Breaking; ಪಿಯು ಕಾಲೇಜು ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ಏರಿಕೆ
ಬೆಂಗಳೂರು, ಜುಲೈ 06; ಕರ್ನಾಟಕ ಸರ್ಕಾರ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರಿಗೆ ಸಿಹಿಸುದ್ದಿ ನೀಡಿದೆ. ಗೌರವ ಸಂಭಾವನೆ ಏರಿಕೆ ಮಾಡಲಾಗಿದೆ.
ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಬಿ. ಸಿ. ನಾಗೇಶ್ ಈ ಕುರಿತು ಟ್ವೀಟ್ ಮೂಲಕ ಮಾಹಿತಿ ನೀಡಿದರು. ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು ಪರಿಷ್ಕರಣೆ ಮಾಡಲಾಗಿದೆ ಎಂದು ಹೇಳಿದ್ದಾರೆ.
ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆ ರೂ. 9,000 ದಿಂದ 12,000 ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ ಎಂದು ಸಚಿವರ ಬಿ. ಸಿ. ನಾಗೇಶ್ ಟ್ವೀಟ್ ಮಾಡಿದ್ದಾರೆ.
ಸರ್ಕಾರಿ ಪಿಯು ಕಾಲೇಜುಗಳ ಅತಿಥಿ ಉಪನ್ಯಾಸಕರ ಗೌರವ ಸಂಭಾವನೆಯನ್ನು 'ಪರಿಷ್ಕರಣೆ' ಮಾಡಲಾಗಿದ್ದು, ₹9,000 ದಿಂದ ₹12,000 ಕ್ಕೆ ಹೆಚ್ಚಳ ಮಾಡಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ.
— B.C Nagesh (@BCNagesh_bjp) July 6, 2022
ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು '3,708 ಅತಿಥಿ ಉಪನ್ಯಾಸಕ'ರ ಸೇವೆಯನ್ನು ಪಡೆಯಲಾಗುತ್ತಿದೆ.@BSBommai
ಪ್ರಸಕ್ತ ಸಾಲಿನಲ್ಲಿ ಉಪನ್ಯಾಸಕರ ಕೊರತೆ ನೀಗಿಸಲು 3,708 ಅತಿಥಿ ಉಪನ್ಯಾಸಕರ ಸೇವೆಯನ್ನು ಪಡೆಯಲಾಗುತ್ತಿದೆ ಎಂದು ಸಚಿವರು ಮಾಹಿತಿ ನೀಡಿದ್ದಾರೆ.

ಶಾಲೆಗಳ ಅತಿಥಿ ಶಿಕ್ಷಕರು; ಜೂನ್ ತಿಂಗಳಿನಲ್ಲಿ ಕರ್ನಾಟಕ ಸರ್ಕಾರ ಸರ್ಕಾರಿ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳ ಅತಿಥಿ ಶಿಕ್ಷಕರ ಗೌರವಧನ ಹೆಚ್ಚಳ ಮಾಡಿತ್ತು. ಸರ್ಕಾರಿ ಪ್ರಾಥಮಿಕ ಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ 2,500 ರೂ. ಹೆಚ್ಚಳ ಮಾಡಲಾಗಿತ್ತು. 7,500 ರೂ. ನಿಂದ 10,000ಕ್ಕೆ ಸಂಭಾವನೆ ಹೆಚ್ಚಳವಾಗಿತ್ತು.
ಸರ್ಕಾರಿ ಪ್ರೌಢಶಾಲಾ ಅತಿಥಿ ಶಿಕ್ಷಕರ ಗೌರವ ಸಂಭಾವನೆ ಸಹ 2,500 ರೂ. ಏರಿಕೆಯಾಗಿತ್ತು. ಪರಿಷ್ಕರಣೆ ಬಳಿಕ ಗೌರವ ಸಂಭಾವನೆ ರೂ. 8000 ದಿಂದ 10,500ಕ್ಕೆ ಏರಿಕೆಯಾಗಿತ್ತು.
ಶಿಕ್ಷಕರ ನೇಮಕಾತಿ; ಅನುದಾನಿತ ಪ್ರೌಢಶಾಲೆಗಳಲ್ಲಿ ನಿವೃತ್ತಿ, ನಿಧನ, ರಾಜೀನಾಮೆ ಹಾಗೂ ಇತರ ಕಾರಣಗಳಿಂದ ತೆರವಾಗಿರುವ ಬೋಧಕ ಹುದ್ದೆಗಳನ್ನು ಭರ್ತಿ ಮಾಡಲು ಕರ್ನಾಟಕ ಸರ್ಕಾರ ಅನುಮತಿ ನೀಡಿದೆ.
