ಕ್ರಿಸ್‌ಮಸ್, ಹೊಸ ವರ್ಷಾಚರಣೆಗೆ ವಿಧಿಸಿರುವ ನಿರ್ಬಂಧಗಳೇನು?: ಇಲ್ಲಿದೆ ಮಾರ್ಗಸೂಚಿ ವಿವರ
ಬೆಂಗಳೂರು, ಡಿ.21: ಕ್ರಿಸ್‌ಮಸ್ ಹಾಗೂ ಹೊಸ ವರ್ಷಾಚರಣೆಗೆ ಸಂಬಂಧಿಸಿದಂತೆ ರಾಜ್ಯ ಸರ್ಕಾರ ಮಂಗಳವಾರ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿದೆ.
ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಬೆಳಗಾವಿ ಸುವರ್ಣ ವಿಧಾನಸೌಧದ ಸಮಿತಿ ಸಭಾಂಗಣದಲ್ಲಿ ಕೋವಿಡ್ ವಿಷಯಕ್ಕೆ ಸಂಬಂಧಿಸಿದಂತೆ ಸಚಿವರು ಹಾಗೂ ಹಿರಿಯ ಅಧಿಕಾರಿಗಳೊಂದಿಗೆ ಸಭೆ ನಡೆಸಿದರು. ಸಂಜೆಯ ವೇಳೆಗೆ ಮಾರ್ಗಸೂಚಿಗಳನ್ನು ಸಿದ್ಧಪಡಿಸಲಾಗಿದೆ. ರಾಜ್ಯ ಸರ್ಕಾರದ ಮುಖ್ಯ ಕಾರ್ಯದರ್ಶಿ ಹಾಗೂ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಕಾರ್ಯಕಾರಿ ಸಮಿತಿಯ ಅಧ್ಯಕ್ಷರೂ ಆಗಿರುವ ಪಿ. ರವಿಕುಮಾರ್ ಮಾರ್ಗಸೂಚಿ ಹೊರಡಿಸಿದ್ದಾರೆ.
ಕ್ರಿಸ್‌ಮಸ್ ಆಚರಣೆಯ ಮಾರ್ಗಸೂಚಿಗಳು:
* ಚರ್ಚ್ ಆವರಣದಲ್ಲಿ ಸಾಂಪ್ರದಾಯಿಕ ರೀತಿಯಲ್ಲಿ ಪ್ರಾರ್ಥನೆಗಳನ್ನು ಕೋವಿಡ್ ನಿಯಮಗಳನ್ನು ಪಾಲಿಸಿ ಮಾಡಬೇಕು
* ಕ್ರಿಸ್‌ಮಸ್ ಆಚರಣೆ, ಸಾಮೂಹಿಕ ಪ್ರಾರ್ಥನೆಗೆ ಯಾವುದೇ ಸಾರ್ವಜನಿಕ ಸ್ಥಳಗಳು, ರಸ್ತೆಗಳು, ಉದ್ಯಾನಗಳನ್ನು ಬಳಸುವಂತಿಲ್ಲ.

ಹೊಸ ವರ್ಷಾಚರಣೆಯ ಮಾರ್ಗಸೂಚಿಗಳು:
ಹೊಸ ವರ್ಷಾಚರಣೆಯ ಮಾರ್ಗಸೂಚಿಗಳು ಡಿ.30ರಿಂದ 2022ರ ಜ.2ರವರೆಗೆ ಜಾರಿಯಲ್ಲಿರುತ್ತವೆ.
* ಕ್ಲಬ್, ಪಬ್, ರೆಸ್ಟೋರಂಟ್‌ಗಳು, ಹೋಟೆಲ್, ಉದ್ಯಾನಗಳು ಅಥವಾ ಖಾಸಗಿ ಸ್ಥಳಗಳಲ್ಲಿ ಡಿಜೆ, ಆರ್ಕೆಸ್ಟ್ರಾ, ಸಮೂಹ ನೃತ್ಯ ಮುಂತಾದ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ನಡೆಸಲು ಅವಕಾಶ ಇರುವುದಿಲ್ಲ.
