ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking; ಸೇನಾ ಆಯ್ಕೆ ಪೂರ್ವ ತರಬೇತಿಗಾಗಿ 3 ಶಾಲೆ ಸ್ಥಾಪನೆ

|
Google Oneindia Kannada News

ಬೆಂಗಳೂರು, ಜೂನ್ 25; ಕರ್ನಾಟಕ ಸರ್ಕಾರದ ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಮೂರು ಜಿಲ್ಲೆಗಳಲ್ಲಿ ಉಚಿತವಾಗಿ ಸೇನಾ ಆಯ್ಕೆ ಪೂರ್ವ ತರಬೇತಿ ನೀಡಲು ಶಾಲೆಗಳನ್ನು ಆರಂಭಿಸಲಿದೆ.

ಸೇನೆಗೆ ಸೇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಉಚಿತವಾಗಿ ತರಬೇತಿ ನೀಡಲು ಈ ಶಾಲೆಯನ್ನು ಆರಂಭಿಸಲಾಗುತ್ತಿದೆ. ಶಾಲೆ ಆರಂಭಿಸುವ ಕುರಿತು ಈಗಾಗಲೇ ಅಧಿಕೃತ ಆದೇಶ ಹೊರಡಿಸಲಾಗಿದೆ.

ಅಗ್ನಿಪಥ್ ಯೋಜನೆಯಡಿ ವಾಯುಸೇನೆಗೆ ನೇಮಕಾತಿ : ಅರ್ಜಿ ಸಲ್ಲಿಸುವುದು ಹೇಗೆ?ಅಗ್ನಿಪಥ್ ಯೋಜನೆಯಡಿ ವಾಯುಸೇನೆಗೆ ನೇಮಕಾತಿ : ಅರ್ಜಿ ಸಲ್ಲಿಸುವುದು ಹೇಗೆ?

ರಾಜ್ಯದ ಕರಾವಳಿ ಜಿಲ್ಲೆಗಳಾದ ದಕ್ಷಿಣ ಕನ್ನಡ, ಉಡುಪಿ ಮತ್ತು ಉತ್ತರ ಕನ್ನಡ ಜಿಲ್ಲೆಗಳಲ್ಲಿ ಈ ಶಾಲೆಗಳು ಆರಂಭವಾಗಲಿವೆ. ಸೇನಾ ಪೂರ್ವ ಆಯ್ಕೆ ತರಬೇತಿ ಶಾಲೆ ಆರಂಭಿಸುವ ಕುರಿತು ಇಲಾಖೆ ಜೂನ್ 20ರಂದು ಆದೇಶಿಸಿದೆ.

ಅಗ್ನಿಪಥ್: ಅಗ್ನಿವೀರರಿಗೆ ಕಂಪನಿಗಳ ಉದ್ಯೋಗದ ಭರವಸೆಅಗ್ನಿಪಥ್: ಅಗ್ನಿವೀರರಿಗೆ ಕಂಪನಿಗಳ ಉದ್ಯೋಗದ ಭರವಸೆ

Govt of Karnataka To Set Up Three Army Pre Recruitment Training School

ಹಿಂದುಳಿದ ವರ್ಗಗಳ ಅಭ್ಯರ್ಥಿಗಳ ತರಬೇತಿ ವೆಚ್ಚವನ್ನು ಇಲಾಖೆಯಿಂದ ಹಾಗೂ ಪರಿಶಿಷ್ಟ ಜಾತಿಯ ಅಭ್ಯರ್ಥಿಗಳ ತರಬೇತಿ ವೆಚ್ಚವನ್ನು ಸಮಾಜ ಕಲ್ಯಾಣ ಇಲಾಖೆಯಿಂದ ಭರಿಸಲಾಗುತ್ತದೆ. ವಾರ್ಷಿಕ 67.50 ಲಕ್ಷ ವೆಚ್ಚವಾಗಲಿದೆ ಎಂದು ಅಂದಾಜಿಸಲಾಗಿದೆ.

ಅಮೆರಿಕಾದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಭಾರತೀಯ ಸೇನೆ ಸೇರಿದ ಬೆಳ್ತಂಗಡಿ ಯುವಕಅಮೆರಿಕಾದ ಲಕ್ಷಾಂತರ ಸಂಬಳದ ಕೆಲಸ ಬಿಟ್ಟು ಭಾರತೀಯ ಸೇನೆ ಸೇರಿದ ಬೆಳ್ತಂಗಡಿ ಯುವಕ

ಶಾಲೆಗಳ ಹೆಸರು; ವೀರರಾಣಿ ಅಬ್ಬಕ್ಕ ಹೆಸರಿನಲ್ಲಿ ದಕ್ಷಿಣ ಕನ್ನಡದಲ್ಲಿ, ಕೋಟಿ ಚಿನ್ನಯ್ಯ ಹೆಸರಿನಲ್ಲಿ ಉಡುಪಿಯಲ್ಲಿ, ಉತ್ತರ ಕನ್ನಡ ಜಿಲ್ಲೆಯಲ್ಲಿ ಸ್ವಾತಂತ್ರ್ಯ ಹೋರಾಟಗಾರ ಹೆಂಜಾ ನಾಯಕ ಹೆಸರಿನಲ್ಲಿ ತರಬೇತಿ ಶಾಲೆ ಆರಂಭವಾಗಲಿದೆ.

ಈ ಶಾಲೆಗಳ ಪರಿಕಲ್ಪನೆ ಸಮಾಜ ಕಲ್ಯಾಣ ಮತ್ತು ಹಿಂದುಳಿದ ವರ್ಗಗಳ ಕಲ್ಯಾಣ ಇಲಾಖೆ ಸಚಿವ ಕೋಟ ಶ್ರೀನಿವಾಸ ಪೂಜಾರಿ ಅವರದ್ದು. ಸೇನೆಗೆ ಸೇರುವ ಪರಿಶಿಷ್ಟ ಜಾತಿ ಮತ್ತು ಹಿಂದುಳಿದ ವರ್ಗಗಳ ಅಭ್ಯರ್ಥಿಗಳಿಗೆ ಸೂಕ್ತ ತರಬೇತಿ ನೀಡುವುದು ಶಾಲೆಗಳ ಉದ್ದೇಶವಾಗಿದೆ.

ಕರಾವಳಿ ಭಾಗದಿಂದ ಹಲವು ಮಂದಿ ಸೇನೆಗೆ ಸೇರಲು ಬಯಸಿದರೂ ನಾನಾ ಕಾರಣದಿಂದ ವಿಫಲರಾಗುತ್ತಿದ್ದಾರೆ. ಅವರನ್ನು ದೈಹಿಕವಾಗಿ ಮತ್ತು ಲಿಖಿತ ಪರೀಕ್ಷೆಗೆ ತರಬೇತಿಗೊಳಿಸಲು ಶಾಲೆಗಳನ್ನು ಆರಂಭಿಸಲಾಗುತ್ತಿದೆ.

ಈ ಶಾಲೆಗಳಲ್ಲಿ ವಸತಿ ಸಹಿತವಾಗಿ ಸುಮಾರು ನಾಲ್ಕು ತಿಂಗಳ ಕಾಲ ಸಂಪನ್ಮೂಲ ವ್ಯಕ್ತಿಗಳಿಂದ ತರಬೇತಿ ನೀಡಲಾಗುತ್ತದೆ. ಪ್ರತಿ ಶಾಲೆಯಲ್ಲಿ 100 ಅಭ್ಯರ್ಥಿಗಳಿಗೆ ತರಬೇತಿ ನೀಡಲು ಇಲಾಖೆ ಚಿಂತನೆ ನಡೆಸಿದೆ.

English summary
Karnataka Backward Classes Welfare Department (BCWD) will set up three Army pre recruitment training school to train youth belongs to scheduled castes and backward classes
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X