1-10ನೇ ತರಗತಿ ಶಾಲಾ ಮಕ್ಕಳ ಬ್ಯಾಗ್ ಹೊರೆ ತಗ್ಗಿಸುವ ಸುತ್ತೋಲೆ

ಬೆಂಗಳೂರು, ಜೂನ್ 21; ಶೈಕ್ಷಣಿಕ ವರ್ಷ ಆರಂಭವಾಗಿದ್ದು, ಶಾಲಾ ಮಕ್ಕಳ ಬ್ಯಾಗ್ ಹೊರೆ ಮತ್ತೆ ಚರ್ಚೆಗಳು ಆರಂಭವಾಗಿವೆ. ವಿದ್ಯಾರ್ಥಿಗಳು ಅವರ ದೇಹ ತೂಕದ ಶೇಕಡ 10ರಷ್ಟು ತೂಕದ ಶಾಲಾ ಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗಬಹುದಾಗಿ ಮೂಳೆ ತಜ್ಞರು ಶಿಫಾಸರು ಮಾಡಿರುತ್ತಾರೆ. ಈ ಹಿನ್ನಲೆಯಲ್ಲಿ ಶಾಲಾ ಮಕ್ಕಳ ಬ್ಯಾಗ್ ಹೊರೆ ಇಳಿಸುವ ಕುರಿತು ಸುತ್ತೋಲೆಯೊಂದನ್ನು ಹೊರಡಿಸಲಾಗಿದೆ.

ಬುಧವಾರ ಆಯುಕ್ತರು ಶಾಲಾ ಶಿಕ್ಷಣ ಇಲಾಖೆ, ಬೆಂಗಳೂರು ಈ ಕುರಿತು ಸುತ್ತೋಲೆ ಹೊರಡಿಸಿದ್ದಾರೆ. ಇದು 1 ರಿಂದ 10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ತಗ್ಗಿಸುವ ಬಗ್ಗೆ ಎಂಬ ವಿಷಯವನ್ನು ಒಳಗೊಂಡಿದೆ.

Govt Of Karnataka Circular On School Bags Weight Limit

ಪ್ರಾಥಮಿಕ ಮತ್ತು ಪ್ರೌಢಶಾಲೆಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಹೊರೆಯಿಲ್ಲದೇ ಸಂತಸದಾಯಕವಾಗಿ ಕಲಿಯ ವಾತಾವರಣವನ್ನು ರೂಪಿಸುವ ಸಲುವಾಗಿ Centre for Child and Law ಸಹಯೋಗದೊಂದಿಗೆ ಡಿ. ಎಸ್. ಇ. ಆರ್. ಟಿಯವರು ಒಂದು ಅಧ್ಯಯನ ನಡೆಸಿ ವರದಿಯನ್ನು ಸರ್ಕಾರಕ್ಕೆ ಸಲ್ಲಿಸಿರುತ್ತಾರೆ.

ವರದಿಯಲ್ಲಿ ವಿದ್ಯಾರ್ಥಿಗಳು ಅವರ ದೇಹದ ತೂಕದ ಶೇಕಡ 10 ರಿಂದ 15ರಷ್ಟು ತೂಕದ ಶಾಲಾ ಬ್ಯಾಗ್‌ಗಳನ್ನು ತೆಗೆದುಕೊಂಡು ಹೋಗಬಹುದಾಗಿ ಮೂಳೆ ತಜ್ಞರು ಶಿಫಾರಸು ಮಾಡಿರುತ್ತಾರೆ. ಈ ಹಿನ್ನೆಲೆಯಲ್ಲಿ ರಾಜ್ಯಾದ್ಯಂತ ಸರ್ಕಾರಿ, ಅನುದಾನಿತ ಹಾಗೂ ಅನುದಾನರಹಿತ ಎಲ್ಲಾ ಶಾಲೆಗಳಲ್ಲಿ 1 ರಿಂದ 10ನೇ ತರಗತಿಗಳಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳ ಶಾಲಾ ಬ್ಯಾಗ್ ಹೊರೆ ಕಡಿಮೆ ಮಾಡಲು ಈ ಕೆಳಕಂಡ ಅಂಶಗಳಿಗೆ ಅನುಗುಣವಾಗಿ ಕ್ರಮಗಳನ್ನು ಕೈಗೊಳ್ಳಬೇಕು ಎಂದು ಸೂಚನೆ ನೀಡಲಾಗಿದೆ.