* ಹೊಸ ವರ್ಷವನ್ನು ಆಚರಿಸಲು ಸಾರ್ವಜನಿಕ ಸ್ಥಳಗಳು ಸೇರಿದಂತೆ ರಸ್ತೆಗಳು, ಉದ್ಯಾನಗಳು, ಆಟದ ಮೈದಾನಗಳನ್ನು ಬಳಸಬಾರದು
* ರೆಸ್ಟೋರಂಟ್, ಹೋಟೆಲ್, ಕ್ಲಬ್, ಪಬ್‌ಗಳು ಎಂದಿನಂತೆ ಕಾರ್ಯನಿರ್ವಹಿಸಬಹುದು. ಆದರೆ, ಅಲ್ಲಿನ ಸಿಬ್ಬಂದಿ RTPCR ನೆಗೆಟಿವ್ ಹೊಂದಿರಬೇಕು ಹಾಗೂ ಎರಡು ಡೋಸ್ ಲಸಿಕೆ ಪಡೆದಿರಬೇಕು
* ರೆಸ್ಟೋರಂಟ್, ಹೋಟೆಲ್, ಕ್ಲಬ್, ಪಬ್‌ಗಳಿಗೆ ಹೋಗುವವರು ಕಡ್ಡಾಯವಾಗ ಎರಡು ಡೋಸ್ ಲಸಿಕೆ ಪಡೆದಿರಬೇಕು. ಇದನ್ನು ಪರಿಶೀಲಿಸಿಯೇ ಪ್ರವೇಶಕ್ಕೆ ಅವಕಾಶ ನೀಡಬೇಕು
* ಅಪಾರ್ಟ್‌ಮೆಂಟ್ ಅಸೋಸಿಯೇಷನ್‌ಗಳು ಸಾಮಾಜಿಕ ಅಂತರ ಹಾಗೂ ಕೋವಿಡ್ ನಿಯಮಗಳನ್ನು ಪಾಲಿಸಿ ತಮ್ಮ ಆವರಣದಲ್ಲಿ ಕಾರ್ಯಕ್ರಮ ನಡೆಸಲು ಅನುಮತಿ ನೀಡಬೇಕು. ಆದರೆ, ಗುಂಪು ನೃತ್ಯಕ್ಕಾಗಿ ಡಿಜೆ/ ಡ್ಯಾನ್ಸ್‌ಫ್ಲೋರ್‌ನಂತಹ ಯಾವುದೇ ವಿಶೇಷ ಕಾರ್ಯಕ್ರಮಗಳನ್ನು ಆಯೋಜಿಸುವಂತಿಲ್ಲ. ಈ ಕ್ರಮಗಳನ್ನು ಅನುಸರಿಸದಿದ್ದರೆ ಸಂಘಟಕರೇ ಜವಾಬ್ದಾರರಾಗುತ್ತಾರೆ.
* ಈ ಹಿಂದಿನ ಮಾರ್ಗಸೂಚಿಯ ಪ್ರಕಾರ ಸಾರ್ವಜನಿಕ ಸ್ಥಳಗಳಲ್ಲಿ ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು, ಸಾಮಾಜಿಕ ಅಂತರ ಕಾಯ್ದುಕೊಳ್ಳಬೇಕು ಮತ್ತು ಹೋಟೆಲ್, ಪಬ್, ರೆಸ್ಟೋರಂಟ್, ಮಾಲ್‌ಗಳಲ್ಲಿ ಥರ್ಮಲ್ ಸ್ಕ್ರೀನಿಂಗ್ ಹಾಗೂ ಸ್ಯಾನಿಟೈಸರ್ ವ್ಯವಸ್ಥೆಯನ್ನು ಕಡ್ಡಾಯವಾಗಿ ಮಾಡಿರಬೇಕು.
* ಕೋವಿಡ್ 19 ಸಾಂಕ್ರಾಮಿಕ ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ರಾಜ್ಯ ಸರ್ಕಾರವು ಹೊರಡಿಸಿದ ಮಾರ್ಗಸೂಚಿಗಳನ್ನು ಸಂಬಂಧಪಟ್ಟ ಪ್ರಾಧಿಕಾರಗಳು ತಪ್ಪದೇ ಕಟ್ಟುನಿಟ್ಟಾಗಿ ಪಾಲಿಸಬೇಕು. ಅಲ್ಲದೆ, ಸಾರ್ವಜನಿಕ ಆರೋಗ್ಯದ ಹಿತದೃಷ್ಟಿಯಿಂದ ಆರೋಗ್ಯ ಇಲಾಖೆ, ಪೊಲೀಸ್ ಇಲಾಖೆ, ಮಹಾನಗರ ಪಾಲಿಕೆ, ಮಾಲಿನ್ಯ ನಿಯಂತ್ರಣ ಮಂಡಳಿ, ಅಗ್ನಿಶಾಮಕ ಇಲಾಖೆ ಹಾಗೂ ಇತರೆ ಇಲಾಖೆ, ಕಾರ್ಪೊರೇಷನ್, ಪ್ರಾಧಿಕಾರಗಳಿಂದ ಹೊರಡಿಸಲಾದ ಸೂಚನೆ ಹಾಗೂ ಮಾರ್ಗಸೂಚಿಗಳನ್ನೂ ಪಾಲಿಸಬೇಕು.
ಈ ಮಾರ್ಗಸೂಚಿಗಳನ್ನು ಉಲ್ಲಂಘಿಸುವ ಯಾವುದೇ ವ್ಯಕ್ತಿಯು ಉಲ್ಲಂಘಿಸಿದಲ್ಲಿ ಕಾನೂನು ಕ್ರಮದ ಜೊತೆಗೆ ವಿಪತ್ತು ನಿರ್ವಹಣಾ ಅಧಿನಿಯಮದ ಅನ್ವಯವೂ ಕ್ರಮಕ್ಕೆ ಒಳಗಾಗುತ್ತಾತೆ ಎಂದು ಮಾರ್ಗಸೂಚಿಯಲ್ಲಿ ತಿಳಿಸಿದ್ದಾರೆ.
