ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

ರಾಜ್ಯದ ಎಲ್ಲಾ ಇಲಾಖೆಗಳ ಹೊರಗುತ್ತಿಗೆ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ.33 ಮೀಸಲಾತಿ

|
Google Oneindia Kannada News

ಬೆಂಗಳೂರು, ಮೇ 21 : ರಾಜ್ಯ ಸರ್ಕಾರದ ಮಹಿಳೆಯರಿಗೆ ಸಿಹಿ ಸುದ್ದಿ ನೀಡಿದ್ದು, ಸರಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನಡೆಯುವ ಹುದ್ದೆಗಳ ನೇಮಕಾತಿಯಲ್ಲಿ ಮಹಿಳೆಯರಿಗೆ ಶೇ. 33ರಷ್ಟು ಮೀಸಲು ನೀಡಿ ಮುಖ್ಯ ಕಾರ್ಯದರ್ಶಿ ಪಿ. ರವಿಕುಮಾರ್ ಆದೇಶ ಹೊರಡಿಸಿದ್ದಾರೆ.

ಸರಕಾರ ಈ ಕುರಿತು ಶುಕ್ರವಾರ ಆದೇಶ ಹೊರಡಿಸಿದ್ದು, ರಾಜ್ಯದ ಸರಕಾರಿ ಕಚೇರಿಗಳಲ್ಲಿ ಹೊರಗುತ್ತಿಗೆ ಆಧಾರದ ಮೇಲೆ ನೇಮಕ ಮಾಡಿಕೊಳ್ಳುವ ವಾಹನ ಚಾಲಕರು, ಡಾಟಾ ಎಂಟ್ರಿ ಆಪರೇಟರ್ ಮತ್ತು ಗ್ರೂಪ್ ಡಿ ಹುದ್ದೆಗಳಲ್ಲಿ ಮಹಿಳಾ ಅಭ್ಯರ್ಥಿಗಳಿಗೆ ಆದ್ಯತೆ ನೀಡಬೇಕು. ಮಹಿಳೆಯರ ಸಬಲೀಕರಣ ಮತ್ತು ಅವರಿಗೆ ಸಾಮಾಜಿಕ ನ್ಯಾಯ, ಸಮಾನ ಉದ್ಯೋಗಾವಕಾಶ ಒದಗಿಸುವ ದೃಷ್ಟಿಯಿಂದ ಶೇ. 33ರಷ್ಟು ನೇರ ನೇಮಕಾತಿ ಹುದ್ದೆಗಳಲ್ಲಿ ನೀಡಲಾಗಿದೆ. ಈ ಬಗ್ಗೆ ಹೊರಗುತ್ತಿಗೆ ಏಜೆನ್ಸಿಗಳೊಂದಿಗೆ ಮಾಡಿಕೊಳ್ಳುವ ಒಪ್ಪಂದದಲ್ಲಿ ಈ ಅಂಶವನ್ನು ಸೇರಿಸಲು ಸಂಬಂಧಪಟ್ಟ ಇಲಾಖೆಗಳು ಕ್ರಮ ಕೈಗೊಳ್ಳಬೇಕೆಂದು ಸೂಚಿಸಲಾಗಿದೆ.

ಬಿಡಿಎ ನೇಮಕಾತಿ; ಜೂನ್ 18ರೊಳಗೆ ಅರ್ಜಿ ಸಲ್ಲಿಸಿಬಿಡಿಎ ನೇಮಕಾತಿ; ಜೂನ್ 18ರೊಳಗೆ ಅರ್ಜಿ ಸಲ್ಲಿಸಿ

ಹೊರಗುತ್ತಿಗೆ ಮುಖಾಂತರ ಪಡೆಯಲಾಗುವ ಸೇವೆಗಳನ್ನು ಮಹಿಳೆಯರು ಕೂಡ ಸಮರ್ಥವಾಗಿ ನಿಬಾಯಿಸಬಲ್ಲರು. ಈ ಕಾರಣದಿಂದ ರಾಜ್ಯ ಸರ್ಕಾರದ ಕಚೇರಿಗಳಲ್ಲಿ ಹೊರಗುತ್ತಿದೆ ಮುಖಾಂತರ ಪಡೆಯಲಾಗುವ ಸೇವೆಗಳಲ್ಲಿ ಮತ್ತು ಹುದ್ದೆಗಳಲ್ಲಿ ಶೇ. 33 ರಷ್ಟು ಹುದ್ದೆಗಳನ್ನು ಮಹಿಳಾ ಅಭ್ಯರ್ಥಿಗಳಿಂದ ಭರ್ತಿ ಮಾಡಿಕೊಳ್ಳುವಂತೆ ಸರಕಾರದ ಎಲ್ಲಾ ಇಲಾಖೆಗಳಿಗೆ ಈ ಮೂಲಕ ಸೂಚನೆಗಳನ್ನು ನೀಡಲಾಗಿದೆ.

Karnataka Govt ordered to reserve 33% quota for women in outsourced govt jobs

ಯಾವ ಸಂಸ್ಥೆಗಳು ಪಾಲಿಸಬೇಕು
ಈ ಸೂಚನೆಯನ್ನು ಸ್ವಾಯತ್ತ ಸಂಸ್ಥೆಗಳು , ವಿಶ್ವ ವಿದ್ಯಾಲಯಗಳು, ಸ್ಥಳೀಯ ಸಂಸ್ಥೆಗಳು ಹಾಗು ಇನ್ನಿತರ ಸರಕಾರಿ ವಲಯದ ಅಂಗ ಸಂಸ್ಥೆಗಳು ಕೂಡ ಈ ಆದೇಶವನ್ನು ಪಾಲಿಸಬೇಕು. ಈ ಸಂಬಂಧ ಎಲ್ಲಾ ಆಡಳಿತ ಇಲಾಖೆಗಳ ಕಾರ್ಯದರ್ಶಿಗಳು ತಮ್ಮ ವ್ಯಾಪ್ತಿಗೆ ಒಳಪಡುವ ಕ್ಷೇತ್ರ ಇಲಾಖೆಗಳು ಮತ್ತು ಸರ್ಕಾರದ ಅಂಗ ಸಂಸ್ಥೆಗಳಿಗೆ ಅಗತ್ಯ ಸೂಚನೆಗಳನ್ನು ನೀಡಬೇಕು. ಇದರಲ್ಲಿ ಯಾವುದೇ ತೊಂದರೆ ಉದ್ಭವಿಸಿದರೆ ಸಂಬಂಧಪಟ್ಟ ಇಲಾಖೆಯ ಕಾರ್ಯದರ್ಶಿಗಳು ಬಗೆಹರಿಸಬೇಕೆಂದು ತಿಳಿಸಿದ್ದಾರೆ.

English summary
Karnataka State government has now made it mandatory to provide 33% reservation to women in services and posts at various government departments and organization.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X