ಇಂಜಿನಿಯರಿಂಗ್ ಸೇರುವ ಗ್ರಾಮೀಣ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್: ಸಿಗಲಿದೆ ಶೇ. 7.5 ಪ್ರತ್ಯೇಕ ಮೀಸಲಾತಿ

ಬೆಂಗಳೂರು: ಇಂಜಿನಿಯರಿಂಗ್ ಸೇರಿದಂತೆ ರಾಜ್ಯದ ವಿವಿಧ ವೃತ್ತಿಪರ ಶಿಕ್ಷಣ ಸಂಸ್ಥೆಗಳಲ್ಲಿ ಪ್ರವೇಶ ಪಡೆಯಲು ಬಯಸುವ ಗ್ರಾಮೀಣ ಭಾಗದ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ರಾಜ್ಯ ಸರ್ಕಾರ ಸಿಹಿಸುದ್ದಿ ನೀಡಿದೆ. ವೃತ್ತಿಪರ ಕೋರ್ಸ್‌ಗಳ ಸರ್ಕಾರಿ ಕೋಟಾದ ಸೀಟುಗಳ ಹಂಚಿಕೆಯಲ್ಲಿ ಗ್ರಾಮೀಣ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿದ್ದ ಶೇ. 15ರ ಗ್ರಾಮೀಣ ಮೀಸಲಾತಿ ನಿಯಮಗಳಲ್ಲಿ ಮಹತ್ವದ ಬದಲಾವಣೆ ಮಾಡಲಾಗಿದೆ.

ಈ ಹಿಂದೆ ಒಟ್ಟಾರೆಯಾಗಿ ಶೇ. 15ರಷ್ಟು ಮೀಸಲಾತಿಯನ್ನ ಗ್ರಾಮೀಣ ವಿದ್ಯಾರ್ಥಿಗಳಿಗೆ ನೀಡಲಾಗುತ್ತಿತ್ತು. ಆದರೆ ಇನ್ಮುಂದೆ ಈ ಮೀಸಲಾತಿಯನ್ನ ಎರಡು ಭಾಗ ಮಾಡಲಾಗಿದೆ. ಹೊಸ ನಿಯಮದ ಪ್ರಕಾರ ಗ್ರಾಮೀಣ ಭಾಗದ ಸರ್ಕಾರಿ ಶಾಲೆ ಮತ್ತು ಸರ್ಕಾರಿ ಪಿಯು ಕಾಲೇಜುಗಳಲ್ಲಿ ಓದಿದ ವಿದ್ಯಾರ್ಥಿಗಳಿಗೆ ಮಾತ್ರ ಶೇ. 7.5ರಷ್ಟು ಪ್ರತ್ಯೇಕ ಮೀಸಲಾತಿ ಲಭ್ಯವಾಗಲಿದೆ.

Govt of Karnataka Announces 7 5 Reservation For Rural Govt School Students In Professional Courses

ಈ ಕುರಿತು ಉನ್ನತ ಶಿಕ್ಷಣ ಇಲಾಖೆಯ (ತಾಂತ್ರಿಕ ಶಿಕ್ಷಣ) ಸರ್ಕಾರದ ಅಧೀನ ಕಾರ್ಯದರ್ಶಿ ಸುನೀತಾ ಆರ್. ಬಿದರಿ ಅವರು ರಾಜ್ಯಪತ್ರದಲ್ಲಿ ಅಧಿಕೃತ ಅಧಿಸೂಚನೆಯನ್ನ ಪ್ರಕಟಿಸಿದ್ದಾರೆ.

ಹೊಸ ನಿಯಮದಡಿ ವೃತ್ತಿಪರ ಕೋರ್ಸ್ ಪ್ರವೇಶ

ವೃತ್ತಿಪರ ಶಿಕ್ಷಣ ಸಂಸ್ಥೆಗಳ ಪ್ರವೇಶ ನಿಯಮಗಳು-2006ರ ನಿಯಮ 9ಕ್ಕೆ ಸರ್ಕಾರ ತಿದ್ದುಪಡಿ ತಂದಿದೆ. ಇದರ ಅನ್ವಯ ಗ್ರಾಮೀಣ ಕೋಟಾದ ಶೇ. 15ರಷ್ಟು ಸೀಟುಗಳನ್ನು 7.5% ಮತ್ತು 7.5% ಎಂದು ಎರಡು ಸಮಾನ ಭಾಗಗಳಾಗಿ ವಿಂಗಡಿಸಲಾಗಿದೆ.

ಕರ್ನಾಟಕದ ಗ್ರಾಮೀಣ ಪ್ರದೇಶಗಳಲ್ಲಿರುವ ಶಾಲಾ ಶಿಕ್ಷಣ ಇಲಾಖೆಯ ವ್ಯಾಪ್ತಿಯ ಸರ್ಕಾರಿ ಶಾಲೆಗಳಲ್ಲಿ 1 ರಿಂದ 10ನೇ ತರಗತಿಯವರೆಗೆ ಕಡ್ಡಾಯವಾಗಿ ವ್ಯಾಸಂಗ ಮಾಡಿರಬೇಕು. ಜೊತೆಗೆ ಗ್ರಾಮೀಣ ಪ್ರದೇಶದಲ್ಲಿರುವ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿಯೇ ಪಿಯುಸಿ ಪೂರೈಸಿರುವ ಅರ್ಹ ಅಭ್ಯರ್ಥಿಗಳಿಗೆ ಈ ಶೇ. 7.5 ರಷ್ಟು ಸೀಟುಗಳು ಮೀಸಲಿರಲಿವೆ.

