ರಾಜ್ಯದ ಗ್ರಾಮೀಣಾಭಿವೃದ್ಧಿ, ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ರದ್ದು: ಸರ್ಕಾರ ಆದೇಶ
ಬೆಂಗಳೂರು, ಜನವರಿ 16: ರಾಜ್ಯದ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ಹಾಗೂ ನಿಯೋಜನೆಯನ್ನು ರದ್ದು ಪಡಿಸುವ ಕುರಿತು ರಾಜ್ಯ ಕಾಂಗ್ರೆಸ್ ಸರ್ಕಾರ ಮಹತ್ವದ ಆದೇಶ ಹೊರಡಿಸಿದೆ.
ಕರ್ನಾಟಕ ರಾಜ್ಯ ಪಂಚಾಯತಿ ಅಭಿವೃದ್ಧಿ ಅಧಿಕಾರಿಗಳ ಕ್ಷೇಮಾಭಿವೃದ್ಧಿ ಸಂಘ, ಬೆಂಗಳೂರು, ಇವರು, ಉಲ್ಲೇಖ (1) ರಲ್ಲಿ ಮನವಿಯನ್ನು ಸಲ್ಲಿಸಿ, ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ಪಂಚಾಯತಿ ಅಭಿವೃದ್ಧಿ ಅಧಿಕಾರಿ, ಗ್ರಾಮ ಪಂಚಾಯತಿ ಕಾರ್ಯದರ್ಶಿ ಮತ್ತು ದ್ವಿತೀಯ ದರ್ಜೆ ಲೆಕ್ಕ ಸಹಾಯಕರನ್ನು ಸರ್ಕಾರದ ಅನುಮೋದನೆಯಿಲ್ಲದೆ ಜಿಲ್ಲಾ ಪಂಚಾಯಿತಿ ಮುಖ್ಯಕಾರ್ಯನಿರ್ವಾಹಕ ಅಧಿಕಾರಿಗಳು ಮತ್ತು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿಗಳು ತಮ್ಮ ಹಂತದಲ್ಲೆ ಸರ್ಕಾರದ ನಿಯಮಗಳನ್ನು ಉಲ್ಲಂಘಿಸಿ ಮಾಡಿರುವ ವರ್ಗಾವಣೆ/ನಿಯೋಜನೆ ಆದೇಶಗಳನ್ನು ಹಿಂಪಡೆಯುವಂತೆ ಕೋರಿರುತ್ತಾರೆ.

ಉಲ್ಲೇಖ (2) ರ ಸರ್ಕಾರದ ಸುತ್ತೋಲೆಯಲ್ಲಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರ ವರ್ಗಾವಣೆ ನಿಯೋಜನೆಯನ್ನು ಮಾಡಲು ಸರ್ಕಾರದ ಅನುಮೋದನೆ ಪಡೆಯುವುದು ಕಡ್ಡಾಯಗೊಳಿಸಲಾಗಿದ್ದು, ಜಿಲ್ಲಾ ಮತ್ತು ತಾಲ್ಲೂಕು ಹಂತದಲ್ಲಿ ಯಾವುದಾದರೂ ವರ್ಗಾವಣೆ /ನಿಯೋಜನೆ ಪ್ರಸ್ತಾವನೆ ಇದ್ದಲ್ಲಿ ಅಂತಹ ಪ್ರಸ್ತಾವನೆಗಳನ್ನು ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯಲು ಹಾಗೂ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯ ನೌಕರರನ್ನು ಬೇರೆ ಇಲಾಖೆಗಳಿಗೆ ಅಥವಾ ಅನ್ಯ ಕಾರ್ಯನಿಮಿತ್ತ ಯಾವುದೇ ಪ್ರಾಧಿಕಾರದಿಂದ ಬಂದಂತಹ ನಿಯೋಜನೆ ಕೋರಿಕೆಗಳನ್ನು ಕೂಡಾ ಸರ್ಕಾರಕ್ಕೆ ಸಲ್ಲಿಸಿ ಅನುಮೋದನೆ ಪಡೆಯತಕ್ಕದ್ದು ಎಂದು ತಿಳಿಸಲಾಗಿದೆ.
ಇನ್ನೂ ಸದರಿ ಸುತ್ತೋಲೆಯಂತೆ ಕ್ರಮವಹಿಸಲು ತಿಳಿಸಿದ ಹಾಗೂ ಸರ್ಕಾರದ ಅನುಮೋದನೆಯಿಲ್ಲದೆ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯತಿ ಹಂತದಲ್ಲಿ ಮಾಡಿರುವ ನಿಯೋಜನೆ/ವರ್ಗಾವಣೆಯನ್ನು ರದ್ದುಪಡಿಸುವಂತೆ ತಿಳಿಸಿದೆ.