ಶಾಲಾ ಬ್ಯಾಗ್ ತೂಕ ಎಷ್ಟಿರಬೇಕು?; ಈ ಸುತ್ತೋಲೆಯಲ್ಲಿ ವಿದ್ಯಾರ್ಥಿಯ ಶಾಲಾಬ್ಯಾಗ್‌ ತೂಕವು ಎಷ್ಟಿರಬೇಕು ಎಂದು ನಿಗದಿ ಮಾಡಲಾಗಿದೆ. 1-2 1.5 ರಿಂದ 2 ಕಿ. ಗ್ರಾಂ, 3-5 2 ರಿಂದ 3 ಕಿ. ಗ್ರಾಂ, 6-8 3 ರಿಂದ 4 ಕಿ. ಗ್ರಾಂ, 9-10 4 ರಿಂದ 5 ಕಿ. ಗ್ರಾಂ, ಇರಬೇಕು ಎಂದು ಹೇಳಲಾಗಿದೆ.

1 ಮತ್ತು 2ನೇ ತರಗತಿ ಬೋಧನೆಯು ಬುನಾದಿ ಹಂತದ ಶಿಕ್ಷಣವಾಗಿದ್ದು ವಿದ್ಯಾರ್ಥಿಗಳು ಸಂತಸ ಮತ್ತು ಸಕ್ರಿಯವಾಗಿ ಶಾಲೆಗಳಲ್ಲಿಯೇ ಚಟುವಟಿಕೆ ಮೂಲಕ ಕಲಿಯಲು ಆದ್ಯತೆ ನೀಡುವುದು. ಈ ವಿದ್ಯಾರ್ಥಿಗಳಿಗೆ ಕಲಿಕೆಯ ಪುನರ್ಬಲನಕ್ಕಾಗಿ ಯಾವುದೇ ರೀತಿಯ ಗೃಹಪಾಠ ಅಥವಾ ಮನೆಗೆಲಸವನ್ನು ನೀಡದಂತೆ ಕ್ರಮವಹಿಸುವುದು.

1 ರಿಂದ 5ನೇ ತರಗತಿಗಳ ವಿದ್ಯಾರ್ಥಿಗಳಿಗೆ ಭಾಷೆ, ಗಣಿತ ಹಾಗೂ ಪರಿಸರ ವಿಜ್ಞಾನ ವಿಷಯ ಹೊರತುಪಡಿಸಿ ಇನ್ಯಾವುದೇ ಪಠ್ಯಕ್ರಮವನ್ನು ನಿಗದಿಪಡಿಸದಂತೆ ಕ್ರಮವಹಿಸುವುದು. 3 ರಿಂದ 10ನೇ ತರಗತಿ ವಿದ್ಯಾರ್ಥಿಗಳಿಗೆ ಹೆಚ್ಚಿನ ಪ್ರಮಾಣದಲ್ಲಿ ಕಲಿಕಾ ಬಲವರ್ಧನೆ ಚಟುವಟಿಕೆ ಗಳನ್ನು ಶಾಲೆಗಳಲ್ಲಿಯೇ ನಿರ್ವಹಿಸುವುದು ಅತ್ಯಂತ ಅಗತ್ಯವಿರುವ ಹಾಗೂ ಪೂರಕವಾಗಿರುವಂತಹ ಚಟುವಟಿಕೆಗಳಿಗೆ ಸೀಮಿತ ಪ್ರಮಾಣದಲ್ಲಿ ಮನೆಗೆಲಸ ನೀಡುವಂತೆ ಕ್ರಮವಹಿಸುವುದು ಎಂದು ಹೇಳಿದೆ.

