ಅವಕಾಶವಿದೆ" ಎಂದು ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ಹೇಳಿದ್ದಾರೆ. ಬೆಂಗಳೂರು ಸೇರಿದಂತೆ ವಿವಿಧ ನಗರದಲ್ಲಿ ಪುಡ್ ಡೆಲಿವರಿ ಸೇವೆ ಎಂದಿನಂತೆ ಇರಲಿದೆ.

ನಮ್ಮ ಮೆಟ್ರೋ ಸಂಚಾರವಿಲ್ಲ

ನಮ್ಮ ಮೆಟ್ರೋ ಸಂಚಾರವಿಲ್ಲ

14 ದಿನಗಳ ಕಾಲ ಬೆಂಗಳೂರು ನಗರದಲ್ಲಿ ನಮ್ಮ ಮೆಟ್ರೋ, ಬಿಎಂಟಿಸಿ ಬಸ್‌ಗಳು ಸಂಚಾರ ನಡೆಸುವುದಿಲ್ಲ. ಅಗತ್ಯ ವಸ್ತುಗಳನ್ನು ಸಾಗಣೆ ಮಾಡುವ ವಾಹನಗಳು ಮಾತ್ರ ಸಂಚಾರ ನಡೆಸಲಿವೆ.

Recommended Video

ಕೊರೋನ ತಡಿಯೋಕೆ 14 ದಿನಗಳ ಕಾಲ Lock Down! | Oneindia Kannada

English summary
Karnataka government announced 14 days lockdown for 14 days. Here is the list whats open and what remain closed.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X