-
ದಾವಣಗೆರೆ ಉಪಚುನಾವಣೆ: ಕಣದಿಂದ ಹಿಂದೆ ಸರಿದ ಬಂಡಾಯ ಅಭ್ಯರ್ಥಿ ಸಾದಿಕ್ ಪೈಲ್ವಾನ್, ಕಾಂಗ್ರೆಸ್ ಬೆಂಬಲಕ್ಕೆ ನಿರ್ಧಾರ -
ಹಿಂದಿ ಹೆಚ್ಚು ಜನ ಮಾತನಾಡುವ ಭಾಷೆ, ವಿದ್ಯಾರ್ಥಿಗಳು ಎಲ್ಲ ಭಾಷೆ ಕಲಿಯಬೇಕು: ಶ್ರೀರಾಮುಲು -
By Election: ಸಿದ್ದರಾಮಯ್ಯರಿಂದ ಅಹಿಂದ ಜೊತೆಗೆ ಗುತ್ತಿಗೆ ರಾಜಕಾರಣ: ಮಾಜಿ ಸಿಎಂ ಗಡುಗು -
ಹಿಂದಿ ರಾಜ್ಯಗಳಲ್ಲಿ ಕನ್ನಡವನ್ನ ಕಡ್ಡಾಯ ಮಾಡಿ: ವಿಜಯೇಂದ್ರಗೆ ನೇರ ಸವಾಲು ಹಾಕಿದ ಕರವೇ ನಾರಾಯಣಗೌಡ -
SSLC ಪರೀಕ್ಷೆ ನಡೆಯುತ್ತಿರುವಾಗಲೇ ಅಂಕ 525ಕ್ಕೆ ಇಳಿಕೆ: ಸರ್ಕಾರದ ವಿರುದ್ಧ ಸುರೇಶ್ ಕುಮಾರ್ ವಾಗ್ದಾಳಿ -
ಬೆಂಗಳೂರಿನ ಪಾನಿಪುರಿ ವ್ಯಾಪಾರಿಯ ತಿಂಗಳ ಸಂಪಾದನೆ ಫುಲ್ Viral: ದಿನಕ್ಕೆ 3 ಸಾವಿರ ರೂ. ಗಳಿಕೆ -
ಪೆಟ್ರೋಲ್ ಬದಲು ಎಥೆನಾಲ್ ಬ್ಲೆಂಡಿಂಗ್ ಮ್ಯಾಜಿಕ್; ಸಂಕಷ್ಟದಲ್ಲಿ ಭಾರತಕ್ಕೆ ನೆರವಾದ ಮೋದಿ ಮಾಸ್ಟರ್ ಪ್ಲ್ಯಾನ್: ಕೃಷ್ಣ ಭಟ್ ಬರಹ -
March 27 Horoscope: ಉದ್ಯೋಗ ಮತ್ತು ಹಣಕಾಸಿನಲ್ಲಿ ದೊಡ್ಡ ಬದಲಾವಣೆ -
Gold Rate: ಆಭರಣ ಪ್ರಿಯರಿಗೆ ಗುಡ್ ನ್ಯೂಸ್: ಮಾರುಕಟ್ಟೆಯಲ್ಲಿಂದು ಕೊಂಚ ಇಳಿಕೆ ಕಂಡ ಚಿನ್ನ, ಬೆಳ್ಳಿ ದರ -
Karnataka Weather: ಬಿಸಿಲಿನ ಬೇಗೆಯ ನಡುವೆ ಕರುನಾಡಿಗೆ ವರುಣನ ತಂಪು: ಎಲ್ಲೆಲ್ಲಿ ಮಳೆ, ಎಲ್ಲೆಲ್ಲಿ ಬಿಸಿಲು? ಇಲ್ಲಿದೆ ವರದಿ -
IPL ಐಪಿಎಲ್ ಫ್ರೀ ಟಿಕೆಟ್ ವಿವಾದ: ವೆಂಕಟೇಶ್ ಪ್ರಸಾದ್ – ಸಿದ್ದರಾಮಯ್ಯ ಭೇಟಿ ಫೋಟೋಗೆ ತೇಜಸ್ವಿ ಸೂರ್ಯ ಕೆಂಡ -
ಬೆಂಗಳೂರಲ್ಲಿ ಸ್ವಚ್ಛತಾ ಅಭಿಯಾನಕ್ಕೆ ಚುರುಕು:12 ಬ್ಲ್ಯಾಕ್ ಸ್ಪಾಟ್ ನಿರ್ಮೂಲನೆ, 35 ಲೋಡ್ ತ್ಯಾಜ್ಯ ತೆರವು












Click it and Unblock the Notifications