• search
  • Live TV
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ಎಸ್‌ಸಿ, ಎಸ್‌ಟಿ ಸಮುದಾಯಕ್ಕೆ ಉತ್ತಮ ಜೀವನ ಕಲ್ಪಿಸಲು ಸರ್ಕಾರ ಬದ್ಧ

|
Google Oneindia Kannada News

ಬೆಂಗಳೂರು, ಅಕ್ಟೋಬರ್ 09: ತುಳಿತಕ್ಕೆ ಒಳಪಟ್ಟ ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಗಳಿಗೆ ಆತ್ಮಗೌರವ, ಸಮಾನ ಅವಕಾಶ ಹಾಗೂ ಸ್ವಾಭಿಮಾನದ ಬದುಕು ಕಲ್ಪಿಸಲು ಸರ್ಕಾರ ಬದ್ಧವಾಗಿದೆ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ತಿಳಿಸಿದರು.

ವಾಲ್ಮೀಕಿ ಜಯಂತಿಯ ಅಂಗವಾಗಿ ಭಾನುವಾರ ಬೆಂಗಳೂರಿನಲ್ಲಿ ನಡೆದ ಸಮಾರಂಭದಲ್ಲಿ ವಾಲ್ಮೀಕಿ ಪ್ರತಿಮೆಗೆ ಮಾಲಾರ್ಪಣೆ ಮಾಡಿದರು. ನಂತರ ಬಳಿಕ ಸುದ್ದಿಗಾರರ ಜತೆ ಮಾತನಾಡಿ ಅವರು, ಪರಿವರ್ತನೆಯ ಹರಿಕಾರ, ಶ್ರೇಷ್ಠ ಮಾನವತಾವಾದಿ, ರಾಮಾಯಣದ ರಚನಕಾರ, ಇಡೀ ಜಗತ್ತಿಗೆ ದಾರಿದೀಪವಾಗಿರುವ ಮಹರ್ಷಿ ವಾಲ್ಮೀಕಿ ಅವರ ಜಯಂತಿಯನ್ನು ಅತ್ಯಂತ ಅರ್ಥಪೂರ್ಣವಾಗಿ ಆಚರಿಸುತ್ತಿದ್ದೇವೆ ಎಂದರು.

Valmiki Jayanti 2022: ವಾಲ್ಮೀಕಿ ಜಯಂತಿಯ ಇತಿಹಾಸ, ಮಹತ್ವ ಮತ್ತು ಆಚರಣೆಗಳು Valmiki Jayanti 2022: ವಾಲ್ಮೀಕಿ ಜಯಂತಿಯ ಇತಿಹಾಸ, ಮಹತ್ವ ಮತ್ತು ಆಚರಣೆಗಳು

ಸರ್ಕಾರ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ಆಚರಿಸಲು ತೀರ್ಮಾನ ಮಾಡಲಾಗಿದೆ. ಈ ಬಗ್ಗೆ ಸಚಿವ ಸಂಪುಟ ಸಭೆಯಲ್ಲಿ ಮಾಜಿ ಮುಖ್ಯಮಂತ್ರಿ ಬಿ. ಎಸ್. ಯಡಿಯೂರಪ್ಪ ನೇತೃತ್ವದದಲ್ಲಿ ಸಚಿವರಾದ ಶ್ರೀರಾಮುಲು, ಗೋವಿಂದ ಕಾರಜೋಳ ಹಾಗೂ ನಾವು ಇದ್ದ ಸಭೆಯಲ್ಲಿ ನಿರ್ಧರಿಸಲಾಗಿತ್ತು.

ಅಂದಿನಿಂದ ಇಂದಿನವರೆಗೂ ಮಹರ್ಷಿ ವಾಲ್ಮೀಕಿ ಜಯಂತಿಯನ್ನು ನಾಡಿನಾದ್ಯಂತ ವಿಜೃಂಭಣೆಯಿಂದ ಆಚರಿಸಲಾಗುತ್ತಿದೆ. ಮಹರ್ಷಿ ವಾಲ್ಮೀಕಿ ಅವರ ತತ್ವ ಆದರ್ಶಗಳನ್ನು ಸರ್ಕಾರ, ಸಮಾಜ ಪ್ರತಿಯೊಬ್ಬರೂ ಅಳವಡಿಸಿಕೊಳ್ಳಲು ಅಗತ್ಯವಿರುವ ಕಾರ್ಯಕ್ರಮಗಳನ್ನು ನಾವು ರೂಪಿಸುತ್ತಿದ್ದೇವೆ ಎಂದು ತಿಳಿಸಿದರು.

ಮಹರ್ಷಿ ವಾಲ್ಮೀಕಿಯವರ ತತ್ವ, ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳಲಾಗುವುದು. ಮಹರ್ಷಿ ವಾಲ್ಮೀಕಿ ಅವರ ರಾಮಾಯಣ ವಿಶ್ವದ ಹತ್ತು ಶ್ರೇಷ್ಠ ಗ್ರಂಥಗಳಲ್ಲಿ ಶ್ರೇಷ್ಠವಾಗಿದೆ. ರಾಮಾಯಣ ರಚಿಸಿ ಜೀವನದ ಮಾರ್ಗ ಮತ್ತು ಸಾರವನ್ನು ವಾಲ್ಮೀಕಿ ಕೊಟ್ಟಿದ್ದಾರೆ. ರಾಮಾಯಣದ ಎಲ್ಲಾ ಪ್ರಸಂಗಗಳು ಅನುಕರಣೀಯ. ಮುಖ್ಯಮಂತ್ರಿಯಾಗಿ ಮಹರ್ಷಿ ವಾಲ್ಮೀಕಿಯವರ ತತ್ವ, ಆದರ್ಶಗಳನ್ನು ಆಡಳಿತದಲ್ಲಿ ಅಳವಡಿಸಿಕೊಳ್ಳುತ್ತೇವೆ ಎಂದು ತಿಳಿಸಿದರು.

Govt Of Karnataka committed to provide better life to SC and ST peoples says CM

ಸಮಾರಂಭದಲ್ಲಿ ಜಲಸಂಪನ್ಮೂಲ ಸಚಿವ ಗೋವಿಂದ ಕಾರಜೋಳ, ಸಾರಿಗೆ ಖಾತೆ ಸಚಿವ ಬಿ‌. ಶ್ರೀರಾಮುಲು, ವಾಲ್ಮೀಕಿ ಗುರು ಪೀಠದ ಶ್ರೀ ಪ್ರಸನ್ನಾನಂದ ಪುರಿ ಸ್ವಾಮೀಜಿ, ಭೋವಿ ಪೀಠದ ಶ್ರೀ ಸಿದ್ದರಾಮೇಶ್ವರ ಸ್ವಾಮೀಜಿ ಹಾಗೂ ಮತ್ತಿತರರು ಪಾಲ್ಗೊಂಡಿದ್ದರು.

ಬಸವರಾಜ ಬೊಮ್ಮಾಯಿ
Know all about
ಬಸವರಾಜ ಬೊಮ್ಮಾಯಿ
English summary
Karnataka Government is committed to provide better life to SC and ST peoples said chief minister Basavaraj Bommai.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X