ಉಳಿದ ಶೇ. 7.5 ರಷ್ಟು ಸೀಟುಗಳು ಗ್ರಾಮೀಣ ಭಾಗದ ಖಾಸಗಿ ಮತ್ತು ಅನುದಾನಿತ ಶಾಲೆಗಳಲ್ಲಿ ಓದಿದ ಇತರ ಅರ್ಹ ಗ್ರಾಮೀಣ ವಿದ್ಯಾರ್ಥಿಗಳಿಗೆ ಹಂಚಿಕೆಯಾಗಲಿವೆ.

ಸರ್ಕಾರಿ ಶಾಲಾ ವಿದ್ಯಾರ್ಥಿಗಳಿಗೆ ಮೀಸಲಾತಿಯ ಲಾಭವೇನು?

ಹಿಂದಿನ ವ್ಯವಸ್ಥೆಯಲ್ಲಿ ಶೇ. 15ರಷ್ಟು ಸೀಟುಗಳಿಗೆ ಗ್ರಾಮೀಣ ಭಾಗದ ಖಾಸಗಿ ಮತ್ತು ಅನುದಾನಿತ ಶಾಲೆಗಳ ವಿದ್ಯಾರ್ಥಿಗಳು ಕೂಡ ಪೈಪೋಟಿ ನಡೆಸುತ್ತಿದ್ದರು. ಖಾಸಗಿ ಶಾಲೆಯ ವಿದ್ಯಾರ್ಥಿಗಳು ಸುಲಭವಾಗಿ ಉತ್ತಮ ರ‍್ಯಾಂಕಿಂಗ್‌ ಪಡೆದು ಸೀಟುಗಳನ್ನ ತಮ್ಮದಾಗಿಸಿಕೊಳ್ಳುತ್ತಿದ್ದರು. ಇದರಿಂದಾಗಿ ಮೂಲಭೂತ ಸೌಕರ್ಯಗಳ ಕೊರತೆಯ ನಡುವೆಯೂ ಸರ್ಕಾರಿ ಶಾಲೆಗಳಲ್ಲಿ ಓದಿದ ಪ್ರತಿಭಾವಂತ ಹಾಗೂ ಬಡ ವಿದ್ಯಾರ್ಥಿಗಳಿಗೆ ವೃತ್ತಿಪರ ಕೋರ್ಸ್‌ಗಳ ಪ್ರವೇಶ ಸಿಗುವುದು ಅತ್ಯಂತ ಕಷ್ಟವಾಗಿತ್ತು.

ಇದೀಗ ಶೇ. 7.5ರಷ್ಟು ಸೀಟುಗಳನ್ನ ಕೇವಲ ಸರ್ಕಾರಿ ಶಾಲಾ-ಕಾಲೇಜು ವಿದ್ಯಾರ್ಥಿಗಳಿಗೆ ಮಾತ್ರ ಸೀಮಿತಗೊಳಿಸಿರುವುದರಿಂದ ಅವರಿಗೆ ಉನ್ನತ ಶಿಕ್ಷಣದಲ್ಲಿ ಹೆಚ್ಚಿನ ನ್ಯಾಯ ದೊರೆಯಲಿದೆ.

ಶೀಘ್ರದಲ್ಲೇ ನಿಯಮ ಜಾರಿ

ಈ ತಿದ್ದುಪಡಿ ನಿಯಮಗಳು ರಾಜ್ಯಪತ್ರದಲ್ಲಿ ಪ್ರಕಟವಾದ ದಿನಾಂಕದಿಂದಲೇ ಅಧಿಕೃತವಾಗಿ ಜಾರಿಗೆ ಬರಲಿವೆ ಎಂದು ಉನ್ನತ ಶಿಕ್ಷಣ ಇಲಾಖೆಯ ಅಧಿಸೂಚನೆಯಲ್ಲಿ ಸ್ಪಷ್ಟವಾಗಿ ತಿಳಿಸಲಾಗಿದೆ.

ರಾಜ್ಯ ಸರ್ಕಾರದ ಈ ನಿರ್ಧಾರವು ಗ್ರಾಮೀಣ ಪ್ರದೇಶದ ಬಡ ಹಾಗೂ ಪ್ರತಿಭಾವಂತ ವಿದ್ಯಾರ್ಥಿಗಳಿಗೆ ವರದಾನವಾಗಲಿದ್ದು, ಮುಂದಿನ ದಿನಗಳಲ್ಲಿ ಹೆಚ್ಚು ಹೆಚ್ಚು ಸರ್ಕಾರಿ ಶಾಲಾ ವಿದ್ಯಾರ್ಥಿಗಳು ವೃತ್ತಿಪರ ಶಿಕ್ಷಣದತ್ತ ಮುಖ ಮಾಡಲು ಪ್ರೇರಣೆಯಾಗಲಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+