• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts

ಕಾಲೇಜು ಕ್ಯಾಂಪಸ್ ಒಳಗೆ ವಿದ್ಯಾರ್ಥಿಗಳ ವಾಹನಗಳಿಗೆ ನಿಷೇಧ?

|

ಬೆಂಗಳೂರು, ನವೆಂಬರ್ 20: ಯಾವ ಕಾಲೇಜುಗಳಲ್ಲಿ ನೋಡಿದರೂ ಪ್ರಾಧ್ಯಾಪಕರಿಗಿಂತಲೂ ವಿದ್ಯಾರ್ಥಿಗಳ ವಾಹನಗಳೇ ಹೆಚ್ಚಿರುತ್ತವೆ. ಇದಕ್ಕೆ ಕಡಿವಾಣ ಹಾಕಲು ರಾಜ್ಯ ಸರ್ಕಾರ ಚಿಂತನೆ ನಡೆಸಿದೆ.

ಬೆಂಗಳೂರಿನ ಬಸವಳಿದ ಬೀದಿಗೆ ಐದೂವರೆ ಲಕ್ಷ ಹೊಸ ವಾಹನ

ರಾಜ್ಯಾದ್ಯಂತ ಕಾಲೇಜು ವಿದ್ಯಾರ್ಥಿಗಳು ತಮ್ಮ ವಾಹನವನ್ನು ಕ್ಯಾಂಪಸ್‌ನೊಳಗೆ ತರುವುದರ ಮೇಲೆ ನಿಷೇಧ ಹೇರಲು ರಾಜ್ಯ ಸರ್ಕಾರ ಮುಂದಾಗಿದೆ.

ಡ್ರೋಣ್‌ ಬಳಸಿ ಟ್ರಾಫಿಕ್ ಮೇಲೆ ನಿಗಾ ಇಡ್ತಾರಂತೆ ಪೊಲೀಸರು

ಸಾರ್ವಜನಿಕ ಸಾರಿಗೆಗೆ ಉತ್ತೇಜ ನೀಡುವುದು ಹಾಗೂ ಸಂಚಾರ ದಟ್ಟಣೆ ತಗ್ಗಿಸುವ ಉದ್ದೇಶದಿಂದ ಈ ನಿರ್ಧಾರ ಕೈಗೊಳ್ಳಲಾಗುತ್ತದೆ ಎಂದು ಉನ್ನತ ಶಿಕ್ಷಣ ಇಲಾಖೆ ಮೂಲಗಳು ತಿಳಿಸಿವೆ. ಈ ಹೊಸ ಪ್ರಸ್ತಾಪದ ಬಗ್ಗೆ ಉನ್ನತ ಶಿಕ್ಷಣ ಸಚಿವ ಜಿಟಿ ದೇವೇಗೌಡ ಶೀಘ್ರವೇ ಕಾಲೇಜು ಆಡಳಿತ ಮಂಡಳಿಗಳೊಂದಿಗೆ ಸಭೆ ನಡೆಸಲಿದ್ದಾರೆ ಎಂಬ ಮಾಹಿತಿ ಲಭ್ಯವಾಗಿದೆ.

ಕಾಲೇಜು ವಿದ್ಯಾರ್ಥಿಗಳಲ್ಲಿ ವಾಹನಗಳು ಅದರಲ್ಲೂ ಬೈಕ್ ಕ್ರೇಜ್ ಹೆಚ್ಚಾಗಿರುತ್ತದೆ, ಇದು ಅಪಘಾತಕ್ಕೂ ಕಾರಣವಾಗುತ್ತದೆ. ಜೊತೆಗೆ ವಾಯು ಮಾಲಿನ್ಯವನ್ನು ತಗ್ಗಿಸುವುದು ಕೂಡ ಇದರ ಉದ್ದೇಶವಾಗಿದೆ.

ಡ್ರೋಣ್‌ ಬಳಸಿ ಟ್ರಾಫಿಕ್ ಮೇಲೆ ನಿಗಾ ಇಡ್ತಾರಂತೆ ಪೊಲೀಸರು

ರಾಜ್ಯದ ಎಲ್ಲಾ ವಿಶ್ವವಿದ್ಯಾಲಗಳ ಉಪ ಕುಲಪತಿ, ಖಾಸಗಿ ಮತ್ತು ಡೀಮ್ಡ್ ವಿಶ್ವವಿದ್ಯಾಲಯಗಳ ಪ್ರತಿನಿಧಿಗಳು ಹಾಗೂ ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರತಿನಿಧಿಗಳ ಸಭೆ ನಡೆಸಲು ಸಚಿವರು ನಿರ್ಧರಿಸಿದ್ದಾರೆ. ವಿದ್ಯಾರ್ಥಿಗಳು ತಮ್ಮ ವಾಹನವನ್ನು ಮನೆಯಲ್ಲಿಯೇ ಬಿಟ್ಟು ಸಮೂಹ ಸಾರಿಗೆಯನ್ನು ಬಳಸಿದರೆ ವಾಯುಮಾಲಿನ್ಯವೂಕಡಿಮೆಯಾಗುತ್ತದೆ ಎಂದು ಸಲಹೆ ನೀಡಿದ್ದಾರೆ.

ಉನ್ನತ ಶಿಕ್ಷಣ ಸಂಸ್ಥೆಗಳ ಕ್ಯಾಂಪಸ್‌ನಲ್ಲಿ ಸಾವಿರಾರು ವಾಹನಗಳು ಪಾರ್ಕಿಂಗ್ ಮಾಡುತ್ತಿರುವ ದೃಶ್ಯ ಕಂಡುಬರುತ್ತದೆ. ಇದು ಶೈಕ್ಷಣಿಕ ವಾತಾವರಣವನ್ನು ಕೆಡಿಸುತ್ತದೆ. ವಿದ್ಯಾರ್ಥಿಗಳಲ್ಲಿ ವಾಹನಗಳ ಪೈಪೋಟಿಗೂ ಕಾರಣವಾಗುತ್ತದೆ ಎನ್ನುವ ನಿರ್ಧಾರಕ್ಕೆ ಉನ್ನತ ಶಿಕ್ಷಣ ಇಲಾಖೆ ಬಂದಿದೆ.

English summary
Students in colleges across the state could soon be asked to leave their vehicles at home. The state government is considering a proposal banning students from bringing their vehicles to college campuses in order to promote public transport.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X