ಮುಂದಿನ 3 ವರ್ಷ ಖಾಸಗಿ ಶಾಲೆ ತೆರೆಯಲು ಅನುಮತಿ ಇಲ್ಲ?

ಬೆಂಗಳೂರು, ಜೂನ್ 13 : ಸರ್ಕಾರಿ ಶಾಲೆಗಳಲ್ಲಿ ಹಾಜರಾತಿ ಹೆಚ್ಚಿಸಲು ಕರ್ನಾಟಕ ಸರ್ಕಾರ ಉದ್ದೇಶಿಸಿದೆ. ಮುಂದಿನ ಮೂರು ವರ್ಷಗಳ ಕಾಲ ರಾಜ್ಯದಲ್ಲಿ ಖಾಸಗಿ ಶಾಲೆ ತೆರೆಯಲು ಅನುಮತಿ ನೀಡದಿರಲು ಸರ್ಕಾರ ಚಿಂತನೆ ನಡೆಸಿದೆ.

ಖಾಸಗಿ ಶಾಲೆ ತೆರೆಯಲು ಅನುಮತಿ ನೀಡುವಂತೆ ಕೋರಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಇಲಾಖೆಗೆ 2,429 ಅರ್ಜಿಗಳು ಬಂದಿವೆ. ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆಯನ್ನು ಕಡಿಮೆ ಮಾಡಲು ಖಾಸಗಿ ಶಾಲೆ ತೆರೆಯಲು ಅನುಮತಿ ನೀಡದಿರಲು ನಿರ್ಧರಿಸಲಾಗಿದೆ.

ಆರ್‌ಟಿಇ ಅಡಿ ಖಾಸಗಿ ಶಾಲೆಗಳಲ್ಲಿ ಶೇ 25ರಷ್ಟು ಸೀಟುಗಳನ್ನು ನೀಡಲಾಗುತ್ತಿದೆ. ಸರ್ಕಾರಿ ಶಾಲೆಯ 5 ಕಿ.ಮೀ.ವ್ಯಾಪ್ತಿಯಲ್ಲಿಯೇ ಖಾಸಗಿ ಶಾಲೆಗಳನ್ನು ನಿರ್ಮಾಣ ಮಾಡಲಾಗಿದೆ. ಇದರಿಂದಾಗಿ ಸರ್ಕಾರಿ ಶಾಲೆಗಳಲ್ಲಿ ಮಕ್ಕಳ ಕೊರತೆ ಉಂಟಾಗಿದೆ.

Govt may not give permission to set up new private school

'ಖಾಸಗಿ ಶಾಲೆಗಳು ಎಷ್ಟಿವೆ. ಸರ್ಕಾರಿ ಶಾಲೆಗಳ ಬಳಿ ಎಷ್ಟಿವೆ? ಎಂಬ ಬಗ್ಗೆ ವರದಿಯನ್ನು ತಯಾರಿಸಲಾಗುತ್ತಿದೆ. ಹೊಸ ಖಾಸಗಿ ಶಾಲೆ ಆರಂಭಕ್ಕೆ ಅನುಮತಿ ನೀಡುವ ಬಗ್ಗೆ ಇನ್ನೂ ಅಂತಿಮ ನಿರ್ಧಾರವನ್ನು ಕೈಗೊಂಡಿಲ್ಲ' ಎಂದು ಸಚಿವ ಎನ್.ಮಹೇಶ್ ಹೇಳಿದ್ದಾರೆ.

ಸಿದ್ದರಾಮಯ್ಯ ಸಂಪುಟದಲ್ಲಿ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವರಾಗಿದ್ದ ತನ್ವೀರ್ ಸೇಠ್ ಮುಂದಿನ 5 ವರ್ಷ ಖಾಸಗಿ ಶಾಲೆ ತೆರೆಯಲು ಅನುಮತಿ ನೀಡುವುದಿಲ್ಲ ಎಂದು ಹಿಂದೆ ಹೇಳಿದ್ದರು. ಆದರೆ, ಜಾರಿಗೆ ಬಂದಿರಲಿಲ್ಲ.

ಬೆಂಗಳೂರಿನಲ್ಲಿಯೇ ಹೆಚ್ಚು : ಈ ಶೈಕ್ಷಣಿಕ ವರ್ಷದಲ್ಲಿ 2,429 ಹೊಸ ಖಾಸಗಿ ಶಾಲೆಗಳನ್ನು ತೆರೆಯಲು ಅನುಮತಿ ನೀಡುವಂತೆ ಕೋರಿ ಅರ್ಜಿ ಸಲ್ಲಿಕೆಯಾಗಿದೆ. ಈ ಪೈಕಿ 369 ಅರ್ಜಿಗಳು ಬೆಂಗಳೂರು ನಗರದಿಂದಲೇ ಸಲ್ಲಿಕೆಯಾಗಿವೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+