ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking : ಪದವಿ ಪೂರ್ವ ವಿದ್ಯಾರ್ಥಿಗಳಿಗೆ ಗುಡ್ ನ್ಯೂಸ್ ಕೊಟ್ಟ ಸರ್ಕಾರ!

|
Google Oneindia Kannada News

ಬೆಂಗಳೂರು, ಜೂನ್ 29: ಹೆಣ್ಣೊಂದು ಕಲಿತರ ಶಾಲೆಯೊಂದು ತೆರೆದಂತೆ ಅನ್ನೋದು ಬಹಳ ಪ್ರಚಲಿತದಲ್ಲಿದ್ದ ಮಾತು. ಹೆಣ್ಣು ಮಕ್ಕಳ ಶಿಕ್ಷಣದ ಮಹತ್ವವನ್ನು ಸಾರುವ ವಿಚಾರವೂ ಹೌದು. ಹೆಣ್ಣು ಮಕ್ಕಳ ಶಿಕ್ಷಣಕ್ಕಾಗಿ ಸರ್ಕಾರ ಕೋಟ್ಯಾಂತರ ಹಣವನ್ನು ಖರ್ಚು ಮಾಡುತ್ತಿದೆ. ಇದೀಗ ಪದವಿ ಪೂರ್ವ ಶಿಕ್ಷಣದಲ್ಲಿಯೂ ಹೆಣ್ಣು ಮಕ್ಕಳಿಗೆ ಗುಡ್ ನ್ಯೂಸ್ ಅನ್ನು ಶಿಕ್ಷಣ ಇಲಾಖೆ ನೀಡಿದೆ.

ಶೈಕ್ಷಣಿಕ ವರ್ಷ 2022-23ನೇ ಸಾಲಿನಿಂದ ಪದವಿ ಪೂರ್ವ ಶಿಕ್ಷಣಕ್ಕೆ ಸೇರುವು ಅಂದರೆ ಪ್ರಥಮ ಪಿಯುಸಿ ಮತ್ತು ದ್ವಿತೀಯ ಪಿಯುಸಿ ಸೇರುವ ವಿದ್ಯಾರ್ಥಿನಿಯ ಸಂಪೂರ್ಣ ಶುಲ್ಕ ವಿನಾಯಿತಿಯನ್ನು ನೀಡಿ ಶಿಕ್ಷಣ ಇಲಾಖೆ ಆದೇಶವನ್ನು ಹೊರಡಿಸಿದೆ.

ಶಿಕ್ಷಣ ಇಲಾಖೆಯ ಆದೇಶದಲ್ಲಿ ಏನಿದೆ; ರಾಜ್ಯದ ಎಲ್ಲಾ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರಥಮ ಹಾಗೂ ದ್ವಿತೀಯ ಪಿಯುಸಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ಉಲ್ಲೇಖ 1ರಲ್ಲಿ ತಿಳಿಸಿರುವಂತೆ 2019-20ನೇ ಸಾಲಿನಿಂದ ರೂ. 456/- ಶುಲ್ಕದಿಂದ ವಿನಾಯಿತಿ ನೀಡಿ ಪ್ರವೇಶ ನೀಡಲು ಆದೇಶಿಸಲಾಗಿತ್ತು. ಕಳೆದ ಎರಡು ವರ್ಷಗಳಿಂದ ಕೇವಲ ಆಯಾ ವರ್ಷಗಳಿಗೆ ಮಾತ್ರ ಸೀಮಿತಿವಾಗಿ ಶುಲ್ಕದಿಂದ ವಿನಾಯಿತಿ ನೀಡಿ ಪ್ರಾಂಶುಪಾಲರ ಖಾತೆಗೆ ಜಮೆ ಮಾಡಲು ಅನುಮತಿ ನೀಡಲಾಗಿತ್ತು.

Govt Orders Exemptions of Girls Students Fees admission to Govt PU Colleges

ಆದರೆ ಉಲ್ಲೇಖ ೨ ಸರ್ಕಾರ ಆದೇಶದಂತೆ 2022-23ನೇ ಶೈಕ್ಷಣಿಕ ಸಾಲಿನಿಂದ ಶಾಶ್ವತವಾಗಿ ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಪ್ರವೇಶ ಪಡೆಯುವ ಸಮಯದಲ್ಲಿ ವಿದ್ಯಾರ್ಥಿನಿಯರಿಗೆ ರೂ. 456/- ಶುಲ್ಕದಿಂದ ಸಂಪೂರ್ಣ ವಿನಾಯಿತಿ ನೀಡಲಾಗಿರುತ್ತದೆ. ಮುಂದುವರೆದು ಶುಲ್ಕ ಮರು ಪಾವತಿಗಾಗಿ ಲೆಕ್ಕ ಶೀರ್ಷಿಕೆ 2202-02-001-0-01 ಉಪ ಶೀರ್ಷಿಕೆ 103 ಅಡಿ ಅನುದಾನವನ್ನು ಸಂಬಂಧಿಸಿದ ಪ್ರಾಂಶುಪಾಲರ ಖಾತೆಗೆ ಖಜಾನೆ -2 ತಂತ್ರಾಂಶದ ಮೂಲ ಬಿಡುಗಡೆಗೊಳಿಸಲು ಅಗತ್ಯ ಕ್ರಮ ಕೈಗೊಳ್ಳಲು ಈ ಮೂಲಕ ಸೂಚಿಸಿದೆ ಎಂದು ಶಿಕ್ಷಣ ಇಲಾಖೆ ಆದೇಶಿಸಿದೆ.

Govt Orders Exemptions of Girls Students Fees admission to Govt PU Colleges

ಇನ್ನು ಸರ್ಕಾರಿ ಪದವಿ ಪೂರ್ವ ಕಾಲೇಜುಗಳಲ್ಲಿ ಶುಲ್ಕ ವಿನಾಯಿತಿ ನೀಡಿರುವ ಬಗ್ಗೆ ಶಾಲಾ ಶಿಕ್ಷಣ ಮತ್ತು ಸಾಕ್ಷರತೆ ಇಲಾಖೆಯ ಸಚಿವ ಬಿಸಿ ನಾಗೇಶ್ ಟ್ವಿಟ್ ಮಾಡಿದ್ದಾರೆ.

Recommended Video

ಶಿವಸೇನೆ ಉರುಳಿಸಲು ಒಂದಾದ ಶಿಂದೆ ಬಣ ಮತ್ತು BJP ಈಗ ಖಾತೆ ಕ್ಯಾತೆಯಿಂದ ದೂರವಾಗ್ತಾರಾ? | Oneindia Kannada

English summary
Karnataka government ordered exemptions of Girls Students Fees who got admission to Govt PU Colleges Tweets Education Minister BC Nagesh.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X