ತ್ವರಿತ ಅಲರ್ಟ್ ಗಳಿಗಾಗಿ
ನೋಟಿಫಿಕೇಷನ್ ಅನುಮತಿಸಿ  
For Daily Alerts
Oneindia App Download

Breaking: ಕಲ್ಯಾಣ ಕರ್ನಾಟಕದಲ್ಲಿ 60 ಸೀಟು ಸಹಿತ ಬಿಎಸ್ಸಿ ಕೋರ್ಸ್ ಆರಂಭ: ಸರ್ಕಾರ ಆದೇಶ

|
Google Oneindia Kannada News

ಬೆಂಗಳೂರು, ಡಿಸೆಂಬರ್ 30: ಕಲ್ಯಾಣ ಕರ್ನಾಟಕದ ಅಭಿವೃದ್ಧಿಗೆ ರಾಜ್ಯ ಸರ್ಕಾರ ಮತ್ತೊಂದು ಕೊಡುಗೆ ನೀಡಿದೆ. ಪ್ರಸಕ್ತ 2022-23ನೇ ಸಾಲಿನಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟುಗಳೊಂದಿಗೆ ಬಿ.ಎಸ್‌ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ಆದೇಶ ಹೊರಡಿಸಲಾಗಿದೆ.

ಆರೋಗ್ಯ ಸಚಿವ ಡಾ.ಕೆ.ಸುಧಾಕರ್ ಅವರು ಈ ಸಂಬಂಧ ಮಾಹಿತಿಯನ್ನು ಟ್ವಿಟ್ ಮೂಲಕ ಹಂಚಿಕೊಂಡಿದ್ದಾರೆ. ಯಾದಗಿರಿಯಲ್ಲಿ 150 ಎಂಬಿಬಿಎಸ್ ಸೀಟುಗಳೊಂದಿಗೆ ನೂತನ ಸರ್ಕಾರಿ ಮೆಡಿಕಲ್ ಕಾಲೇಜಿನ ಆರಂಭಕ್ಕೆ ಇತ್ತೀಚೆಗೆ ರಾಜ್ಯ ಸರ್ಕಾರ ಅನುಮತಿ ನೀಡಿತ್ತು. ಇದೀಗ ಅದರ ಬೆನ್ನಲ್ಲೇ ಪ್ರಸಕ್ತ ಶೈಕ್ಷಣಿಕ ವರ್ಷದಿಂದಲೇ ಬೀದರ್ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯಲ್ಲಿ 60 ಸೀಟು ಸಹಿತ ಬಿ.ಎಸ್‌ಸಿ ನರ್ಸಿಂಗ್ ಕೋರ್ಸ್ ಆರಂಭಿಸಲು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯಕ್ಕೆ ಸರ್ಕಾರ ಅನುಮತಿ ನೀಡಿದೆ.

ಆರೋಗ್ಯ ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯವು ಈ ಹಿಂದೆಯೇ ರಾಜ್ಯ ಸರ್ಕಾರ ಅರ್ಜಿ ಸಲ್ಲಿಸುತ್ತು. ಅದನ್ನು ಪರಿಶೀಲಿಸಿರುವ ಸರ್ಕಾರ ಅನುಮತಿ ನೀಡಿ ಆದೇಶ ಹೊರಡಿಸಿದೆ. ಇದರಿಂದ ಕಲ್ಯಾಣ ಕರ್ನಾಟಕ ಭಾಗದ ವೈದ್ಯಕೀಯ ಕ್ಷೇತ್ರಾಸಕ್ತ ವಿದ್ಯಾರ್ಥಿಗಳ ಕಲಿಕೆ ಅನುಕೂಲವಾಗಲಿದೆ.

Govt Orders Start B.SC Nursing Course with 60 seats In Bidar Medical Science College From 2022-23

ರಾಜ್ಯ ಸರ್ಕಾರ ಆದೇಶದಲ್ಲಿ, ಕೋಸ್‌ಗಳ ಸಂಯೋಜನೆಯನ್ನು ರಾಜೀವ್‌ ಗಾಂಧಿ ಆರೋಗ್ಯ ವಿಜ್ಞಾನ ವಿಶ್ವವಿದ್ಯಾಲಯ ಅನುಮತಿ ಪಡೆಯಬೇಕು. ವಿಶ್ವವಿದ್ಯಾಲಯ ನಿಯಮಾವಳಿಗಳನ್ನು ಪಾಲಿಸಬೇಕು. ವಿಶ್ವವಿದ್ಯಾಲಯ ಅನುಮೋದನೆ ನೀಡಿದ ಬಳಿಕವೇ ಪ್ರವೇಶಾತಿ ಪಡೆಯಬೇಕು, ಒಂದು ವೇಳೆ ಉಲ್ಲಂಘಿಸಿದರೆ ಕ್ರಿಮಿನಲ್ ಮೊಕದ್ದಮೆ ಹಾಕಲಾಗುವುದು. ಸರ್ಕಾರ ಹಾಗೂ ವಿಶ್ವವಿದ್ಯಾಲಯ ಕಾಲಕಾಲಕ್ಕೆ ನೀಡುವ ಸೂಚನೆಗಳನ್ನು ಪಾಲಿಸುವುದು. ನಿಯಮಾವಳಿಗಳ ಪ್ರಕಾರವೇ ಕೋರ್ಸ್‌ಗೆ ಅಭ್ಯರ್ಥಿಗಳನ್ನು ಆಯ್ಕೆ ಮಾಡಬೇಕು ಎಂದು ಸೂಚಿಸಿದೆ.

Govt Orders Start B.SC Nursing Course with 60 seats In Bidar Medical Science College From 2022-23

ಬೀದರ್‌ನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯು ಒಂದು ವೇಳೆ ಸೂಚಿಸಲಾದ ನಿಯಮಗಳನ್ನು ಉಲ್ಲಂಘಿಸಿದ್ದೇ ಆದಲ್ಲಿ ವಿಶ್ವವಿದ್ಯಾಲಯದ ನಿಯಮದಡಿ ನೀಡಲಾದ ಕೋರ್ಸ್‌ ಸಂಯೋಜನೆಯನ್ನು ಹಿಂಪಡೆಲಾಗುವುದು ಎಂದು ಸರ್ಕಾರ ತಿಳಿಸಿದೆ.

English summary
Karnatka Government agreed ofr start BSC Nursing cource with 60 seats in Bidar Medical Scinece college from this 2022-23 academic year.
ತಾಜಾ ಸುದ್ದಿ ತಕ್ಷಣ ಪಡೆಯಿರಿ
Enable
x
Notification Settings X
Time Settings
Done
Clear Notification X
Do you want to clear all the notifications from your inbox?
Settings X