ವಿದ್ಯಾರ್ಥಿಗಳು ಕಲಿಕೆಯ ಎಲ್ಲಾ ಪಠ್ಯ ಪುಸ್ತಕಗಳು/ ನೋಟ್ ಪುಸ್ತಕಗಳು ಮತ್ತು ಅಭ್ಯಾಸ ಪುಸ್ತಕಗಳನ್ನು ಪ್ರತಿ ದಿನವು ತರುವುದನ್ನು ತಪ್ಪಿಸಲು ವಿದ್ಯಾರ್ಥಿಗಳಿಗೆ ಮುಂಚಿತವಾಗಿಯೇ ಆಯಾ ದಿವಸದ ವೇಳಾಪಟ್ಟಿಗೆ ಅನುಗುಣವಾಗಿ ಅಗತ್ಯವಿರುವ ಪುಸ್ತಕಗಳನ್ನು ಮಾತ್ರ ಶಾಲೆಗೆ ತರಲು ಸೂಚನೆ ನೀಡುವುದು. ಅಭ್ಯಾಸ ಚಟುವಟಿಕೆಗಳನ್ನು ಹಾಳೆಗಳಲ್ಲಿ ಮಾಡಿಸಿ ಫೈಲ್ ಮಾಡಿಸುವುದು. ಅವಶ್ಯಕತೆ ಇದ್ದಾಗ ಪರಾಮರ್ಶಿಸಲು ಇವುಗಳನ್ನು ಶಾಲೆಗಳಲ್ಲಿಯೇ ಸಂಗ್ರಹಿಸಿಡಲು ಪ್ರೇರೇಪಿಸುವುದು ಅಥವಾ ಅಭ್ಯಾಸ ಪುಸ್ತಕಗಳನ್ನು ಬಳಸಿದಲ್ಲಿ ಇವುಗಳನ್ನು ಶಾಲೆಗಳಲ್ಲಿಯೇ ಸಂಗ್ರಹಿಸಿಡತಕ್ಕದ್ದು.

ವಿದ್ಯಾರ್ಥಿಯು ಮನೆಯಿಂದ ಶಾಲೆಗೆ, ಶಾಲೆಯಿಂದ ಮನೆಗೆ ತೆಗೆದುಕೊಂಡು ಹೋಗುವ ಪಠ್ಯ ಪುಸ್ತಕಗಳು, ನೋಟ್ ಪುಸ್ತಕಗಳು, ಲೇಖನ ಸಾಮಗ್ರಿಗಳು, ಕಲಿಕಾ ಉಪಕರಣಗಳು ಹಾಗೂ ಇನ್ನಿತರ ವಸ್ತುಗಳನ್ನು ತರಗತಿ ಒಳಗೆ ಶೇಖರಿಸಿಡುವಂತೆ ಅಗತ್ಯ ಅನುಕೂಲತೆಗಳನ್ನು ಕಲ್ಪಿಸತಕ್ಕದ್ದು. ಶಾಲಾ ಗ್ರಂಥಾಲಯಗಳಲ್ಲಿ ಶಬ್ದಕೋಶ, ಸಮಾನಾರ್ಥಕ ಪದಕೋಶ. ಅಟ್ಲಾಸ್, ಜ್ಞಾನ ವಿಜ್ಞಾನ ಕೋಶಗಳಂತಹ ಪರಾಮರ್ಶನ ಸಾಮಗ್ರಿಗಳು ಸಾಕಷ್ಟು ಸಂಖ್ಯೆಯಲ್ಲಿ ಲಭ್ಯವಾಗುವಂತೆ ಹಾಗೂ ಮಕ್ಕಳು ಇವುಗಳನ್ನು ಅವಶ್ಯಕತೆ ಇದ್ದಾಗ ಬಳಸಿಕೊಳ್ಳುವಂತೆ ವ್ಯವಸ್ಥೆಮಾಡುವುದು ಎಂದು ತಿಳಿಸಿದೆ.

100 ರಿಂದ 200 ಪುಟ ಮೀರದ ನೋಟ್ ಪುಸ್ತಕಗಳನ್ನು ಬಳಸುವಂತೆ ಕ್ರಮವಹಿಸುವುದು. ಕಡಿಮೆ ಖರ್ಚಿನ ಹಗುರವಾದ ಹಾಗೂ ದೀರ್ಘ ಕಾಲ ಬಾಳಿಕೆ ಬರುವಂತಹ ಶಾಲಾಬ್ಯಾಗ್ ಹಾಗೂ ಇತರೆ ಸಾಮಗ್ರಿಗಳನ್ನು ಬಳಸಲು ವಿದ್ಯಾರ್ಥಿಗಳಿಗೆ ಪ್ರೋತ್ಸಾಹಿಸುವುದು. ಮಕ್ಕಳು ಶಾಲೆಗಳಿಗೆ ಕುಡಿಯುವ ನೀರನ್ನು ಕೊಂಡೊಯ್ಯುವುದನ್ನು ತಪ್ಪಿಸಲು ಕುಡಿಯುವ ನೀರಿನ ವ್ಯವಸ್ಥೆಯನ್ನು ಶಾಲೆಯಲ್ಲಿಯೇ ಕಲ್ಪಿಸತಕ್ಕದ್ದು.