ಹೊಸದಾಗಿ ವೇತನಾನುದಾನಕ್ಕೆ ಒಳಪಡಿಸದಂತೆ ಹಾಗೂ ಈಗಾಗಲೇ ವೇತನಾನುದಾನಕ್ಕೆ ಒಳಪಟ್ಟ ಖಾಸಗಿ ಶಿಕ್ಷಣ ಸಂಸ್ಥೆಗಳಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡದಂತೆ ಕೋವಿಡ್ ಸಂದರ್ಭದಲ್ಲಿ ಸೂಚಿಸಲಾಗಿತ್ತು. ಈಗ ಆರ್ಥಿಕ ಇಲಾಖೆ ಒಪ್ಪಿಗೆ ಪಡೆದು ನೇಮಕಾತಿಗೆ ಸೂಚನೆ ನೀಡಲಾಗಿದೆ.
-
Jobs: ರಾಜ್ಯದ ಸರ್ಕಾರಿ ವಿವಿಗಳಲ್ಲಿ 1000 ಬೋಧಕ ಹುದ್ದೆಗಳ ಭರ್ತಿಗೆ ಸರ್ಕಾರ ಗ್ರೀನ್ ಸಿಗ್ನಲ್ -
ಮಾರ್ಚ್ 25ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
ಮಾರ್ಚ್ 24ರಂದು ಬೆಂಗಳೂರು ಸೇರಿ ರಾಜ್ಯದ ಇತರ ಜಿಲ್ಲೆಗಳಲ್ಲಿ ಪೆಟ್ರೋಲ್, ಡೀಸೆಲ್ ದರ ಎಷ್ಟಿದೆ ತಿಳಿಯಿರಿ -
Bengaluru: 50 ವಾರ್ಡ್ಗಳಲ್ಲಿ ಕಸ ವಿಲೇವಾರಿ ಸ್ಥಗಿತ; ವೇತನ ವಿಳಂಬಕ್ಕೆ ಮುನಿದು ಸಾಮೂಹಿಕ ರಜೆ ಹಾಕಿದ ಕಾರ್ಮಿಕರು -
Tamarind Sale: ತುಮಕೂರು ಮಾರುಕಟ್ಟೆಯಲ್ಲಿ ದಾಖಲೆ ಬೆಲೆಗೆ ಮಾರಾಟವಾದ ಹುಣಸೆ ಹಣ್ಣು -
Yami Gautam: ಕನ್ನಡದಲ್ಲೇ ಧುರಂಧರ್ ನಿರ್ದೇಶಕನ ಪತ್ನಿ ಯಾಮಿ ಗೌತಮ್ ಮೊದಲ ಸಿನಿಮಾ, ಸ್ಟಾರ್ ಹೀರೋ ಜೊತೆ ಚೊಚ್ಚಲ ನಟನೆ -
Gold Rate: ಸತತ ಕುಸಿತ ಕಾಣುತ್ತಿರುವ ಬಂಗಾರದ ಬೆಲೆ; ಬೆಂಗಳೂರಿನಲ್ಲಿ ಇಂದಿನ ಚಿನ್ನ, ಬೆಳ್ಳಿ ದರ ಎಷ್ಟು ಗೊತ್ತಾ? -
Gold Price: ಏಪ್ರಿಲ್ನಲ್ಲಿ ಚಿನ್ನದ ದರ ಭವಿಷ್ಯ: ಹೇಗಿರುತ್ತದೆ ಮುಂದಿನ ತಿಂಗಳು ಚಿನ್ನದ ಬೆಲೆ? ವಿಶ್ಲೇಷಣೆ -
ಅಡುಗೆ ಮನೆಗಳಿಗೆ ಇನ್ನು ನೇರ ಗ್ಯಾಸ್ ಸಂಪರ್ಕ: ಪೈಪ್ಲೈನ್ ವಿಸ್ತರಣೆಗೆ ಕೇಂದ್ರದಿಂದ ಹೊಸ ಆದೇಶ ಜಾರಿ -
Gold Rate: ಬೆಂಗಳೂರು ಸೇರಿದಂತೆ ವಿವಿಧ ನಗರಗಳಲ್ಲಿ ಎಷ್ಟಿದೆ 22 ಕ್ಯಾರಟ್ ಚಿನ್ನದ ದರ? -
Love Mocktail 3: ಕ್ರಿಪ್ಟೋಮ್ನೇಶಿಯಾ ಯಾರದ್ದೋ ಕಥೆ ಯಾರದ್ದೋ ಹೆಸರು ರೂಪಾ ರಾವ್ ಬರಹ -
ತಿಂಗಳಿಗೆ 10 ಸಾವಿರ ರೂ. ಥೆರಪಿಗೆ, 3 ಸಾವಿರ ನೇಲ್ ಆರ್ಟ್ಗೆ! ಬೆಂಗಳೂರು ಯುವತಿಯ 'Gen Z’' ಖರ್ಚಿನ ಪಟ್ಟಿ Viral












Click it and Unblock the Notifications