Breaking; ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ
ಬೆಂಗಳೂರು, ನವೆಂಬರ್ 6; ಕರ್ನಾಟಕ ಸರ್ಕಾರ ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರು ಬದಲಾವಣೆ ಮಾಡಿ ಆದೇಶ ಹೊರಡಿಸಿದೆ. ಕಡತ, ಮೊಹರು, ಪತ್ರ ವ್ಯವಹಾರದಲ್ಲಿಯೂ ಹೊಸ ಹೆಸರು ಬಳಕೆ ಮಾಡುವಂತೆ ಸುತ್ತೋಲೆ ಹೊರಡಿಸಲಾಗಿದೆ.
ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಳಿ ಹೆಸರನ್ನು 'ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ' ಎಂದು ಬದಲಾವಣೆ ಮಾಡಲಾಗಿದೆ. ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಸಹ ಅಧಿಸೂಚನೆ ಪ್ರಕಟಿಸಿದೆ.
ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು 560003 5/11/2022ರಂದು ಈ ಕುರಿತು ಆದೇಶ ಹೊರಡಿಸಿದೆ. ನಿರ್ದೇಶಕರು (ಪರೀಕ್ಷೆಗಳು) ಹೆಚ್. ಎನ್. ಗೋಪಾಲಕೃಷ್ಣ ಈ ಕುರಿತು ಆದೇಶವನ್ನು ಹೊರಡಿಸಿದ್ದಾರೆ.

ಆದೇಶದ ವಿವರ; ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಲಿ ಎಂಬುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಎಂದು ಪ್ರಯೋಜಿಸಿರುವ ಕುರಿತು.
ಆದೇಶದ ವಿವರ; ಕರ್ನಾಟಕ ಪ್ರೌಢ ಶಿಕ್ಷಣ ಪರೀಕ್ಷಾ ಮಂಡಲಿ ಎಂಬುದರ ಬದಲಾಗಿ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ ಎಂದು ಪ್ರಯೋಜಿಸಿರುವ ಕುರಿತು.
ಮೇಲ್ಕಂಡ ವಿಷಯಕ್ಕೆ ಸಂಬಂಧಿಸಿದಂತೆ ಉಲ್ಲೇಖಿತ-1ರ ಸಂಸದೀಯ ವ್ಯವಹಾರಗಳು ಮತ್ತು ಶಾಸನ ರಚನೆ ಸಚಿವಾಲಯ ಅಧಿಸೂಚನೆ ಸಂಖ್ಯೆ 11/10/2022ರ ಅನ್ವಯ ಕರ್ನಾಟಕ ಪ್ರೌಢ ಶಿಕ್ಷಣ ಮಂಡಲಿ ಎಂಬ ಪದಗಳ ಬದಲಿಗೆ 'ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ' ಎಂದು ಬದಲಾಯಿಸಲಾಗಿರುತ್ತದೆ.
ಈ ಹಿನ್ನಲೆಯಲ್ಲಿ ಇನ್ನು ಮುಂದೆ ಈ ಕಚೇರಿಯಿಂದ ಪತ್ರವ್ಯವಹರಿಸುವಾಗ ಕಡತ ಮಂಡಿಸುವಾಗ, ಮೊಹರು ಹಾಕುವಾಗ ಹಾಗೂ ಇತರೆ ಕಾರ್ಯ ನಿರ್ವಹಣೆಯ ಸಂದರ್ಭದಲ್ಲಿ ಕೆಳಗಿನ ವಿಳಾಸ ಬಳಸಲು ಸುತ್ತೋಲೆಯಲ್ಲಿ ತಿಳಿಸಲಾಗಿದೆ.
ವಿಳಾಸ; ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯ ನಿರ್ಣಯ ಮಂಡಲಿ, 6ನೇ ಅಡ್ಡರಸ್ತೆ, ಮಲ್ಲೇಶ್ವರಂ, ಬೆಂಗಳೂರು 56003 ಎಂಬ ಹೆಸರಿನಲ್ಲಿ ವ್ಯವಹರಿಸಲು ಸೂಚಿಸಿದೆ.












Click it and Unblock the Notifications