ಅತಿಯಾದ ಹೊರೆ ಇರುವ ಶಾಲಾಬ್ಯಾಗ್‌ನಿಂದ ಉಂಟಾಗಬಹುದಾದ ದುಷ್ಪರಿಣಾಮಗಳ ಬಗ್ಗೆ ಪೋಷಕರಿಗೆ ಹಾಗೂ ವಿದ್ಯಾರ್ಥಿಗಳಿಗೆ ಮನವರಿಕೆ ಮಾಡಿಕೊಡುವುದು. ಶಾಲಾ ಎಸ್.ಎಂ.ಸಿ/ ಎಸ್. ಡಿ. ಎಂ. ಸಿ ಹಾಗೂ ಶಾಲಾಮುಖ್ಯಸ್ಥರು ಮೇಲ್ಕಂಡ ಕ್ರಮಗಳನ್ನು ಪರಿಣಾಮಕಾರಿಯಾಗಿ ಅನುಷ್ಠಾನಗೊಳಿಸುವುದು ಎಂದು ಸೂಚಿಸಿದೆ.

1 ರಿಂದ 5ನೇ ತರಗತಿವರೆಗೆ ಎನ್. ಸಿ. ಇ. ಆರ್. ಟಿ ನಿಗದಿಪಡಿಸಿರುವ ಪಠ್ಯಕ್ರಮವನ್ನು ಹೊರತುಪಡಿಸಿ, ಇನ್ಯಾವುದೇ ಪಠ್ಯಕ್ರಮವನ್ನು ನಿಗದಿಪಡಿಸಿ ಬೋಧಿಸಿದರೆ ಅಂತಹ ಶಾಲೆಗಳ ಮಾನ್ಯತೆಯನ್ನು ರದ್ದುಪಡಿಸತಕ್ಕದ್ದು ಹಾಗೂ ಈ ಬಗ್ಗೆ ನಿಗಾವಹಿಸಲು ಶಾಲೆಗಳಿಗೆ ಭೇಟಿ ನೀಡಿ ತಪಾಸಣೆ ಮಾಡಲು ವಿಶೇಷ ತಂಡವನ್ನು ರಚಿಸತಕ್ಕದ್ದು ಎಂದು ಸುತ್ತೋಲೆ ಹೇಳಿದೆ.

ಕ್ಲಸ್ಟರ್ ಹಂತದಲ್ಲಿ ಸಿ. ಆರ್. ಪಿ ಮತ್ತು ಇ. ಸಿ. ಒಗಳು ಬ್ಲಾಕ್ ಹಂತದಲ್ಲಿ ಬಿ. ಆರ್. ಸಿ ಮತ್ತು ಬಿ. ಇ. ಒ ರ ಜಿಲ್ಲಾ ಹಂತದಲ್ಲಿ ಉಪನಿರ್ದೇಶಕರು (ಆಡಳಿತ) ಮತ್ತು ಪ್ರಾಂಶುಪಾಲರು ಡಯಟ್‌ರವರು ಶಾಲಾಬಾಗ್ ಹೊರೆ ಕಡಿತಗೊಳಿಸುವ ಕ್ರಮಗಳನ್ನು ಅನುಷ್ಠಾನಗೊಳಿಸಿರುವ ಬಗ್ಗೆ ಶಾಲಾ ಭೇಟಿ ಮತ್ತು ಪರಿಶೀಲನೆ ಮಾಡುವುದರ ಮೂಲಕ ಖಾತ್ರಿಪಡಿಸಿಕೊಳ್ಳಲು ಸೊತ್ತೋಲೆ ತಿಳಿಸಿದೆ.

Notifications
Settings
Clear Notifications
Notifications
Use the toggle to switch on notifications
  • Block for 8 hours
  • Block for 12 hours
  • Block for 24 hours
  • Don't block
Gender
Select your Gender
  • Male
  • Female
  • Others
Age
Select your Age Range
  • Under 18
  • 18 to 25
  • 26 to 35
  • 36 to 45
  • 45 to 55
  • 55+