Recommended Video
-
ಜಿಮ್ನಲ್ಲಿ ಭೇಟಿ, ಸಾಫ್ಟ್ವೇರ್ ಕಂಪನಿ ಕೆಲಸ: 7,500 ರೂ. ಸಂಬಳ ಪಡೆಯುತ್ತಿದ್ದ ಅಶ್ವಿನಿ ಅಪ್ಪು ಮನಗೆದ್ದಿದ್ದು ಹೇಗೆ? -
LPG ಕೊರತೆ ಎಫೆಕ್ಟ್: ಬೆಂಗಳೂರಿನ ಪಿಜಿಗಳಲ್ಲಿ ಇನ್ಮುಂದೆ ಸಿಗಲ್ಲ ದೋಸೆ, ಚಪಾತಿ -
Bengaluru: SSLC ಪರೀಕ್ಷೆ ಬರೆಯುವ ವಿದ್ಯಾರ್ಥಿಗಳಿಗೆ ಬಿಎಂಟಿಸಿಯಿಂದ ಉಚಿತ ಪ್ರಯಾಣ -
LPG Gas: ದೇಶದಲ್ಲಿ'ಅಡುಗೆ ಅನಿಲ ತುರ್ತು ಪರಿಸ್ಥಿತಿ' ಭೀತಿ; ಡಿಜಿಟಲ್ ಬುಕಿಂಗ್ ಸರ್ವರ್ ಡೌನ್; ಏಜೆನ್ಸಿಗಳ ಮುಂದೆ ಜನರ ಕ್ಯೂ -
ಬೆಂಗಳೂರಿನ ಪ್ರಮುಖ ವಿದ್ಯುತ್ ಸ್ಥಾವರ ಬಂದ್; ರಾಜ್ಯದಲ್ಲಿ ವಿದ್ಯುತ್ ಕಡಿತದ ಭೀತಿ! -
ಪಿಎಂ ಇ-ಬಸ್ ಯೋಜನೆ: ಕರ್ನಾಟಕದಲ್ಲಿ ರಸ್ತೆಗಿಳಿಯಲಿವೆ 750 ಇ-ಬಸ್ಗಳು; ಮಹಾರಾಷ್ಟ್ರಕ್ಕೆ ಸಿಂಹಪಾಲು -
Gold Price March 11: ಚಿನ್ನದ ಬೆಲೆಯಲ್ಲಿ ಹೊಸ ದಾಖಲೆ: ಬೆಳ್ಳಿ ಪ್ರಿಯರಿಗೆ ಅಚ್ಚರಿ, ಎಷ್ಟಿದೆ ಇಂದಿನ ಚಿನ್ನ - ಬೆಳ್ಳಿ ಬೆಲೆ -
Rain In Karnataka: ಈ ವಾರದಲ್ಲಿ ಕರ್ನಾಟಕದ ಈ ಭಾಗಗಳಲ್ಲಿ ಮಳೆ ಸಾಧ್ಯತೆ, ಬೆಂಗಳೂರಲ್ಲಿ ಹೇಗಿದೆ ವೆದರ್ -
Sayali Surve: ಇಸ್ಲಾಂನಿಂದ ಹಿಂದೂ ಧರ್ಮಕ್ಕೆ ಮತಾಂತರಗೊಂಡ ಮಿಸ್ ಇಂಡಿಯಾ ಅರ್ಥ್ ವಿಜೇತೆ ಸಯಾಲಿ ಸುರ್ವೆ, ಕಾರಣವೇನು -
Bengaluru Property: ಬೆಂಗಳೂರಿನಲ್ಲಿ ಕಟ್ಟಡ ನಿಯಮ ಉಲ್ಲಂಘಿಸಿದ ಆಸ್ತಿದಾರರಿಗೆ ಜಿಬಿಎ - ಬಿಡಿಎ ಜಂಟಿ ಶಾಕ್ -
LPG Alternatives: ಎಲ್ಪಿಜಿ ಬೆಲೆ ಏರಿಕೆಗೆ ಹೆದರಬೇಡಿ: ನಮ್ಮಲ್ಲೇ ಇರುವ ಈ ಪರ್ಯಾಯ ಮಾರ್ಗಗಳನ್ನು ಅಳವಡಿಸಿಕೊಂಡು ಜಾಣರಾಗಿ -
Gold: ಗದಗ ಲಕ್ಕುಂಡಿಯಲ್ಲಿ ಪತ್ತೆಯಾದ ಚಿನ್ನದ ನಿಧಿ ಪ್ರಕರಣಕ್ಕೆ ಟ್ವಿಸ್ಟ್: ಮೌಲ್ಯ 10 ಪಟ್ಟು ಹೆಚ್ಚು, ವಿಜಯನಗರ ಕಾಲದ ಆಭರಣ












Click it and Unblock the Notifications